ಈದಿನ ಫಲಶೃತಿ | ಗಾರ್ಡ್ ಗದ್ದೆ ಸರ್ಕಾರಿ ಶಾಲೆಗೆ ಬಿಇಒ ಭೇಟಿ, ಹಳೆ ವಿದ್ಯಾರ್ಥಿಯಿಂದ ನೆರವು

Date:

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಗಾರ್ಡ್ ಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಕುರಿತು ಪ್ರಕಟಿಸಿದ್ದ ವರದಿಗೆ ಸ್ಪಂದಿಸಿರುವ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

- Advertisement -

‘ಈದಿನ ಡಾಟ್ ಕಾಮ್’ ನಿನ್ನೆ (ಜೂನ್ 30) “ಗಾರ್ಡ್ ಗದ್ದೆಯ ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ; ವಿದ್ಯಾರ್ಥಿಗಳ ಗೋಳು ಕೇಳೋರು ಯಾರು?” ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1001826849

ಇಂದು ತಾಲೂಕು ಶಿಕ್ಷಣಾಧಿಕಾರಿ ಗಣೇಶ್, ಶಾಲೆಗೆ ಭೇಟಿ ನೀಡಿ ಪ್ರಸ್ತುತ ಪರಿಸ್ಥಿತಿ ಪರಿಶೀಲಿಸಿ, ಸಂಬಂಧಿತ ಇಲಾಖೆಗಳಿಗೆ ವರದಿ ಸಲ್ಲಿಸಿದ್ದಾರೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ (SDMC) ಅಧ್ಯಕ್ಷ ಗಿರೀಶ್ ತಿಳಿಸಿದರು. ಜೊತೆಗೆ ಶಾಲಾ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಾದಿಕ್ ಕೂಡ ಶಾಲೆಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳ ಅರಿವು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ವರದಿ ನೋಡಿ ಸ್ಪೂರ್ತಿಗೊಂಡ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಮಾಜಿ ಸೈನಿಕ ಶಿರೂರ್ ಪ್ರದೀಪ್ ಸಹ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ʼವಿದ್ಯಾರ್ಥಿ ಜೀವನದ ಮಹತ್ವʼದ ಕುರಿತು ಮಾರ್ಗದರ್ಶನ ನೀಡಿರುವ ಜೊತೆಗೆ ತಮ್ಮಿಂದ ಸಾಧ್ಯವಾದಷ್ಟು ಹಣದ ನೆರವನ್ನು ಒದಗಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೀರ್ಥಹಳ್ಳಿ | ಗಾರ್ಡ್ ಗದ್ದೆಯ ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ; ವಿದ್ಯಾರ್ಥಿಗಳ ಗೋಳು ಕೇಳೋರು ಯಾರು?

WhatsApp Image 2025 07 01 at 1.06.42 PM

ಹಲವರು ಮುಂದಿನ ದಿನಗಳಲ್ಲಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈದಿನಕ್ಕೆ ಧನ್ಯವಾದ ತಿಳಿಸಿದ ಎಸ್‌ಡಿಎಂಸಿ ಅಧ್ಯಕ್ಷ ಗಿರೀಶ್, ʼಈ ಬೆಳವಣಿಗೆಯ ಮೂಲಕ ಶಾಲೆಯ ಭವಿಷ್ಯ ಸುಧಾರಿಸಲು ಹಲವರು ಮುಂದಾಗುತ್ತಿದ್ದಾರೆ ಎಂಬುದು ಖುಷಿಯ ಸಂಗತಿʼ ಎಂದು ಸಂತಸ ವ್ಯಕ್ತಪಡಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...