ಹುಲಿ ಉಗುರು | ಎಫ್‌ಎಸ್‌ಎಲ್ ವರದಿ ಬಳಿಕ ಸಂತೋಷ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ

Date:

ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ತನಿಖೆ ಚುರುಕುಗೊಂಡಿದ್ದು, ಎಫ್‌ಎಸ್‌ಎಲ್‌ ವರದಿಯಲ್ಲಿ ಅವರು ಧರಿಸಿದ್ದ ಉಗುರು ಹುಲಿಯದ್ದೆ ಎಂಬುವುದು ಸಾಬೀತಾದರೆ ಸಂತೋಷ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

- Advertisement -

ತನಿಖಾಧಿಕಾರಿ ಸುರೇಶ್​ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವರ್ತೂರು ಸಂತೋಷ್ ಅವರು ಧರಿಸಿದ ಹುಲಿ ಉಗುರು ನಿಜವಾದದ್ದಾ? ಎಷ್ಟು ವರ್ಷದ ಹುಲಿ ಉಗುರು? ಅದು ಯಾವ ಜಾತಿಯ ಹುಲಿ? ಸೇರಿದಂತೆ ಇನ್ನು ಹಲವು ಮಾಹಿತಿ ಎಫ್‌ಎಸ್‌ಎಲ್‌ ವರದಿಯ ಮೂಲಕ ತಿಳಿದುಬರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಅದು ನಿಜವಾದ ಹುಲಿ ಉಗುರು ಎಂಬುದು ಸಾಬೀತಾದರೆ, ಹುಲಿ ಉಗುರನ್ನು ಸಂತೋಷ್​ಗೆ ನೀಡಿದ್ದು ಯಾರು? ಅವರಿಗೆ ಯಾರು ಮಾರಿದರು? ಇದರ ಮೂಲ ಎಲ್ಲಿ? ಸೇರಿದಂತೆ ಇನ್ನು ಹಲವು ಮಾಹಿತಿಗಳನ್ನು ಕಗ್ಗಲಿಪುರ ಅರಣ್ಯಾಧಿಕಾರಿಗಳು ಕಲೆಹಾಕುತ್ತಿದ್ದಾರೆ.

ಎಫ್​​ಎಸ್​​ಎಲ್​ ವರದಿ ಮತ್ತು ಕಗ್ಗಲಿಪುರ ಅರಣ್ಯಾಧಿಕಾರಿಗಳು ನಡೆಸಿದ ತನಿಖೆಯ ವರದಿಯನ್ನು ಕೇಂದ್ರ ಮತ್ತು ರಾಜ್ಯ ಹುಲಿ ಸಂರಕ್ಷಣಾ ಪ್ರಾಧಿಕಾರಗಳಿಗೆ ನೀಡಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಹುಲಿ ಸಂರಕ್ಷಣಾ ಪ್ರಾಧಿಕಾರ ಈ ವರದಿಗಳನ್ನು ಆಧರಿಸಿ, ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳ ದತ್ತಾಂಶವನ್ನು ಪರಿಶೀಲನೆ ಮಾಡಲಿದ್ದಾರೆ.

ಕರ್ನಾಟಕದ ನಾಗರಹೊಳೆ, ಭದ್ರಾ, ಕಾಳಿ ದಾಂಡೇಲಿಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು, ತಮಿಳುನಾಡಿನ ಅಣ್ಣಾಮಲೈ, ಸತ್ಯಮಂಗಲ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಐದು ವರ್ಷಗಳ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಐದು ವರ್ಷಗಳಲ್ಲಿ ಹುಲಿಗಳನ್ನ ಬೇಟೆಯಾಡಿರುವುದು, ಮೃತ ದೇಹಗಳ ಪತ್ತೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.

ಜಾಮೀನು ಅರ್ಜಿ ವಿಚಾರಣೆ

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.25ರಂದು 2ನೇ ಎಸಿಜೆಎಂ ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ವರ್ತೂರ್ ಸಂತೋಷ್ ಹುಲಿ ಉಗುರು ಧರಿಸಿ‌ದ್ದಕ್ಕೆ ಬಂಧಿಸಲಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋದ 15 ದಿನಕ್ಕೆ ಸಂತೋಷ್‌ರನ್ನು ಅರಣ್ಯಾಧಿಕಾರಿಗಳು ಬಂಧಿಸಿ ಕರೆತಂದಿದ್ದರು. ಭಾನುವಾರ ಸಂಜೆ ಬಿಗ್ ಬಾಸ್ ಮನೆಗೆ ಹೋಗಿ, ಸಂತೋಷ್‌ರನ್ನು ವಶಕ್ಕೆ ಪಡೆಯಲಾಗಿತ್ತು. ನಂತರ ವಿಚಾರಣೆ ನಡೆಸಿ, ಬಂಧಿಸಲಾಗಿತ್ತು.

ಸೋಮವಾರ (ಅ.23) ಕೋರಮಂಗಲದ ಜಡ್ಜ್ ನಿವಾಸದಲ್ಲಿ ಸಂತೋಷ್‌ರನ್ನು ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು. ಆ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ನೀಡಲಾಗಿತ್ತು. ಇದೀಗ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿರುವ ಸಂತೋಷ್‌ಗೆ ವಿಚಾರಣಾಧೀನ ಕೈದಿ ಸಂಖ್ಯೆ 10935 ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉದ್ಯಮಿ ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ; ನಾಲ್ವರ ಬಂಧನ

ಸೆಲೆಬ್ರೆಟಿಗಳಿಗೂ ಬಂದ ಹುಲಿ ಉಗುರು ಸಂಕಷ್ಟ

ವರ್ತೂರು ಸಂತೋಷ್ ಬಂಧನವಾದ ಬೆನ್ನಲ್ಲೆ, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಹಲವು ನಟರು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ.

ಸೆಲಬ್ರೆಟಿಗಳು ಟಿವಿ ಸಂದರ್ಶನ ಸಂದರ್ಭಗಳಲ್ಲಿ ಹುಲಿ ಉಗುರು ಧರಿಸಿಕೊಂಡು ತೆಗೆಸಿಕೊಂಡ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...