ತೀರ್ಥಹಳ್ಳಿ | ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

Date:

Advertisements

ಭಾನುವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಮನಕಲುಕುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್‌ನಲ್ಲಿ ನಡೆದಿದೆ.

ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಮೃತ ದುರ್ದೈವಿಗಳು. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿಸಲಾಗಿದೆ.

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಇಡಲಾಗಿತ್ತು. ಇದಕ್ಕೆ ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Advertisements

ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೆಕೋಡ್ ಗ್ರಾಮದಲ್ಲಿನ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಒಂದೇ ಕುಟುಂಬದ ನಾಲ್ವರು ಬೆಂಕಿ ಅವಘಡದಲ್ಲಿ ಸಿಲುಕಿದ್ದು, ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕಿದೆ.

ಘಟನಾ ಸ್ಥಳಕ್ಕೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಶಿವಮೊಗ್ಗ ಎಸ್‌ಪಿ ಜಿಕೆ ಮಿಥುನ್ ಕುಮಾರ್ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು.

ಕೌಟುಂಬಿಕ ಸಮಸ್ಯೆ ಹಿನ್ನೆಲೆ, ಮನೆ ಒಳಗೆ ಕಟ್ಟಿಗೆಯಿಂದ ಚಿತೆ ಮಾಡಿಕೊಂಡು ಬೆಂಕಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ?ಬೆಂಗಳೂರು | ಅತ್ತಿಬೆಲೆಯಲ್ಲಿ ಹೊತ್ತಿ ಉರಿದ ಪಟಾಕಿ ಅಂಗಡಿ: 12 ಮಂದಿ ಮೃತ್ಯು

ಪೊಲೀಸ್ ತನಿಖೆ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X