ತುಮಕೂರು | ಶ್ರೀ ಸಿದ್ಧಾರ್ಥ ಸಂಸ್ಥೆಯಲ್ಲಿ ‘ಅಪ್‌ಗ್ರೇಡ್ ಸ್ಕೂಲ್ ಆಫ್ ಟೆಕ್ನಾಲಜಿ’ ಆರಂಭ : ಡಿಸಿಎಂ ಪರಮೇಶ್ವರ್

Date:

ಜಾಗತಿಕ ತಂತ್ರಜ್ಞಾನ ಕ್ಷೇತ್ರದ ವೇಗಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕೇವಲ ಎಂಜಿನಿಯರಿಂಗ್ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ್ ಸಲಹೆ ನೀಡಿದರು.

- Advertisement -

ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸ್ಕಾಲರ್ ಬಿಲ್ಡಿಂಗ್‌ನಲ್ಲಿ ಶನಿವಾರ ‘ಅಪ್‌ಗ್ರೇಡ್ ಸ್ಕೂಲ್ ಆಫ್ ಟೆಕ್ನಾಲಜಿ’ಯ ಪ್ರಥಮ ಐಟಿ ಎಂಜಿನಿಯರಿಂಗ್ ಬ್ಯಾಚ್ (2026–30) ನ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಪ್ರಸ್ತುತ ಜೆನ್‌ಝೀ ಹಾಗೂ ಮುಂದಿನ ಜೆನ್‌ಆಲ್ಫಾ, ಜೆನ್‌ಬೀಟಾ ಪೀಳಿಗೆಯ ಆಕಾಂಕ್ಷೆಗಳು ವಿಭಿನ್ನವಾಗಿವೆ. ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ವ್ಯವಸ್ಥೆಯೂ ಕಾಲಕ್ಕೆ ತಕ್ಕಂತೆ ರೂಪಾಂತರಗೊಳ್ಳಬೇಕಿದೆ. ವಿದ್ಯಾರ್ಥಿಗಳನ್ನು ಆಧುನಿಕ ತಂತ್ರಜ್ಞಾನ ಹಾಗೂ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ‘ಅಪ್‌ಗ್ರೇಡ್’ನೊಂದಿಗೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕೈಜೋಡಿಸಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದರು.

ಎಐಸಿಟಿಇಯ ನವೀನ ಪಠ್ಯಕ್ರಮದ ಜತೆಗೆ ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ತಂತ್ರಜ್ಞಾನ ಕ್ಷೇತ್ರದ ಅಗತ್ಯ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶದಿಂದ ಈ ಶಿಕ್ಷಣ ಕಾರ್ಯಕ್ರಮ ಆರಂಭಿಸಲಾಗಿದೆ. ಭಾರತವು ಜಾಗತಿಕ ಮಟ್ಟದಲ್ಲಿ ನಾಯಕತ್ವ ವಹಿಸುವ ಸಾಮರ್ಥ್ಯ ಹೊಂದಿದ್ದು, ಯುವಜನರು ಅದರ ಶಕ್ತಿಯಾಗಬೇಕು ಎಂದು ಹೇಳಿದರು.

ತಮ್ಮ ತಂದೆ ಡಾ.ಎಚ್.ಎಂ.ಗಂಗಾಧರಯ್ಯ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ನಗರದಿಂದ ಐದು ಕಿ.ಮೀ. ದೂರದಲ್ಲಿ ಸಣ್ಣ ಶಾಲೆಯ ಮೂಲಕ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದರು. ಇಂದು ಸಂಸ್ಥೆ 100ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಸಿದ್ಧಾರ್ಥ ಉನ್ನತ ಶಿಕ್ಷಣ ಅಕಾಡೆಮಿಯಾಗಿ ಬೆಳೆದಿದೆ. ಕಳೆದ 35–40 ವರ್ಷಗಳಲ್ಲಿ ಸಂಸ್ಥೆಯಿಂದ 35 ಸಾವಿರಕ್ಕೂ ಹೆಚ್ಚು ಎಂಜಿನಿಯರ್‌ಗಳು ಹಾಗೂ 10 ಸಾವಿರಕ್ಕೂ ಹೆಚ್ಚು ವೈದ್ಯರು ಹೊರಬಂದಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ‘ಅಪ್‌ಗ್ರೇಡ್’ ಅಧ್ಯಕ್ಷ ಹಾಗೂ ಸಹ-ಸಂಸ್ಥಾಪಕ ರೋನಿ ಸ್ಕ್ರೂವಾಲಾ, ಸಹ-ಸಂಸ್ಥಾಪಕ ಮಯಂಕ್ ಕುಮಾರ್, ಮೈಕ್ರೋಸಾಫ್ಟ್‌ನ ವಿವೇಕ್ ಶ್ರೀಧರ್, ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಡಾ.ಅಶೋಕ್ ಮೆಹ್ತಾ, ಎಸ್‌ಎಸ್‌ಐಟಿ ಪ್ರಾಂಶುಪಾಲ ಡಾ.ಎಂ.ಎನ್.ನಡಕಟ್ಟಿ, ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಎಂಜಿನಿಯರಿಂಗ್ ಪ್ರಾಂಶುಪಾಲ ಡಾ.ಎಲ್.ಸಂಜೀವ್ ಕುಮಾರ್ ಸೇರಿದಂತೆ ವಿವಿಧ ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...