ಕಾನೂನುಬದ್ಧ ಸಲಿಂಗ ವಿವಾಹ, ಅಲ್ಪಸಂಖ್ಯಾತರ ರಕ್ಷಣೆಗೆ ಒತ್ತು; ರಾಷ್ಟ್ರಪತಿಗೆ ಪತ್ರ ಬರೆದ ಅಕ್ಕೈ ಪದ್ಮಶಾಲಿ

Date:

Advertisements
  • ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಕಠಿಣ ಕಾನೂನು ಅಗತ್ಯ
  • ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆ ಚರ್ಚಿಸಿ, ಸಮಿತಿ ರಚಿಸಿ

ಸಲಿಂಗ ವಿವಾಹ ಮತ್ತು ಲೈಂಗಿಕ ಅಲ್ಪಸಂಖ್ಯಾತರು ದಿನನಿತ್ಯ ತಮ್ಮ ಜೀವನದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಲೈಂಗಿಕ ಅಲ್ಪಸಂಖ್ಯಾತರ ವಿರೋಧಿ ದಿನ (ಎಲ್‌ಜಿಬಿಟಿಕ್ಯೂಐಎ) ಅಂಗವಾಗಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಮೇ 18ರಂದು ಅಕ್ಕೈ ಪದ್ಮಶಾಲಿ ಪತ್ರ ಬರೆದಿದ್ದಾರೆ.

ಸದನದಲ್ಲಿ ಅಂತಾರಾಷ್ಟ್ರೀಯ ಲಿಂಗತ್ವ ವಿರುದ್ಧ ದೌರ್ಜನ್ಯ, ಸಲಿಂಗ ವಿವಾಹಕ್ಕೆ ಮ್ಯಾನತೆ, ಲೈಂಗಿಕ ಅಲ್ಪಸಂಖ್ಯಾತರು ದಿನ ನಿತ್ಯ ತಮ್ಮ ಬದುಕಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ಸಮುದಾಯಕ್ಕೆ ಸೂಕ್ತ ಸ್ಥಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisements

ಸದನದಲ್ಲಿ ಇಲ್ಲಿಯವರೆಗೂ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಥವಾ ಕಾನೂನು ಬದ್ಧವಾಗಿ ಪರಿಹರಿಸಲು ಯಾವುದೇ ಸಮಿತಿ ರಚನೆಯಾಗಿಲ್ಲ. ತಮ್ಮದೇ ಸಮಸ್ಯೆಗಳ ಕುರಿತು ಮಾತನಾಡಲು ಅವಕಾಶವೂ ಇಲ್ಲ ಇದೊಂದು ಖಂಡನಾರ್ಹ ವಿಷಯ. ಲೈಂಗಿಕ ಅಲ್ಪಸಂಖ್ಯಾತರಿಗೆ ಸದನದಲ್ಲಾಗುವ ಚರ್ಚೆಗಳಿಗೆ ಅವಕಾಶ ಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಹೊಸಿಲ ಒಳಗೆ-ಹೊರಗೆ | ನೀವು ಯಾವತ್ತಾದರೂ ಬಸ್ಸಿನಲ್ಲಿ ಪಯಣಿಸುವ ಮಹಿಳೆಯ ಸ್ಥಾನದಲ್ಲಿ ನಿಂತು ಯೋಚಿಸಿದ್ದೀರಾ?

ರಾಜ್ಯಗಳಲ್ಲಿಯೂ ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಪೊಲೀಸರು. ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆ. ಆದರೂ, ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಮಾಜದಲ್ಲಿ ಗೌರವ ಸ್ವಾಭಿಮಾನದಿಂದ ಬದುಕುವಂತಾಗಬೇಕು. ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ ಎಂದೂ ಅಕೈ ಪದ್ಮಶಾಲಿ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X