ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಕಾರಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತ ಮಹಿಳೆ ತೀರ್ಥಹಳ್ಳಿ ಸ್ಟಾರ್ ಟೈಲರ್ ಮಾಲಿಕ ಗಂಗಾಧರ್ ಆಚಾರ್ ಅವರ ಪತ್ನಿ ಮಮತಾ ಆಚಾರ್ ಎಂದು ತಿಳಿದುಬಂದಿದೆ.
ಎಂದಿನಂತೆ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಇವರ ಬೈಕ್‌ಗೆ ಗುದ್ದಿ, ಅವರ ಮೇಲೆಯೆ ಹರಿದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಸ್ಪಷ್ಟ ಚಿತ್ರಣ ಇನ್ನಷ್ಟೇ ತಿಳಿಯಬೇಕಿದೆ. ಹೆಲ್ಮೆಟ್ ಹಾಕಿದ್ದರೂ ಗಂಭೀರವಾಗಿ ಗಾಯಗೊಂಡ ಮಮತಾ ಕಾರಿನಡಿಯಲ್ಲಿಯೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ತೀರ್ಥಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
