ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

Date:

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್ 1 ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ-2011 ಮತ್ತು ತಿದ್ದುಪಡಿ ಅಧಿನಿಯಮ-2014ರಂತೆ 100ಕ್ಕೂ ಹೆಚ್ಚಿನ ಇಲಾಖೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನಾಗರಿಕರಿಗೆ ನೀಡಲಾಗುತ್ತಿದೆ. ಕಳೆದ ಜೂನ್ ತಿಂಗಳಲ್ಲಿ ಅರ್ಜಿ ವಿಲೇವಾರಿ ಪ್ರಮಾಣ ಶೇ.82.54ರಷ್ಟು ಇದ್ದರೆ, ಪ್ರಸ್ತುತ ನವೆಂಬರ್ ತಿಂಗಳಲ್ಲಿ ಸಲ್ಲಿಕೆಯಾದ 1,02,002 ಅರ್ಜಿಗಳಲ್ಲಿ 1,07,011 ಅರ್ಜಿ ವಿಲೇವಾರಿ ಮಾಡುವ ಮೂಲಕ ಇದರ ಪ್ರಮಾಣ ಶೇ.100.34ಕ್ಕೆ ಹೆಚ್ಚಿಸಿ ಆಡಳಿತಕ್ಕೆ ವೇಗ ನೀಡಲಾಗಿದೆ.

ಒಟ್ಟಾರೆ 2023ರ ಜೂನ್ ನಿಂದ ನವೆಂಬರ್ ವರೆಗೆ ವಿವಿಧ ಇಲಾಖೆಯಡಿ ಸ್ವೀಕೃತ 7,23,259 ಅರ್ಜಿಗಳಲ್ಲಿ 7,25,716 ಅರ್ಜಿ ವಿಲೇವಾರಿಗೊಳಿಸಿದೆ. ಇದರಲ್ಲಿ ಕಂದಾಯ ಇಲಾಖೆಯು ಬಹಪಾಲು ಅಂದರೆ 5,89,786 ಅರ್ಜಿಗಳಲ್ಲಿ 5,93,992 ಅರ್ಜಿ ವಿಲೇವಾರಿ ಮಾಡುವ ಮೂಲಕ ವಿಲೇವಾರಿ ಪ್ರಮಾಣವನ್ನು ಶೇ.79.72 ರಿಂದ ಶೇ.100.71ಕ್ಕೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಲ್ಲೆಯ 11 ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ 371(ಜೆ), ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ವಿವಿಧ ಪಿಂಚಣಿಗಳ ಅರ್ಜಿ ವಿಲೇವಾರಿ ಮಾಡಲಾಗುತ್ತಿದ್ದು, ಕಳೆದ 6 ತಿಂಗಳ ಅವಧಿಯಲ್ಲಿ ಸಲ್ಲಿಕೆಯಾದ 5,30,968 ಅರ್ಜಿಗಳ ಪೈಕಿ ಇದೂವರೆಗೆ 5,14,363 ಅರ್ಜಿ ವಿಲೇ ಮಾಡಿ ಶೇ.96.87 ಸರಾಸರಿ ಪ್ರಗತಿ ಸಾಧಿಸಲಾಗಿರುತ್ತದೆ.

ಒಂದು ವರ್ಷ ಮೀರಿದ ಪ್ರಕರಣ ಬಾಕಿ ಇಲ್ಲ:

ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರ್ ನೇತೃತ್ವದ ಕಂದಾಯ ನ್ಯಾಯಾಲಯಗಳಲ್ಲಿ ಇಂದಿನ ದಿನಕ್ಕೆ ಒಂದು ವರ್ಷ ಮೀರಿದ ಯಾವುದೇ ಪ್ರಕರಣ ಬಾಕಿ ಇಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನಂತೆ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕಂದಾಯ ಇಲಾಖೆಯ ಪ್ರಗತಿ ಚಿತ್ರಣ ವಿವರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು,...

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...