ತುಮಕೂರು ವಿಶ್ವವಿದ್ಯಾನಿಲಯದ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಮೇ 22ರಂದು ಬೆಳಿಗ್ಗೆ 10-30ಕ್ಕೆ ʼಅರಿವೇ ಅಂಬೇಡ್ಕರʼ ಬಾಬಾಸಾಹೇಬರ ಬರಹಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ ಬೆಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ತರಬೇತಿ ಸಂಶೋಧನೆ ಹಾಗೂ ವಿಸ್ತರಣೆ ಕೇಂದ್ರ ಹಾಗೂ ಈ ದಿನ.ಕಾಮ್ ಸಹಯೋಗದಲ್ಲಿ 2 ದಿನ ಸಂವಾದ ಕಾರ್ಯಕ್ರಮ ನಡೆಯಲಿದೆ.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಂಗಳೂರಿನಲ್ಲಿ ವಕೀಲರಾಗಿರುವ ರಾಜಲಕ್ಷ್ಮೀ ಅಂಕಲಗಿ ಹಾಗೂ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಎ ನಾರಾಯಣ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಸ್‌ಬಿಐ ಬ್ಯಾಂಕ್ ಚಂದಾಪುರ ಶಾಖೆ ಮ್ಯಾನೇಜರ್ ವಿರುದ್ಧ ಕರವೇ ಪ್ರತಿಭಟನೆ
ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ. ಪ್ರಸನ್ನಕುಮಾರ್ ಗೌರವ ಉಪಸ್ಥಿತಿ ವಹಿಸಿದ್ದು, ಈ ದಿನ.ಕಾಮ್ ಜಿಲ್ಲಾ ವರದಿಗಾರ ಚಂದನ್ ಡಿ ಎನ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.