ಈದಿನ ಫಲಶೃತಿ | ಪುಟ್ಟ ಕಂದನ ಮೇಲೆ ಹಲ್ಲೆ ಪ್ರಕರಣ; ಮನೆಗೆ ಬಿಇಒ ಭೇಟಿ, ಕ್ರಮದ ಭರವಸೆ

Date:

ಶಿವಮೊಗ್ಗದ ಶಾಲೆಯೊಂದರಲ್ಲಿ ಎರಡು ವರ್ಷದ ಪುಟ್ಟ ಮಗುವಿಗೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸಂಬಂಧ ಮೇಲಧಿಕಾರಿಗಳಿಂದ ಸ್ಪಂದನೆ ಸಿಕ್ಕಿದ್ದು, ಮಗುವನ್ನು ಹಾಗೂ ಪೋಷಕರನ್ನು ಭೇಟಿ ಮಾಡಿರುವ ಬಿಇಒ ರಮೇಶ್ ನಾಯ್ಕ್ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

- Advertisement -

ಘಟನೆ ಕುರಿತು ಈ ದಿನ ಡಾಟ್‌ ಕಾಂ “ಶಿವಮೊಗ್ಗ | ಶಿಕ್ಷಣ ಸಚಿವರ ತವರಲ್ಲೇ ಪುಟ್ಟ ಕಂದನ ಮೇಲೆ ಹಲ್ಲೆ; ಶಾಲೆ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವರೇ?” ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿಯಾದ ಕೆಲವೇ ಗಂಟೆಗಳಲ್ಲಿ ಎಚ್ಚೆತ್ತ ಶಿವಮೊಗ್ಗ ಜಿಲ್ಲಾ ಪಂಚಾಯತ್‌ ಸಿಇಒ ಹೇಮಂತ್‌ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಗುವಿನ ಮನೆಗೆ ಭೇಟಿ ಮಾಡಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು. ಅದರಂತೆ ಇಂದು ಬಿಇಒ ರಮೇಶ್‌ ನಾಯ್ಕ್‌ ಮಗುವಿನ ಪೋಷಕರನ್ನು ಭೇಟಿ ಮಾಡಿ ಘಟನೆಯ ಮಾಹಿತಿ ಪಡೆದುಕೊಂಡು, ಶಾಲೆಗೆ ನೊಟೀಸ್‌ ನೀಡಿ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹಾಗೂ ವರದಿ ಪ್ರಕಟಿಸಿದ ಈದಿನ ಮಾಧ್ಯಮಕ್ಕೆ ಯಾವುದೇ ರೀತಿಯ ಸಹಕಾರ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1001723863

1001723866

ವರದಿ ಪ್ರಕಟವಾದ ಬೆನ್ನಲ್ಲೇ ಮಗುವಿನ ಪೋಷಕರು ಈದಿನಗೆ ಕರೆ ಮಾಡಿ, “ಬೆದರಿಕೆ ಬರುತ್ತಿದೆ, ಶಾಲೆಯವರು ಕ್ಷಮೆ ಕೇಳುತ್ತಾರೆ ಜೊತೆಗೆ ತೊಂದರೆ ಆಗಲಿದೆ ಎನ್ನುತ್ತಾರೆ ಹೀಗಾಗಿ ಸುದ್ದಿ ಡಿಲೀಟ್ ಮಾಡಿ” ಎಂದು ಮನವಿ ಮಾಡಿಕೊಂಡಿದ್ದರು.

ಈ ಕುರಿತು ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಸಚಿವರು ಸಂತ್ರಸ್ತ ಮಗು ಹಾಗೂ ಕುಟುಂಬಸ್ಥರಿಗೆ ಸೂಕ್ತ ರಕ್ಷಣೆ ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ನಿಯಮ ರೂಪಿಸಬೇಕಾಗಿದೆ.

ಇದನ್ನೂ ಓದಿ: ಬೀದರ್‌ | ಈದಿನ ವರದಿ ಫಲಶೃತಿ : ತೊಗರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...