ಬೀದರ್ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್ ಸೇರಿದಂತೆ ವಿವಿಧ ಕಡೆಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗಿದೆ.
ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ಲಾಲ್‌ಸಾಬ್ ಫತ್ರುಸಾಬ್ ಎಂಬುವರಿಗೆ ಸೇರಿದ ಎಮ್ಮೆಯೊಂದು ಸಿಡಿಲಿಗೆ ಬಲಿಯಾದ ಘಟನೆ ವರದಿಯಾಗಿದೆ.
ಜಿಲ್ಲೆಯ ಕೆಲವಡೆ ಬುಧವಾರ ತಡರಾತ್ರಿಯೂ ಮಳೆಯಾಗಿತ್ತು, ಗುರುವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು, ಸಂಜೆ ನಾಲ್ಕು ಗಂಟೆ ಸುಮಾರಿಗೆ ಸುರಿದ ಜಿಟಿ ಜಿಟಿ ಮಳೆಯಿಂದ ಇಳೆ ತಂಪಾಗಿದೆ. ಬೆಂಕಿಯಂತ ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಇದು ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು
ಜಿಲ್ಲೆಯಲ್ಲಿ ಕಳೆದ ವಾರದಿಂದ ಗರಿಷ್ಠ ಬಿಸಿಲು ದಾಖಲಾಗಿತ್ತು, ಇಂದು ಗರಿಷ್ಠ 37, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಬಿಸಲು ದಾಖಲಾಗಿದೆ, ಮುಂದಿನ ಮೂರು ದಿನಗಳು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.