ಮೈಸೂರು | ಸರ್ಕಾರಿ ನೌಕರರ ಆಸ್ತಿ ವಿವರಕ್ಕಾಗಿ ಪೋರ್ಟಲ್ ರೂಪಿಸುವಂತೆ ಒತ್ತಾಯ

Date:

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ‘ ಲೋಕಾಯುಕ್ತ ಸಂಸ್ಥೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಆಸ್ತಿ ವಿವರ ತಿಳಿಯುವಂತೆ ಪೋರ್ಟಲ್ ರೂಪಿಸಬೇಕು, ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ತಹಶೀಲ್ದಾರ್ ರೇಖಾರವರಿಗೆ ಒತ್ತಾಯ ಪತ್ರ ಸಲ್ಲಿಸಿದರು.

- Advertisement -

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್ ಮಾತನಾಡಿ ” ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಪ್ರತಿ ವರ್ಷ ಆಸ್ತಿ ವಿವರವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿಯಮ ಇದೆ. ಅಧಿಕಾರಿಗಳು, ನೌಕರರ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಲೋಕಾಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು, ಇದರಿಂದ ಪಾರದರ್ಶಕ ಆಡಳಿತಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನೆರವಾಗುತ್ತದೆ. ಅಧಿಕಾರಿಗಳು, ನೌಕರರ ಆಸ್ತಿ ವಿವರ, ವರ್ಷವಾರು ಗಳಿಕೆ ಕ್ರೂಡಿಕರಿಸಿದರೆ ಸುಲಭವಾಗಿ ಆಡಳಿತ ಸುಧಾರಣೆ ತರಲು ಸುಲಭವಾಗುತ್ತದೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

” ಮದ್ರಾ ಸ್ ಹೈಕೊಟ್೯ ನ್ಯಾಯಮೂರ್ತಿ ಸಿ ವಿ ಕಾರ್ತಿಕೇಯನ್ ಅವರು ಸರ್ಕಾರಿ ನೌಕರರ ಆಸ್ತಿ ವಿವರ ಸಾರ್ವಜನಿಕ ಮಾಹಿತಿ ಎಂದು ತೀರ್ಪು ನೀಡಿದ್ದಾರೆ. ಸರ್ಕಾರಿ ಉದ್ಯೋಗಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತೆ ವ್ಯವಸ್ಥೆಯನ್ನು ರೂಪಿಸಿ ಮಾರ್ಚ್ ಅಂತ್ಯದೊಳಗೆ ವಿವರ ಅಪಲೋಡ್ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಇದರಿಂದ ಲಂಚ ಪಡೆಯುವ ಭ್ರಷ್ಟರ ಸಂಖ್ಯೆ ಇಳಿಮುಖವಾಗಲಿದೆ ” ಎಂದರು.

ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ ” ಆಸ್ತಿ ಬಹಿರಂಗ ಅತ್ಯಗತ್ಯವಾಗಿದೆ. ಸರಕಾರಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು ಎಂಬ ಸದುದ್ದೇಶದಿಂದ ನೌಕರರು ತಮ್ಮ ಆಸ್ತಿ ವಿವರ ನೀಡುವುದು ಕಡ್ಡಾಯವಾಗಿದೆ. ಆದರೆ, ಲೋಕಾಯುಕ್ತ ಅಧಿಕಾರಿಗಳು ಮನವಿ ಮಾಡಿದರೂ ಆಯಾ ಇಲಾಖೆಯ ಮುಖ್ಯಸ್ಥರು ಮಾಹಿತಿ ನೀಡದೇ ಗೌಪ್ಯವಾಗಿರಿಸಿರುವುದು ಸರಿಯಲ್ಲ ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲಾಧಿಕಾರಿ ಭೇಟಿ ಮಾಡಿ ಕೆಎಸ್ಐಸಿ ಉಳಿಸುವಂತೆ ಮನವಿ ಮಾಡಿದ ದಸಂಸ

ಭಾರತೀಯ ಗ್ರಾಹಕ ಪಂಚಾಯತ್ ನ ಅಖಿಲ, ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಮಿತ್ ಕುಮಾರ್ ಒತ್ತಾಯ ಪತ್ರ ಸಲ್ಲಿಸುವಾಗ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...