ಹುಲಿ ಉಗುರು | ಕಳಸದ ಡಿಆರ್‌ಎಫ್‍ಓ ದರ್ಶನ್ ಅಮಾನತು

Date:

Advertisements

ರಾಜ್ಯದಲ್ಲಿ ಸದ್ಯ ಹುಲಿ ಉಗುರು ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಇದರ ಬೆನ್ನಲ್ಲೇ, ಈ ವಿಚಾರದಲ್ಲಿ ನಟರು, ನಿರ್ಮಾಪಕರು, ರಾಜಕಾರಣಿಗಳ ಹೆಸರು ತಳಕು ಹಾಕಿಕೊಂಡಿತ್ತು. ಅಷ್ಟೇ ಅಲ್ಲದೇ, ವನ್ಯಜೀವಿ ಕಾಯ್ದೆಯ ಬಗ್ಗೆ ಅರಿವು ಇರುವ ಅರಣ್ಯ ಅಧಿಕಾರಿಗಳ ಮೇಲೂ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪ ಕೇಳಿಬಂದಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್‌ಓ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದರ್ಶನ್ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲೂ ಅಧಿಕಾರಿಗೆ ಅರಣ್ಯ ಇಲಾಖೆ ಸೂಚಿಸಿತ್ತು. ಆದರೆ, ಅವರು ತನಿಖೆಗೆ ಹಾಜರಾಗದ ಹಿನ್ನೆಲೆ, ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಡಿ ಆರ್‌ಎಫ್‌ಓ ದರ್ಶನ್ ವಿರುದ್ಧದ ದೂರನ್ನು ಗಂಭೀರವಾಗಿ ಪರಿಗಣಿಸಿದ ಕೊಪ್ಪ ಡಿಎಫ್‌ಓ ನಂದೀಶ್ ಅವರು, ಈ ಸಂಬಂಧ ತನಿಖೆ ನಡೆಸಿ, ದರ್ಶನ್ ಅವರು ಹುಲಿ ಉಗುರು ಪೆಂಡೆಂಟ್ ಧರಿಸಿದ್ದು ಸಾಬೀತಾದ ಹಿನ್ನಲೆ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Advertisements

ಅಧಿಕಾರಿ ವಿರುದ್ಧ ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ವನ್ಯಜೀವಿ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಲಿಖಿತ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮದ್ಯದ ಅಮಲಿನಲ್ಲಿ ದುರ್ವರ್ತನೆ ಪ್ರದರ್ಶಿಸಿದ ಪ್ರಸಾದ್ ಬಿದ್ದಪ್ಪ ಪುತ್ರ, ಪ್ರಕರಣ ದಾಖಲು

ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ಆಲ್ದೂರು ವಲಯ ಅರಣ್ಯಾಧಿಕಾರಿಗೆ ಸಂಬಂಧ ದೂರು ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X