ಬಳ್ಳಾರಿ ತಾಲೂಕಿನ ಅಮರಾಪುರ ಗ್ರಾಮದ ಬಳಿ ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ದಾರುಣ ಘಟನೆ ನಡೆದಿದೆ.
ಮಂಗಳವಾರ ಸಂಜೆ ನಡೆದ ದುರ್ಘಟನೆಯಲ್ಲಿ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ನಾಗರಾಜ್ (40) ಹಾಗೂ ಪಾರ್ವತಿ (37) ದಂಪತಿ ಮೃತಪಟ್ಟಿದ್ದಾರೆ.
ನಾಗರಾಜ ಪತ್ನಿ ಹಾಗೂ ಮಗುವಿನೊಂದಿಗೆ ಚೇಳಗುರ್ಕಿ ಗ್ರಾಮದಿಂದ ಬಳ್ಳಾರಿ ಕಡೆಗೆ ವಾಪಾಸ್ ಬರುವ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‍ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ದಂಪತಿ ತಲೆ ಭಾಗದಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡು ಮಗು ಅನಾಥವಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?
ಗಾಯಗೊಂಡ ಎಂಟು ವರ್ಷದ ಗಂಡು ಮಗುವನ್ನು ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.