ಚಿಕ್ಕಮಗಳೂರು | ಖಾಸಗಿ ನಿವೇಶನಕ್ಕೆ ಕೆರೆ ಮಣ್ಣು ಅಕ್ರಮ ಸಾಗಾಟ; ಗ್ರಾಮಸ್ಥರಿಂದ ತಡೆ

Date:

Advertisements
  • ತಪ್ಪು ಒಪ್ಪಿಕೊಂಡ ಪಟ್ಟಣ ಪಂಚಾಯಿತಿ ಸದಸ್ಯ
  • ಕೆರೆ ಒತ್ತುವರಿ ತೆರವು ಮಾಡುವಂತೆ ಗ್ರಾಮಸ್ಥರ ಆಗ್ರಹ

ಯಾವುದೇ ಅನುಮತಿ ಇಲ್ಲದೆ ಸರ್ಕಾರದ ಅಧೀನದಲ್ಲಿರುವ ಕೆರೆಯಲ್ಲಿ ಮಣ್ಣನ್ನು ಅಗದು, ಖಾಸಗಿ ನಿವೇಶನಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಹೆಸಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಗುಳ ಗ್ರಾಮದ ಏಳುಮುಖ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿರುವ ಕೆರೆಯ ಮಣ್ಣನ್ನು ಪಟ್ಟಣ ಪಂಚಾಯತಿ ಸದಸ್ಯ ಕೆ ವೆಂಕಟೇಶ್ ಅಕ್ರಮವಾಗಿ ತೆಗೆದು ಸಾಗಾಣಿಕೆ ಮಾಡುತ್ತಿದ್ದರು. ಈ ವೇಳೆ ಸ್ಥಳೀಯರು ಪ್ರತಿರೋಧ ವ್ಯಕ್ತಪಡಿಸಿ ಮಣ್ಣು ಸಾಗಾಣಿಕೆಯನ್ನು ತಡೆದಿದ್ದಾರೆ.

ಹಿಟಾಚಿ ಯಂತ್ರ ಮತ್ತು ಐದು ಟ್ರ್ಯಾಕ್ಟರ್‌ಗಳನ್ನು ಬಳಸಿ ಕೆರೆಯಿಂದ ಮಣ್ಣು ತೆಗೆದು ಖಾಸಗಿ ನಿವೇಶನಕ್ಕೆ ಸಾಗಿಸಲಾಗುತ್ತಿತ್ತು. ಬಳಿಕ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisements

“ಅನುಮತಿ ಇಲ್ಲದೆ ಮಣ್ಣು ಸಾಗಿಸುತ್ತಿದ್ದ ಪಟ್ಟಣ ಪಂಚಾಯತಿ ಸದಸ್ಯ ಕೆ ವೆಂಕಟೇಶ್ ಅವರು ಎರಡು ವರ್ಷಗಳ ಹಿಂದೆ ಇದೇ ರೀತಿ ಮಣ್ಣು ಸಾಗಾಣಿಕೆ ಮಾಡಿದ್ದರು. ಅಲ್ಲದೆ, ಅವರು ಮಣ್ಣು ತೆಗೆದು ಸಾಗಾಣಿಕೆ ಮಾಡಿದ್ದಕ್ಕೆ, ಬೇರೊಬ್ಬರು ಕೆರೆ ಹೂಳೆತ್ತಿದ್ದೇವೆಂದು ಗ್ರಾಮ ಪಂಚಾಯಿತಿಯಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಏ.29ರಂದು ಸಕಲೇಶಪುರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

“ಇದು ಸರ್ಕಾರಿ ಕೆರೆಯಾಗಿದ್ದು, ಈಗಾಗಲೇ ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೂಡಲೆ ಕೆರೆ ಒತ್ತುವರಿಯನು ತೆರವುಗೊಳಿಸಬೇಕು. ಮತ್ತು ಅತಿಕ್ರಮವಾಗಿ ಕೆರೆಯ ಮಣ್ಣನ್ನು ಎತ್ತಲು ರಾಜಕಾರಣಿಗೆ ಸಹಕಾರ ನೀಡಬಾರದು. ಬದಲಿಗೆ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಣ್ಣು ತುಂಬಲು ತಂದಿದ್ದ ಐದು ಟ್ರ್ಯಾಕ್ಟರ್ ಮತ್ತು ಹಿಟಾಚಿ ಯಂತ್ರವನ್ನು ವಶಪಡಿಸಿಕೊಳ್ಳಬೇಕು” ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X