ತಿಪಟೂರು | ತಾಯಿ ಮಗಳ ಮೇಲೆ ಹರಿದ ಬಸ್; ಮೃತದೇಹ ಎತ್ತದಂತೆ ಗ್ರಾಮಸ್ಥರ ಧರಣಿ

Date:

Advertisements

ರಸ್ತೆ ಬದಿಯಲ್ಲಿ ನಡೆದು ಸಾಗುತ್ತಿದ್ದ ತಾಯಿ, ಮಗಳ ಮೇಲೆ ಬಸ್‌ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರಂತರ ಅಪಘಾತಗಳಿಂದ ರೋಸಿ ಹೋಗಿರುವ ಗ್ರಾಮಸ್ಥರು ಶವಗಳನ್ನು ರಸ್ತೆಯಿಂದ ತೆಗೆಯದಂತೆ ಅಧಿಕಾರಿಗಳ ವಿರುದ್ಧ ಧರಣಿ ಕುಳಿತರು.

ಬೈಪಾಸ್ಗೆ ಹೊಂದಿಕೊಂಡಂತಿರುವ ರಾಮಶೆಟ್ಟಿ ಹಳ್ಳಿ ಗ್ರಾಮದ ತಾಯಿ ಕಮಲಮ್ಮ (35), ಮಗಳು ವೀಣಾ (14) ರಸ್ತೆ ಅಪಘಾತದಲ್ಲಿ ಮೃತಪಟ್ಟವರು.

ಸೋಮವಾರ ಬಳಿಗ್ಗೆ 9:50ರ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ತಾಯಿ ಮಗಳ ಹಿಂಬದಿಯಿಂದ ಅತಿ ವೇಗವಾಗಿ ಬರುತ್ತಿದ್ದ ಗಾರ್ಮೆಂಟ್‌ ಮಿನಿ ಬಸ್‌ಗೆ ರಾಮಶೆಟ್ಟಿಹಳ್ಳಿ ಕಡೆಯಿಂದ ಟಿವಿಎಸ್ ಮೊಪೆಡ್ ಗಾಡಿಯಲ್ಲಿ ರೈತನೊಬ್ಬ ದಿಢೀರನೆ ಅಡ್ಡ ಬಂದಿದ್ದಾನೆ. ಟಿವಿಎಸ್ ಸವಾರರನ್ನು ತಪ್ಪಿಸುವ ಸಲುವಾಗಿ ಚಾಲಕ ಬಸ್ಸನ್ನು ಬಲಕ್ಕೆ ತಿರುಗಿಸಿದ್ದಾನೆ. ಇದರಿಂದ ರಸ್ತೆ ಬದಿಯಲ್ಲಿ ನಡೆದು ಬರುತ್ತಿದ್ದ ತಾಯಿ ಮಗಳು ಸಾವಿಗೀಡಾಗಿದ್ದಾರೆ.

Advertisements

ವಿಷಯ ತಿಳಿದ ಪೊಲೀಸರು ಆಗಮಿಸಿ ಸ್ಥಳ ಮಹಜರು ಮಾಡಿ, ಮೃತ ದೇಹವನ್ನು ಸಾಗಿಸಲು ಮುಂದಾದಾಗ ರೊಚ್ಚಿಗೆದ್ದ ಗ್ರಾಮಸ್ಥರು ಮೃತ ದೇಹಗಳನ್ನು ತೆಗೆಯಲು ಬಿಡದೆ ಧರಣಿ ಕೂತರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಕೂಡಲೇ ತಾಲೂಕು ದಂಡಾಧಿಕಾರಿ ಪವನ್ ಕುಮಾರ್ ಮತ್ತು ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರತಿಭಟನಾಕಾರರ ಮನವೊಲಿಸಿ ಪೊಲೀಸ್ ಸಿಬ್ಬಂದಿಗಳ ಕಾವಲಿನಲ್ಲಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ವಿಪರ್ಯಾಸವೆಂದರೆ ಟಿವಿಎಸ್‌ ಮೊಪೆಡ್‌ ಚಾಲಕನೂ ಅಪಘಾತಕ್ಕೀಡಾಗಿ ಕಾಲು ಮುರಿದುಕೊಂಡಿದ್ದಾನೆ. ಈತನನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಅಧಿಕಾರಿ ಕೇಶವ ಪಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಅಂಡರ್ ಪಾಸ್ ಅಥವಾ ಸ್ಕೈ ವಾಕರ್ ನಿರ್ಮಿಸುವಂತೆ ಒತ್ತಾಯಿಸಿದರು. ಸ್ಥಳದಲ್ಲಿ ಬಿಇಓ ಚಂದ್ರಯ್ಯ, ನಗರ ಠಾಣಾ ಇನ್ಸ್ಪೆಕ್ಟರ್ ವೆಂಕಟೇಶ್, ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಿದ್ದರಾಮಯ್ಯ, ಪೊಲೀಸ್ ಸಿಬ್ಬಂದಿ, ಶಿಕ್ಷಣ ಇಲಾಖೆಯ ಕೆಲ ಸಿಬ್ಬಂದಿ ಮತ್ತು ಸಾರ್ವಜನಿಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X