ಮೈಸೂರು | ಬಡಗಲಪುರ ಗ್ರಾಮದಲ್ಲಿ ಯುವಕನ ಮೇಲೆ ಹುಲಿ ದಾಳಿ

Date:

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನ, ಬಡಗಲಪುರ ಗ್ರಾಮದಲ್ಲಿ ಹತ್ತಿ ಕೊಯ್ಲು ಮಾಡುತಿದ್ದ ನಂಜುಂಡಸ್ವಾಮಿಯವರ ಮಗ ಮಹಾದೇವ ಗೌಡ (45) ನ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿದೆ.

- Advertisement -

ಇತ್ತೀಚಿಗೆ ಗ್ರಾಮದ ಸುತ್ತಮುತ್ತ ಹುಲಿಯ ಉಪಟಳ ಹೆಚ್ಚಿದ್ದು, ಸತತ ಎರಡು ತಿಂಗಳಿನಿಂದ ಗ್ರಾಮಸ್ಥರು ಭಯಗೊಂಡಿದ್ದರು. ಅಲ್ಲಲ್ಲಿ ಕಂಡು ಬರುತಿದ್ದು ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಸಾಕಾನೆ ಮೂಲಕ
ಸಿಬ್ಬಂದಿಗಳು ಕೂಂಬಿಂಗ್ ನಡೆಸುತ್ತಿರುವ ವೇಳೆ ಗಾಬರಿಗೊಂಡ ಹುಲಿ ಜಮೀನಿನಲ್ಲಿ ಹತ್ತಿ ಬಿಡಿಸುತಿದ್ದ ಮಹಾದೇವ ಗೌಡನ ಮೇಲೆ ಎರಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖದ ಬಲಭಾಗ, ಮೂಗು, ಕುತ್ತಿಗೆ, ಕಣ್ಣುಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆಯೂ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಅರಣ್ಯ ಇಲಾಖೆಯವರ ನಿರ್ಲಕ್ಷ್ಯ ಈ ದುರ್ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಸ್ಥಳೀಯರಾದ ವೆಂಕಟೇಶ್ ಈದಿನ.ಕಾಮ್ ಜೊತೆ ಮಾತನಾಡಿ ಅರಣ್ಯ ಇಲಾಖೆಯವರ ನಿರ್ಲಕ್ಷ್ಯಕ್ಕೆ ಯುವಕನ ಬದುಕು ಹಾಳಾಗಿದೆ. ಎರಡು ತಿಂಗಳಿಂದ ಹುಲಿ ಕಾಣಿಸಿಕೊಂಡರು ಕಾರ್ಯಚಾರಣೆ ನಡೆಸಲಿಲ್ಲ, ಹುಲಿ ಹಿಡಿಯುವ ಪ್ರಯತ್ನ ಮಾಡಲಿಲ್ಲ. ಮುಂಚೆಯೇ ಎಚ್ಚತ್ತು ಕೊಂಬಿಂಗ್ ನಡೆಸಿದ್ದರೆ ಇಂದು ಇಂತಹ ಘಟನೆ ನಡೆಯುತ್ತಿರಲಿಲ್ಲ.

ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚಿಗೆ ಹುಲಿ, ಚಿರತೆ, ಆನೆ ಉಪಟಳ ಹೆಚ್ಚಿದೆ. ಅರಣ್ಯ ಇಲಾಖೆ, ಜಿಲ್ಲಾಡಳಿತ ಕ್ರಮ ವಹಿಸುತಿಲ್ಲ. ರೈತರು ಜಮೀನು ಕಡೆಗೆ ತೆರಳಲು ಹಿಂಜರೆಯುತ್ತಿದ್ದಾರೆ. ಹೊರಗೆ ಹೋಗಲು ಭಯ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ? ‘ನಮ್ಮೊಳಗಿನ ಬುದ್ಧ ಬೆಳಕನ್ನು ಹುಡುಕಬೇಕು, ಅಂಬೇಡ್ಕರರಂತೆ ಜ್ಞಾನದಾಹಿಗಳಾಗಬೇಕು’; ವಿಶ್ವಶಾಂತಿ ಸಾರಿದ ಬೌದ್ಧ ಮಹಾ ಸಮ್ಮೇಳನ

ಸ್ಥಳಕ್ಕೆ ಗುಂಡ್ರೆ ಅರಣ್ಯ ವಲಯದ ಆರ್ ಎಫ್ ಓ ಅಮೃತೇಶ್, ಹೆಡಿಯಾಲ ಆರ್ ಎಫ್ ಓ ಮುನಿರಾಜು ಹಾಗೂ ಎ ಸಿ ಎಫ್ ಭೇಟಿ ನೀಡಿದ್ದಾರೆ. ಆದರೇ, ಇಂತಹ ಘಟನೆ ನಡೆದ ಮೇಲೆ ಅಧಿಕಾರಿಗಳು ಬಂದು ಏನು ಪ್ರಯೋಜನ, ಅವರ ಮನೆಗೆ ಯಾರು ದಿಕ್ಕು, ಗ್ರಾಮದಲ್ಲಿ ಇನ್ನೆಷ್ಟು ಜನ ಪ್ರಾಣಿಗಳಿಗೆ ಆಹಾರವಾಗಬೇಕು ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...