ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

Date:

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಬಿದ್ದಿದೆ. ಕಾರವಾರ, ಕುಮಟಾ ಹಾಗೂ ದಾಂಡೇಲಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

- Advertisement -

ಕಾರವಾರ ಡಿವೈಎಸ್‌ಪಿ ಆಗಿದ್ದ ಗಿರೀಶ್ ಅವರನ್ನು ಉಡುಪಿಯ ಕರಾವಳಿ ಕಾವಲುಪಡೆಗೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಡಿಸಿಆರ್‌ಇಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಎಸ್. ಲೋಕಾಪುರ ಅವರನ್ನು ಕಾರವಾರ ಡಿವೈಎಸ್‌ಪಿಯಾಗಿ ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸಚಿವರಿಗೆ ಮನವಿ

ಈ ಹಿಂದೆ ಭಟ್ಕಳ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದ ಗಿರೀಶ್ ಬಿ. ಅವರನ್ನು ಡಿಸಿಆರ್‌ಇಯಿಂದ ದಾಂಡೇಲಿ ಉಪವಿಭಾಗದ ಡಿವೈಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕುಮಟಾ ಪೊಲೀಸ್ ಠಾಣೆಯ ಪಿಐ ಯೋಗೇಶ್ ಕೆ.ಎಂ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕುಸುಮಾಧರ್ ಕೆ. ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಉಳಿವೆಪ್ಪ ಹೆಚ್. ಸಾತೇನಹಳ್ಳಿ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಧಾರವಾಡ ಪೊಲೀಸ್ ತರಬೇತಿ ಶಾಲೆಯ ರಮೇಶ್ ಬಸಪ್ಪ ಗೋಕಾಕ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

ಈ ವರ್ಗಾವಣೆ ಮತ್ತು ನಿಯೋಜನೆಗಳಿಂದ ಜಿಲ್ಲೆಯ ಪ್ರಮುಖ ಪೊಲೀಸ್ ಹುದ್ದೆಗಳಲ್ಲಿ ಬದಲಾವಣೆ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...