ಬೀದರ್‌ | ಅಕ್ರಮ ಗಾಂಜಾ ಸಾಗಾಟ; ಆರೋಪಿಗಳ ಬಂಧನ

Date:

ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ 25.65 ಕೆಜಿ ಗಾಂಜಾ ಹಾಗೂ 3 ಲಕ್ಷ ಮೌಲ್ಯದ ಟಾಟಾ ಇಂಡಿಕಾ ವಿಸ್ಟಾ ಕಾರು ವಶಕ್ಕೆ ಪಡೆಯಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಬೀದರನ ಗುನ್ನಳ್ಳಿ ರಸ್ತೆ ಬಳಿಯ ರಿಕ್ಷಾ ಕಾಲೋನಿಯ ಮನೆಯೊಂದರಲ್ಲಿ ಗಾಂಜಾ ಶೇಖರಣೆ ಮಾಡಿ ಇಟ್ಟಿರುವುದಾಗಿ ತಿಳಿದು ಬಂದ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಿ ಶೋಧನೆ ಮಾಡಿದಾಗ ಅಲ್ಲಿಯೂ ಸಹ ಶೇಖರಣೆ ಮಾಡಿಟ್ಟಿರುವ 21.40 ಲಕ್ಷ ರೂ ಮೌಲ್ಯದ 21.44 ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ ಈ ಗಾಂಜಾವನ್ನು ಕಾವಲು ಕಾಯುತ್ತಿದ್ದ ಓರ್ವ ಆರೋಪಿಯನ್ನು ಸಹ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 47.05 ಲಕ್ಷ ರೂ. ಮೌಲ್ಯದ 47.09 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ” ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರೋಪಿಗಳು ಖಾನಾಪೂರ ಗ್ರಾಮದಲ್ಲಿ ಈ ಹಿಂದೆ ನಡೆದ ಮೂರು ದ್ವಿಚಕ್ರ ವಾಹನಗಳ ಮತ್ತು ಒಂದು ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆಯಲ್ಲಿ ತಿಳಿಸಿದ್ದಾರೆ. ಈ ಗಾಂಜಾ ಮಾರಾಟ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನು ಮೂರು ಜನ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರಿಗಾಗಿಯೂ ಶೋಧ ಕಾರ್ಯ ನಡೆದಿದೆ” ಎಂದು ಮಾಹಿತಿ ನೀಡಿದರು.

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ:

“ಇತ್ತಿಚೇಗೆ ಬೀದರ ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಮೂರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರಿಂದ ಪೊಷಕರು ತಮ್ಮ ಮಕ್ಕಳ ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಮೇಲೆ ನಿಗಾವಹಿಸಬೇಕು. ಜಿಲ್ಲೆಯ ನಾಗರಿಕರು ಹಾಗೂ ಯುವಕರು ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಬಾರದು. ಇಂತಹ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಚ್ಚರಿಕೆ ನೀಡಿದರು.

“ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು. ತಮ್ಮ ಮನೆಗಳಿಗೆ ಸಿಸಿಟಿವಿ ಅಳವಡಿಸಬೇಕು. ತಾವು ಊರಿಗೆ ತೆರಳುವಾಗ ತಮ್ಮ ಮನೆಯ ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿ ತಮ್ಮ ಮನೆಯ ಮೇಲೆ ನಿಗಾ ಇಡುವಂತೆ ಹೇಳಬೇಕು. ಹೆಚ್ಚಿನ ದಿನಕ್ಕಾಗಿ ಊರಿಗೆ ತೆರಳುವಂತಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ತಮ್ಮ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಗಳು ಸಂಚರಿಸುದನ್ನು ಕಂಡುಬಂದರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಣ್ಣನವರ ಭಾವಚಿತ್ರ ಸುಟ್ಟ ಕಿಡಿಕೇಡಿಗಳಿಗೆ ಕೂಡಲೇ ಬಂಧಿಸಿ : ಕೇಂದ್ರ ಸಚಿವ ಭಗವಂತ ಖೂಬಾ

ಈ ಸಂದರ್ಭದಲ್ಲಿ ಭಾಲ್ಕಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಪವಾಡಶೇಟ್ಟಿ, ಭಾಲ್ಕಿ ಗ್ರಾಮೀಣ ವೃತ್ತ ಸಿಪಿಐ ಗುರುಪಾದ ಎಸ್ ಬಿರಾದಾರ, ಪಿಎಸ್‌ಐ ವಿಶ್ವರಾಧ್ಯ ಸೇರಿದಂತೆ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಇಲಾಖೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...