ಚಿಂತಾಮಣಿ | ಹೋಟೆಲ್ ಒಳಗೆ ನುಗ್ಗಿದ ಟಿಪ್ಪರ್; ಇಬ್ಬರು ಸ್ಥಳದಲ್ಲೇ ಸಾವು

Date:

ಜಲ್ಲಿ ತುಂಬಿದ್ದ ಟಿಪ್ಪರ್ ಒಂದು ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ನಗರದಲ್ಲಿ ಗುರುವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ.

- Advertisement -

ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಶಿವಾನಂದ(60), ಕುಮಾರ್(50) ಮೃತ ದುರ್ದೈವಿಗಳು. ಶಿವಾನಂದ್ ಅವರು ಶ್ರೀ ದರ್ಶಿನಿ ಹೋಟೆಲ್ ನ ಮಾಲೀಕರಾಗಿದ್ದು, ಕುಮಾರ್ ಅಡುಗೆ ಭಟ್ಟರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚಿಂತಾಮಣಿಯಿಂದ ಕೋಲಾರದ ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಒಂದು ಚಿಂತಾಮಣಿ ನಗರದ ಕೋಲಾರ ವೃತ್ತದಲ್ಲಿರುವ ಶ್ರೀ ದರ್ಶಿನಿ ಹೋಟೆಲ್‌ ಒಳಗೆ ವೇಗವಾಗಿ ನುಗ್ಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಹೋಟೆಲ್ ನ ಕ್ಯಾಷಿಯರ್ ಕುರ್ಚಿಯಲ್ಲಿ ಕುಳಿತಿದ್ದ ಶಿವಾನಂದ್ ಮತ್ತು ಪಕ್ಕದಲ್ಲೇ ತರಕಾರಿ ಹೆಚ್ಚುತ್ತಿದ್ದ ಕುಮಾರ್ ಇಬ್ಬರೂ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ವಿನಾಯಕ ನಗರದ 50 ವರ್ಷದ ಶ್ರೀನಿವಾಸಬಾಬು ಕಾಲಿಗೆ ಪೆಟ್ಟುಬಿದ್ದಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹೋಟೆಲ್‌ನಲ್ಲಿದ್ದ ಗ್ರಾಹಕರು ಸೇರಿದಂತೆ ಇತರೆ ಕೆಲಸಗಾರರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ

ಘಟನೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಅಡಿಷನಲ್ ಎಸ್ಪಿ ರಜಾ ಇಮಾಮ್ ಖಾಸಿಂ, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್, ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಭೇಟಿ ನೀಡಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...