ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಹೊನಲು ಬೆಳಕಿನ ಆಹ್ವಾನಿತ ಪುರುಷ ಹಾಗೂ ಮಹಿಳೆಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ರಣರೋಚಕವಾಗಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಕೇರಳ ಪೊಲೀಸ್ ಪುರುಷ ಹಾಗೂ ಮಹಿಳಾ ತಂಡಗಳು ತಿಪಟೂರು ಕಪ್ ಚಾಂಪಿಯನ್ಸ್ ಪಟ್ಟ ಮುಡಿಗೇರಿಸಿಕೊಂಡಿವೆ.
ವಿಜೇತ ತಂಡಗಳಿಗೆ ಕರ್ನಾಟಕ ರಾಜ್ಯ ಯುವಜನ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಚೇತನ್ ಹಾಗೂ ಶಾಸಕ ಕೆ.ಷಡಕ್ಷರಿ,ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು.

ಶಾಸಕ ಕೆ.ಷಡಕ್ಷರಿ ಮಾತನಾಡಿ ನೆನೆಗುದಿಗೆ ಬಿದ್ದಿರುವ ವಾಲಿಬಾಲ್ ಕ್ರೀಡಾಂಗಣ,ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು, ಕರ್ನಾಟಕ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ನಮ್ಮ ಊರಿನವರಾಗಿದ್ದು ತಮ್ಮ ಅಧಿಕಾರ ಅವಧಿಯಲ್ಲಿ ತಿಪಟೂರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿ ಎಂದು ಹೇಳಿದರು.
ಕರ್ನಾಟಕ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಮಾತನಾಡಿ ತಿಪಟೂರು ಯಾವಾಗಲೂ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ,ಕ್ರೀಡಾಕೂಟದಲ್ಲಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ,ನಮ್ಮ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನ ಹೆಚ್ಚಿನ ಪ್ರಮಾಣದಲ್ಲಿ ನೀಡುವ ಪ್ರಯತ್ನ ಮಾಡುವುದಾಗಿ ತಿಳಿಸಿದರು
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಶ್ರೀಧರ್, ಡಾ ವಿವೇಚನ್, ಯುವಕಾಂಗ್ರೇಸ್ ಮುಖಂಡ ನಿಖಿಲ್ ರಾಜಣ್ಣ, ಪಲ್ಲೆಂದ ವಿಜಯ್ ಕುಮಾರ್,ಮಾಜಿ ನಗರಸಭಾ ಉಪಾಧ್ಯಕ್ಷ ಶಿವಪ್ರಸಾದ್, ಒಹಿಲಾ ಗಂಗಾಧರ್,ಲಾಯರ್ ನಂದಕುಮಾರ್,ಸೇರಿದಂತೆ ಅನೇಕರು ಉಪಸ್ಥಿತರಿದರು.
ವರದಿ – ಮಿಥುನ್ ತಿಪಟೂರು
