ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ರಾಯಚೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬೀದರ್ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಫೈನಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಗೆದ್ದು ಟ್ರೋಫಿ ತನ್ನದಾಗಿಸಿಕೊಂಡು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
ಮಹಾವಿದ್ಯಾಲಯದ ಒಬ್ಬ ವಿದ್ಯಾರ್ಥಿನಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮನೋಜಕುಮಾರ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರವಿ ನಾಯಕ್ ಹಾಗೂ ಕಾಲೇಜು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.