ಪಿಂಚಣಿ ಪಾವತಿ ಬಗ್ಗೆ ಇಂದು ನಮ್ಮ ನೌಕರರು ಕ್ಲಿಷ್ಟಕರ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರ ಜಿಲ್ಲಾ ಮತ್ತು ತಾಲೂಕಿನ ಸದಸ್ಯರು ಹಾಗೂ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ನಮ್ಮ ಹಕ್ಕನ್ನು ಪಡೆಯಬೇಕು ಎಂದು ಬೆಂಗಳೂರಿನ ಕೇಂದ್ರ ಸಮಿತಿ ಅಧ್ಯಕ್ಷ ಬಿ.ಪಿ. ಕುಮಾರಸ್ವಾಮಿ ತಿಳಿಸಿದರು.
ತಿಪಟೂರು ನಗರದ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಕರ್ನಾಟಕ ವಿದ್ಯುತ್ ಶಕ್ತಿ ಮಂಡಳಿ (ಕೆಇಬಿ) ಪಿಂಚಣಿದಾರರ ಸಂಘ ಪ್ರಾದೇಶಿಕ ಸಮಿತಿ ತಿಪಟೂರು ವತಿಯಿಂದ ಹಮ್ಮಿಕೊಂಡಿದ್ದ 2018-25 ನೇ ಸಾಲಿನ ದ್ವಿತೀಯ ವರ್ಷದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ನಿವೃತ್ತ ನೌಕರರು ಒಗ್ಗಟ್ಟಾಗಿ ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು. ಸರ್ಕಾರ ಕೂಡಲೇ ನಮ್ಮ ಪಿಂಚಣಿಯನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಪ್ರಾದೇಶಿಕ ಸಮಿತಿಯಲ್ಲಿ ಕಾರ್ಯನಿರ್ವಹಿಸಿ,ಮರಣ ಹೊಂದಿದ ಸದಸ್ಯರುಗಳಿಗೆ ಶ್ರದ್ಧಾಂಜಲಿ ಅರ್ಪಿಸಿ ಮತ್ತು 80 ವರ್ಷ ತುಂಬಿದ ಹಿರಿಯ ಸದಸ್ಯರುಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಬೆಸ್ಕಾಂ ಡಿವಿಜನ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರಗೌಡ,ಲೆಕ್ಕಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮತ್ತು ಪ್ರಕಾಶ್,ತುಮಕೂರು ವೃತ್ತ ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ,ಪ್ರಾದೇಶಿಕ ಸಮಿತಿ ಅಧ್ಯಕ್ಷ ಶಂಕರಪ್ಪ, ಕಾರ್ಯದರ್ಶಿ ಟಿ.ಆರ್. ಮಂಜುನಾಥ್, ಖಜಾಂಚಿ ಪ್ರಸನ್ನ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಉಪಾಧ್ಯಕ್ಷರಾದ ವೀರಭದ್ರಪ್ಪ, ರಾಜು,ಜಂಟಿ ಕಾರ್ಯದರ್ಶಿ ಶಾಮರಾವ್,ನಿರ್ದೇಶಕರಾದ ತೇಜಮೂರ್ತಿ,ಗಂಗಾಧರ್, ಮಾಜಿ ಕೇಂದ್ರ ಸಮಿತಿ ಸದಸ್ಯರಾದ ರಂಗಯ್ಯ ಹಾಗೂ ಶಂಕರಪ್ಪ ಸೇರಿದಂತೆ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.