ಮೈಸೂರು | ವರ್ತಕರು ಗ್ರಾಹಕರಿಗೆ ಉತ್ತಮವಾದ, ಗುಣಮಟ್ಟದ ಆಹಾರ ನೀಡಿ: ಡಾ ಟಿ ರವಿಕುಮಾರ್

Date:

ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಈಡಿಗರ ಸಮುದಾಯ ಭವನದಲ್ಲಿ ,ಆಹಾರ ಸುರಕ್ಷತೆ ಮತ್ತು ಗುಣ ಮಟ್ಟ ಪ್ರಾಧಿಕಾರ, ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳ ಕಚೇರಿ ವತಿಯಿಂದ ವರ್ತಕರಿಗೆ ಮತ್ತು ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ , ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ‘ವರ್ತಕರು ಗ್ರಾಹಕರಿಗೆ ಗುಣ ಮಟ್ಟದ ಆಹಾರವನ್ನು ನೀಡಬೇಕು, ಯಾವುದೇ ರೀತಿಯ ಕಲಬೆರಕೆ ಆಹಾರವನ್ನು ನೀಡಬಾರದು. ಕಡ್ಡಾಯವಾಗಿ ಎಫ್ಎಸ್ಎಸ್ಎ ಪರವಾನಿಗೆಯನ್ನು ಮಾಡಿಸಿಕೊಳ್ಳಬೇಕು’ ಎಂದರು.

- Advertisement -

“ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 (FSS Act, 2006) ಭಾರತದಲ್ಲಿ ಆಹಾರದ ಸುರಕ್ಷತೆ, ಗುಣಮಟ್ಟ, ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಆಮದುಗಳನ್ನು ನಿಯಂತ್ರಿಸುವ ಪ್ರಮುಖ ಶಾಸನವಾಗಿದೆ. ಇದು ಗ್ರಾಹಕರಿಗೆ ಸುರಕ್ಷಿತ ಆಹಾರವನ್ನು ಖಚಿತಪಡಿಸಿಕೊಳ್ಳಲು ವಿಜ್ಞಾನ ಆಧಾರಿತ ಮಾನದಂಡಗಳನ್ನು ರೂಪಿಸುತ್ತದೆ. ಈ ಕಾಯ್ದೆಯು FSSAI (ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ)ವನ್ನು ಸ್ಥಾಪಿಸಿತು ಮತ್ತು ಹಳೆಯ ಆಹಾರ ಕಾನೂನುಗಳನ್ನು ಕ್ರೋಢೀಕರಿಸಿತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆಹಾರಕ್ಕೆ ಸಂಬಂಧಿಸಿದ ಮಾನದಂಡಗಳನ್ನು ನಿಗದಿಪಡಿಸಲು ಮತ್ತು ಮೇಲ್ವಿಚಾರಣೆ ಮಾಡಲು FSSAI (Food Safety and Standards Authority of India)ನ್ನು ಸ್ಥಾಪಿಸಲಾಯಿತು. ಈ ಕಾಯ್ದೆಯು ಭಾರತದಾದ್ಯಂತ ಅನ್ವಯಿಸುತ್ತದೆ. ಪ್ರತಿಯೊಬ್ಬ ಆಹಾರ ವ್ಯಾಪಾರಿ (FBO) ತನ್ನ ವ್ಯವಹಾರದ ಗಾತ್ರಕ್ಕೆ ಅನುಗುಣವಾಗಿ ಪರವಾನಗಿ (License) ಅಥವಾ ನೋಂದಣಿ (Registration) ಪಡೆಯುವುದು ಕಡ್ಡಾಯವಾಗಿದೆ.

ಆಹಾರ ವಸ್ತುಗಳ ತಯಾರಿಕೆ, ಪ್ಯಾಕೇಜಿಂಗ್ ಮತ್ತು ಲೇಬಲಿಂಗ್‌ಗಾಗಿ ವಿಜ್ಞಾನ ಆಧಾರಿತ ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಆಹಾರದಲ್ಲಿ ಕಲಬೆರಕೆ ತಡೆಗಟ್ಟಲು, ಕಲುಷಿತ ಆಹಾರವನ್ನು ನಿಯಂತ್ರಿಸಲು ಮತ್ತು ಸುರಕ್ಷಿತ ಆಹಾರದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಿನ ನಿಬಂಧನೆಗಳಿವೆ.

ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದರೆ, ವಿಶೇಷವಾಗಿ ಕಲಬೆರಕೆ ಆಹಾರ ಮಾರಾಟ ಮಾಡಿದರೆ ₹2 ಲಕ್ಷ ರೂಪಾಯಿವರೆಗಿನ ದಂಡ ಅಥವಾ ಜೈಲು ಶಿಕ್ಷೆಯಾಗಬಹುದು. ಆಹಾರದ ಪದಾರ್ಥಗಳ ವಿವರ, ಪೌಷ್ಟಿಕಾಂಶದ ಮಾಹಿತಿ ಮತ್ತು ಅಲರ್ಜಿನ್ ಎಚ್ಚರಿಕೆಗಳನ್ನು ಲೇಬಲ್‌ನಲ್ಲಿ ನೀಡುವುದು ಕಡ್ಡಾಯ. ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಮತ್ತು ಮಾದರಿಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಇದು ಗ್ರಾಹಕರ ಆರೋಗ್ಯವನ್ನು ರಕ್ಷಿಸಲು ಮತ್ತು ಆಹಾರ ಉದ್ಯಮದಲ್ಲಿ ಜವಾಬ್ದಾರಿಯನ್ನು ಉತ್ತೇಜಿಸಲು ಇರುವ ಸಮಗ್ರ ಕಾನೂನಾಗಿದೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಯುವಜನತೆ ರಾಜಕೀಯ ಆಸಕ್ತಿ ಬೆಳೆಸಿಕೊಳ್ಳಬೇಕು; ಪ್ರಾತಿನಿಧ್ಯ ಒತ್ತಾಯವಾಗಬೇಕು: ಎಚ್ ಎಸ್ ಅನುಪಮ

ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ ಸ್ವಾಮಿ, ವೈದ್ಯಾಧಿಕಾರಿ ಡಾ. ಪಾರ್ಥಸಾರಥಿ, ತರಬೇತಿದಾರ ಯಶ್ವಂತ್ ಅರುಣ್, ರಾಘವೇಂದ್ರ ಶೆಟ್ಟಿ, ರಶ್ಮಿ, ಶರಣಪ್ಪ, ರವಿರಾಜ್, ಜಗದೀಶ್, ಮಹದೇವ್ ರಾಜಶೇಖರ, ಅಭಿಲಾಶ್, ಬಸವರಾಜು ಸೇರಿದಂತೆ ವರ್ತಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...