ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.

- Advertisement -

ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಈದಿನ ಡಾಟ್ ಕಾಮ್ ಜೊತೆಗೆ ಮಾತನಾಡಿದ ತಹಶೀಲ್ದಾರ್ ಅರ್ಚನಾ ಡಿ.ಭಟ್, “ಮುಂದಿನ ದಿನಗಳಲ್ಲಿ ಅನಾಹುತ ಆಗಬಾರದೆಂಬ ನಿಟ್ಟಿನಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಸೇತುವೆಯ ಧಾರಣಾ ಸಾಮರ್ಥ್ಯದ ಬಗ್ಗೆ ತಾಲೂಕು ಆಡಳಿತಕ್ಕೆ ಸಂಬಂಧಪಟ್ಟ ಇಂಜಿನಿಯರ್‌ಗಳಿಂದ ವರದಿ ಕೇಳಿದ್ದೆವು. ಆದರೆ ಈ ಬಗ್ಗೆ ಇನ್ನೂ ವರದಿ ಬಂದಿಲ್ಲ. ವರದಿ ಬಂದ ಬಳಿಕ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಂಚಾರ ನಿಷೇಧಿಸಿ ಆದೇಶ ಹೊರಡಿಸುವ ಬಗ್ಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲೂ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

panemnaglore

ಪಾಣೆಮಂಗಳೂರು ಹಳೆ ಸೇತುವೆಯ ಹಿನ್ನೆಲೆ

ಪಾಣೆಮಂಗಳೂರು ಹಳೆ ಸೇತುವೆಯು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಯ ಮೇಲೆ ನಿರ್ಮಿತವಾದ ಬ್ರಿಟೀಷರ ಕಾಲದ ಒಂದು ಐತಿಹಾಸಿಕ ಸೇತುವೆಯಾಗಿದೆ. ಈ ಸೇತುವೆಯು ಪಾಣೆಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ಸ್ಥಳೀಯರಿಗೆ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

WhatsApp Image 2025 06 11 at 2.01.33 PM

ಪಾಣೆಮಂಗಳೂರಿನ ಉಕ್ಕಿನ ಸೇತುವೆ 111 ವರ್ಷವನ್ನು ಪೂರೈಸಿದ್ದು, ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಸೇತುವೆ ಎನ್ನುವ ಹೆಗ್ಗಳಿಕೆಯೂ ಇದಕ್ಕಿದೆ. ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡು ಇತಿಹಾಸದ ಕೊಂಡಿಯಾಗಿರುವ ಈ ಸೇತುವೆಯನ್ನು ಐತಿಹಾಸಿಕ ಸ್ಮಾರಕವಾಗಿ ರಕ್ಷಿಸಬೇಕು ಎನ್ನುವ ಬೇಡಿಕೆಯೂ ಇಲ್ಲಿನ ಜನರದ್ದು. ಈ ಸೇತುವೆಯಲ್ಲಿ ಘನವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ನಿಷೇಧಿಸಿದ್ದರೂ ಪಾಣೆಮಂಗಳೂರಿಗೆ ಸರಕು ಹೊತ್ತು ತರುತ್ತಿದ್ದ ಲಾರಿಗಳ ಸಂಚಾರ ನಿರಾತಂಕವಾಗಿ ಮುಂದುವರಿದಿತ್ತು. ಸೇತುವೆಯಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಎಚ್ಚೆತ್ತುಕೊಂಡ ಬಂಟ್ವಾಳ ಪುರಸಭೆಯ ಅಧಿಕಾರಿಗಳು, ಸೇತುವೆಯ ಎರಡೂ ಪಾರ್ಶ್ವಗಳಲ್ಲಿ ಘನ ವಾಹನಗಳು ಪ್ರವೇಶಿಸದಂತೆ ತಡೆಬೇಲಿ ನಿರ್ಮಿಸಿದ್ದರು. ಆದರೆ, ಕೆಲ ತಿಂಗಳುಗಳ ಹಿಂದೆ ಘನವಾಹನವೊಂದು ತಡೆಬೇಲಿಯನ್ನು ಗಮನಿಸದೆ ನೇರವಾಗಿ ನುಗ್ಗಿಸಿದ್ದರಿಂದ ತಡೆಬೇಲಿ ಹಿಗ್ಗಿ ಸೇತುವೆಯ ರಕ್ಷಣೆಗಿದ್ದ ಬೇಲಿಗೂ ಹಾನಿಯುಂಟಾಗಿತ್ತು.

ಪಾಣೆಮಂಗಳೂರು

ಪಾಣೆಮಂಗಳೂರು ಒಳಪೇಟೆ, ಶಂಭೂರು, ಬಂಟ್ವಾಳ ಒಳಪೇಟೆ, ನಂದಾವರ, ಸಜಿಪ, ಮೆಲ್ಕಾರ್, ಬೋಳಂಗಡಿ ಮತ್ತಿತರ ಭಾಗಗಳಿಂದ ಬರುವ ಜನರು ಈಗಲೂ ಪಾಣೆಮಂಗಳೂರಿನ ಈ ಹಳೆಯ ಉಕ್ಕಿನ ಸೇತುವೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಸದ್ಯ ತಹಶೀಲ್ದಾರ್ ನಿಷೇಧ ಹೇರಿರುವುದರಿಂದ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...