ತುಮಕೂರು | ಡಿ.14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Date:

ತುಮಕೂರು ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ  ತಿಳಿಸಿದರು. 

- Advertisement -

    ತುಮಕೂರು ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಕರ್ನಾಟಕದ  ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ನ ಅಧ್ಯಕ್ಷರಾದ ಪ್ರೊ. ಟಿ.ಜಿ.ಸಿತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ಗೌರವ ಡಾಕ್ಟರೇಟ್ ಪಡೆದವರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಬಗ್ಗೆ ವಿವರಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುಲಸಚಿವರಾದ ಡಾ.ಎಂ.ಝೆಡ್ ಕುರಿಯನ್ ಮಾತನಾಡಿ, ಸಾಹೇ ವಿವಿಯ ಘಟಿಕೋತ್ಸವದಲ್ಲಿ ರ‍್ಯಾಂಕ್ ಪಡೆದವರ ವಿವರಗಳನ್ನು ನೀಡುತ್ತಾ, ಸಾಹೇ ಬೆಳೆದು ಬಂದ ಹಾದಿ ಹಾಗೂ ನ್ಯಾಕ್ ಎ+ ಪಡೆದಿರುವ ಕುರಿತು ಮಾಹಿತಿಯನ್ನು ನೀಡಿದರು. ಮುಂದಿನ ದಿನಗಳಲ್ಲಿ ಸಾಹೇ ವಿವಿಯು ಅಂತಾರಾಷ್ಟ್ರೀಯ ರ‍್ಯಾಂಕ್ ಪಟ್ಟಿಯಲ್ಲಿ ಬರುವ ಎಲ್ಲಾ ರೀತಿಯ ಪ್ರಯತ್ನಗಳು ನಡೆಸುತ್ತಿದೆ ಎಂದರು.

ಇತ್ತೀಚೆಗೆ ಅಮೆರಿಕಾದ ಅವಲಾನ್ ವೈದ್ಯಕೀಯ ವಿವಿಯೊಂದಿಗೆ ಸಾಹೇ ವಿವಿ ಒಪ್ಪಂದ ನಡೆಸಿತ್ತು. ಅದರ ಒಪ್ಪಂದದ ಪ್ರಕಾರ ಮುಂದಿನ ಜನವರಿ ಮಾಹೆಯಲ್ಲಿ ವೈದ್ಯಕೀಯ ಆನ್‌ಲೈನ್ ತರಗತಿಗಳನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅವಲಾನ್ ವಿವಿಯ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ಸಾಹೇ ವಿವಿಯಲ್ಲಿ ಆನ್‌ಲೈನ್ ಮೂಲಕ ಬೋಧನಾ ಮತ್ತು ಪ್ರಾಯೋಗಿಕ ತರಗತಿಗಳು ಪಡೆದುಕೊಳ್ಳುತ್ತಾರೆ ಎಂದು ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ ತಿಳಿಸಿದರು. 

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಲು ಶೇ.80ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿರುತ್ತಾರೆ. ಅತೀ ಹೆಚ್ಚು ರ‍್ಯಾಂಕ್ ಪಡೆದವರಲ್ಲಿ ಅವರೇ ಮೇಲುಗೈ. ಕಳೆದ ಎರಡು ವರ್ಷದ ಹಿಂದೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಕ್ಷೇತ್ರದಲ್ಲಿಯೂ ಶೇ.20ರಷ್ಟು ಮಾತ್ರ ಕ್ಯಾಂಪಸ್ ಪ್ಲೇಸ್‌ಮೆಂಟ್ ಇತ್ತು. ಈ ಬಾರಿ ಕ್ಯಾಂಪಸ್ ಉದ್ಯೋಗ ಅವಕಾಶ ಶೇ.60ರಷ್ಟು ಹೆಚ್ಚಾಗುವ ನಿರೀಕ್ಷೆ ಎಂದು ಅವರು ಮಾಹಿತಿ ನೀಡಿದರು.

10 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ

ರ‍್ಯಾಂಕ್ ವಿವರಗಳು:

ಇಂಜಿನಿಯರಿಂಗ್,ವೈದ್ಯಕೀಯ, ದಂತ ವೈದ್ಯಕೀಯ, ಪಿಎಚ್.ಡಿ ಸೇರಿದಂತೆ ಒಟ್ಟು 876 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಮಾಡಲಾಗುವುದು.  .

ಚಿನ್ನದ ಪದಕ ಪಡೆದ ವಿಭಾಗಗಳ ವಿವರ : ಇಂಜಿನಿಯರಿಂಗ್- 06, ವೈದ್ಯಕೀಯ-1, ದಂತ ವೈದ್ಯಕೀಯ-2, ಎಂಸಿಎ-01

ಒಟ್ಟು ಪದವಿಗಳು:  ಡಾಕ್ಟರೇಟ್ ಪದವಿ-24,  ಇಂಜಿನಿಯರಿAಗ್-601, ವೈದ್ಯಕೀಯ-147,  ದಂತ ವೈದ್ಯಕೀಯ-49 ಸೇರಿದಂತೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸಲಾಗುತ್ತದೆ. 

ಅತ್ಯುತ್ತಮ ಶ್ರೇಣಿಯ ವಿದ್ಯಾರ್ಥಿಗಳು : ಇಂಜಿನಿಯರಿಂಗ್-01, ವೈದ್ಯಕೀಯ-01, ದಂತ ವೈದ್ಯಕೀಯ-01

ಸುದ್ದಿಗೋಷ್ಠಿಯಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...