ತೀರ್ಥಹಳ್ಳಿ | ಪತ್ರಕರ್ತನ ಮೇಲೆ ಪೊಲೀಸ್ ಅಧಿಕಾರಿಯಿಂದ ದರ್ಪ; ಜಿಲ್ಲಾಡಳಿತಕ್ಕೆ ದೂರು

Date:

ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟ‌ರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ ಸಂದರ್ಭ ವಿಡಿಯೊ ಚಿತ್ರೀಕರಿಸುವಾಗ ಅಶ್ವಥ್ ಗೌಡ ಸಿಬ್ಬಂದಿಗೆ ಸೂಚನೆ ನೀಡಿ, ಬಲವಂತವಾಗಿ ಮೊಬೈಲ್ ಫೋನ್ ಕಿತ್ತುಕೊಂಡು ಠಾಣೆಗೆ ಹೋಗಿದ್ದಾರೆ. ಮೊಬೈಲ್ ಫೋನ್ ಪಡೆಯಲು ಠಾಣೆಗೆ ಹೋದಾಗ ನಿಂದಿಸಿದ್ದಾರೆ. ಇದನ್ನು ಪ್ರಶ್ನಿಸಿದ ಇತರ ಪತ್ರಕರ್ತರ ಜೊತೆಗೂ ದರ್ಪದಿಂದ ವರ್ತಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ತೀರ್ಥಹಳ್ಳಿ ಠಾಣೆಯಲ್ಲಿ ಅಳವಡಿಸಲಾದ ಸಿ.ಸಿ. ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ವರದಿ ನೀಡುವಂತೆ ಡಿವೈಎಸ್‌ಪಿಗೆ ಸೂಚಿಸಿದ್ದೇನೆ. ನಂತರ ಸತ್ಯಾಸತ್ಯತೆ ಆಧರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಪಿ ಮಿಥುನ್‌ಕುಮಾರ್ ಪತ್ರಕರ್ತರಿಗೆ ಭರವಸೆ ನೀಡಿದರು.

WhatsApp Image 2024 08 22 at 2.28.41 PM

ಈ ವೇಳೆ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ಶಿವಕುಮಾರ್, ಪತ್ರಕರ್ತರಾದ ಎನ್. ರವಿಕುಮಾರ್, ವಿ.ಟಿ.ಅರುಣ್. ನಾಗರಾಜ ನೇರಿಗೆ, ಜೇಸುದಾಸ್, ರವಿಕುಮಾರ್ ಟೆಲೆಕ್ಸ್, ಚಂದ್ರಶೇಖರ್ ಶೃಂಗೇರಿ, ವೈದ್ಯನಾಥ, ಹಾಲಸ್ವಾಮಿ, ಹೊನ್ನಾಳಿ ಚಂದ್ರಶೇಖ‌ರ್, ಅಶ್ವಿನಿ ನಾಯಕ್, ಶಿವಾನಂದ ಕರ್ಕಿ, ಹುಚ್ಚರಾಯಪ್ಪ ಹಾಜರಿದ್ದರು.

ಆಗಿದ್ದೇನು?

ತೀರ್ಥಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಸ್ಥಳೀಯ ಪೊಲೀಸರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಪ್ರಜಾವಾಣಿ ಪತ್ರಿಕೆಯ ಅರೆಕಾಲಿಕ ವರದಿಗಾರರಾದ ವಿ.ನಿರಂಜನ್ ಪೊಲೀಸರ ವರ್ತನೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಸಾರ್ವಜನಿಕರೊಂದಿಗೆ ಬಹಿರಂಗವಾಗಿ ಅಸಭ್ಯವಾಗಿ ವರ್ತಿಸಿ, ಅವಾಚ್ಯವಾಗಿ ನಿಂದಿಸಿದ್ದನ್ನು ಸೆರೆ ಹಿಡಿದ ಪತ್ರಕರ್ತ ನಿರಂಜನ್ ಮೇಲೆ ಇನ್ಸ್‌ಪೆಕ್ಟರ್ ಅಶ್ವತ್ಥಗೌಡರಿಂದ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಲ್ಲದೇ, ಹಲ್ಲೆಗೂ ಮುಂದಾಗಿದ್ದಾರೆ.

ಪೊಲೀಸರ ವರ್ತನೆಯನ್ನು ಖಂಡಿಸಿದರೂ ಇದನ್ನು ಪರಿಗಣಿಸದೇ ವಿಡಿಯೋ ಡಿಲೀಟ್‌ ಮಾಡುವಂತೆ ಇನ್ಸ್‌ಪೆಕ್ಟ‌ರ್ ಮತ್ತು ಅವರ ಜೀಪು ಚಾಲಕ ಸಿಬ್ಬಂದಿಯಿಂದ ಬೆದರಿಕೆ ಬಂದಿದೆ. ಅಷ್ಟೇ ಅಲ್ಲದೆ, ಪತ್ರಕರ್ತ ವಿ ನಿರಂಜನ್ ಅವರ ಮೊಬೈಲ್ ಕಸಿದುಕೊಂಡು ಮೊಬೈಲ್ ನಿಂದ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ.

ಅಷ್ಟೇ ಅಲ್ಲದೆ, ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸುವುದಾಗಿ ಇನ್ಸ್‌ಪೆಕ್ಟರ್ ಅಶ್ವತ್ಥಗೌಡ ಬೆದರಿಕೆ ಕೂಡ ಹಾಕಲಾಗಿದೆ. ಈ ದೌರ್ಜನ್ಯ ಖಂಡಿಸಿದ ಪತ್ರಕರ್ತರ ಮೇಲೂ ದೈಹಿಕ ಹಲ್ಲೆಗೂ ಇನ್ಸ್‌ಪೆಕ್ಟರ್ ಅಶ್ವತ್ಥಗೌಡ ಮುಂದಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...