ಮೈಸೂರು | ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಖಂಡಿಸಿ ಆದಿವಾಸಿಗಳ ಪ್ರತಿಭಟನೆ

Date:

ಆದಿವಾಸಿಗಳಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಸಾಮಗ್ರಿಗಳು ಕಳೆದ ಎರಡು ತಿಂಗಳಿನಿಂದ ಲಭ್ಯವಾಗದಿರುವುದನ್ನು ಖಂಡಿಸಿ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ (AIJASC) ನೇತೃತ್ವದಲ್ಲಿ ಗುರುವಾರ ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.

- Advertisement -

ತಹಸೀಲ್ದಾರ್ ಶ್ರೀನಿವಾಸ್ ಹಾಗೂ ಐಟಿಡಿಪಿ ಅಧಿಕಾರಿ ಮಹೇಶ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, “ಏಪ್ರಿಲ್ ಮತ್ತು ಮೇ ತಿಂಗಳ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಈ ತಿಂಗಳೊಳಗಾಗಿ ವಿತರಿಸಲಾಗುವುದು. ಕುಡಿಯುವ ನೀರು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿ ಪಿಡಿಒಗಳ ಗಮನಕ್ಕೆ ತಂದು ಪರಿಹಾರ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸುನಿಲ್ ಟಿ.ಆರ್., “ಹೆಗ್ಗಡದೇವನಕೋಟೆ ಮತ್ತು ಸರಗೂರು ತಾಲೂಕಿನ ವ್ಯಾಪ್ತಿಯ ಬಹುತೇಕ ಆದಿವಾಸಿಗಳು ಕೃಷಿ ಕೂಲಿ ಕಾರ್ಮಿಕರಾಗಿದ್ದು, ಅನಕ್ಷರತೆ, ಅಪೌಷ್ಟಿಕತೆ ಮತ್ತು ಬಡತನದಿಂದ ಸಂಕಷ್ಟದಲ್ಲಿದ್ದಾರೆ. ಮನೆ, ರಸ್ತೆ, ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನತೆ ವಂಚಿತರಾಗಿದ್ದಾರೆ” ಎಂದು ಆರೋಪಿಸಿದರು.

ದಡದಹಳ್ಳಿ ಹಾಡಿ, ಬಾವಲಿ ಹಾಡಿ ಹಾಗೂ ಎನ್.ಬೇಗೂರು ಭಾಗದ ಮಾಳದಹಾಡಿ ಸೇರಿದಂತೆ ಅನೇಕ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಕಲುಷಿತ ನೀರನ್ನು ಬಳಸುವಂತಾಗಿದೆ ಎಂದು ಅವರು ದೂರಿದರು.

1000314245

ಇದಲ್ಲದೆ, ಟೆಂಡರ್ ಪ್ರಕ್ರಿಯೆ ವಿಳಂಬದ ನೆಪ ನೀಡಿ ಕಳೆದ ಏಪ್ರಿಲ್ ಮತ್ತು ಮೇ ತಿಂಗಳ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸದಿರುವುದು ಆದಿವಾಸಿ ಕುಟುಂಬಗಳನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಹೇಳಿದರು. ಸರ್ಕಾರ ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಅಥವಾ ತಾತ್ಕಾಲಿಕವಾಗಿ ಆಹಾರ ಸಾಮಗ್ರಿಗಳನ್ನು ಖರೀದಿಸಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ, ಬಾಕಿ ಇರುವ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ತಕ್ಷಣ ವಿತರಿಸುವುದು, ರಾಗಿ ಸೇರಿದಂತೆ ಹೆಚ್ಚುವರಿ ಆಹಾರ ವಿತರಣೆ, ವಿವಿಧ ಹಾಡಿಗಳಿಗೆ ಸಮರ್ಪಕ ಕುಡಿಯುವ ನೀರು ಹಾಗೂ ರಸ್ತೆ-ಬಸ್ ಸಂಪರ್ಕ ಕಲ್ಪಿಸುವುದು, ಜಲಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ಒದಗಿಸುವುದು, ಅಂಗನವಾಡಿ ಕಟ್ಟಡ ನಿರ್ಮಾಣ ಮತ್ತು ರಸ್ತೆ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಕನ್ನಡ ಭಾಷೆಯ ಸ್ಥಿತಿಗತಿ ಕುರಿತು ಗಂಭೀರ ಚಿಂತನೆ ಅಗತ್ಯ: ಕೆ ಜಿ ಬೋಪಯ್ಯ

ಪ್ರತಿಭಟನೆಯಲ್ಲಿ ರೈತ ಮುಖಂಡ ಬಸವರಾಜು, ಮಹಿಳಾ ಸಂಘಟನೆಯ ಆಸೀಯ, ಪದ್ಮ, ಕುಮಾರ್, ನೇತ್ರ, ಪೂರ್ಣಿಮಾ ಸೇರಿದಂತೆ ವಿವಿಧ ಹಾಡಿಗಳ ಮುಖಂಡರಾದ ಮಾಚಮ್ಮ, ಮಾರೆ, ರವಿ, ಕುಮಾರಿ, ಕಾಳಮ್ಮ, ಶಿವಮಾದಮ್ಮ, ಮಾರಮ್ಮ, ಶೀರಮ್ಮ, ಗೀತಾ, ಗಂಗೆ, ಮೀನಾ, ಮಾರ ಹಾಗೂ ಮನೋಜ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...