ತುಮಕೂರು | ಡಿಸೆಂಬರ್ 29 ರಿಂದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ 

Date:

Advertisements
  • ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಚ್ ಎಸ್ ಶಿವಪ್ರಕಾಶ್ ಆಯ್ಕೆ
  • ವಿಶ್ವಮಾನವ ಕುವೆಂಪು ಅವರ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ 

ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ ಹಾಗೂ ರಂಗಭೂಮಿಯ ಸಂಗಮ ಹಾಗೂ ಶೈಕ್ಷಣಿಕವಾಗಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯಿಂದ ಕೂಡಿರುವ ತುಮಕೂರು ಜಿಲ್ಲೆಯಲ್ಲಿ  ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಿಸೆಂಬರ್ 29 ಮತ್ತು 30 ರಂದು “15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ” ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಎಸ್ ಸಿದ್ಧಲಿಂಗಪ್ಪ ತಿಳಿಸಿದರು.

ತುಮಕೂರು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ, “ನಾಡು ನುಡಿ ಜಲಗಳ ಕುರಿತಾದ ಅರ್ಥಪೂರ್ಣ ವಿಚಾರ ವಿನಿಮಯಗಳಿಗೆ ಸಮ್ಮೇಳನ ಒಂದು ವೇದಿಕೆಯಾಗಿದೆ. ನಮ್ಮ ಜಿಲ್ಲೆಯವರೇ ಆದ ಅಂತಾರಾಷ್ಟ್ರೀಯ ಖ್ಯಾತಿಯ ಸಾಹಿತಿ ಡಾ. ಎಚ್ ಎಸ್ ಶಿವಪ್ರಕಾಶ್‌ರವರು ಸಮ್ಮೇಳನದ ಅಧ್ಯಕ್ಷರಾಗಿರುತ್ತಾರೆ” ಎಂದು ತಿಳಿಸಿದರು.

“ಡಿಸೆಂಬರ್ 29ರ ಶುಕ್ರವಾರ ಬೆಳಿಗ್ಗೆ 7:30ಕ್ಕೆ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ ಕರಾಳೆ ರಾಷ್ಟ್ರಧ್ವಜಾರೋಹಣ ಮಾಡುವರು. ಮಹಾನಗರ ಪಾಲಿಕೆಯ ಉಪ ಪೌರಾಯುಕ್ತ ಟಿ ಕೆ ನರಸಿಂಹಮೂರ್ತಿ ನಾಡ ಧ್ವಜಾರೋಹಣ ನೆರವೇರಿಸುವರು, ಅಂದು ಬೆಳಿಗ್ಗೆ 8ಕ್ಕೆ ಮಹಾನಗರ ಪಾಲಿಕೆಯ ಆವರಣದಿಂದ ಸಮ್ಮೇಳನಾಧ್ಯಕ್ಷರ ವೈಭವಯುತ ಮೆರವಣಿಗೆ ನಡೆಯಲಿದೆ” ಎಂದು ತಿಳಿಸಿದರು.

Advertisements

“ಜಿಲ್ಲೆಯ ಜಾನಪದ ಹಾಗೂ ಸಾಂಸ್ಕೃತಿಕ ಪ್ರಕಾರಗಳಾದ ಕೋಲಾಟ, ವೀರಗಾಸೆ, ನಂದೀಧ್ವಜ, ಸೋಮನಕುಣಿತ, ನಾಸಿಕ್ ಡೋಲು, ನಾದಸ್ವರ, ಗಾರುಡಿ ಗೊಂಬೆ, ಕೋಳಿನೃತ್ಯಗಳ ಜೊತೆಗೆ ಶಾಲಾ ಕಾಲೇಜುಗಳ ಸಾಂಸ್ಕೃತಿಕ ತಂಡಗಳು ಭಾಗವಹಿಸಲಿವೆ. ಪಾಲಿಕೆಯ ಆವರಣದಿಂದ ಬಿಜಿಎಸ್ ವೃತ್ತ, ಎಂ ಜಿ ರಸ್ತೆ ಮಾರ್ಗವಾಗಿ ಗುಂಚಿಚೌಕದಲ್ಲಿರುವ ಬಿ ಶಿವಮೂರ್ತಿ ಶಾಸ್ತ್ರಿಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮಾರ್ಗವಾಗಿ ಪ್ರಧಾನ ವೇದಿಕೆ ತಲುಪುತ್ತದೆ” ಎಂದು ತಿಳಿಸಿದರು.

ಅಂದು ಬೆಳಿಗ್ಗೆ 10ಕ್ಕೆ ಪ್ರದಾನ ವೇದಿಕೆಯಲ್ಲಿ ಶಿಕ್ಷಣ ಭೀಷ್ಮ ಡಾ ಎಚ್ ಎಂ ಗಂಗಾಧರಯ್ಯ, ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗಸ್ವಾಮಿ, ಹಿರೇಮಠಾಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮಿ, ಪಾವಗಡ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀಜಪಾನಂದಜೀ ಮಹಾರಾಜ್‌ರವರ ದಿವ್ಯ ಸಾನ್ನಿಧ್ಯದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಖ್ಯಾತ ಕವಿ, ಸಂಸ್ಕೃತಿ ಚಿಂತಕ ಪ್ರೊ ಎಸ್ ಜಿ ಸಿದ್ಧರಾಮಯ್ಯನವರು ಸಮ್ಮೇಳನದ ಉದ್ಘಾಟನೆ ನೆರವೇರಿಸುವರು. ಅಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ಕುವೆಂಪು ಅವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆ ಮಾಡುವರು” ಎಂದರು.

“ವಿಶ್ವಮಾನವ ಕುವೆಂಪು ಅವರ ದಿನಾಚರಣೆಯ ಅಂಗವಾಗಿ ಅಂದು ಮಧ್ಯಾಹ್ನ ಪ್ರೊ ಕೆ ಚಂದ್ರಣ್ಣ  ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಎಚ್ ಕೆ ನರಸಿಂಹಮೂರ್ತಿ ʼಕುವೆಂಪು ಸಾಹಿತ್ಯದಲ್ಲಿ ವಿಶ್ವಮಾನವ ಸಂದೇಶʼ ಕುರಿತು ಉಪನ್ಯಾಸ ನೀಡುವರು” ಎಂದು ತಿಳಿಸಿದರು.

ಡಿಸೆಂಬರ್ 30, 2023ರ ಶನಿವಾರ ಬೆಳಿಗ್ಗೆ ಜಿಲ್ಲೆಯ ಜಾನಪದ ತಜ್ಞ ಡಾ.ಚಿಕ್ಕಣ್ಣಯಣ್ಣೆಕಟ್ಟೆಯವರ ನೇತೃತ್ವದಲ್ಲಿ ಜಿಲ್ಲೆಯ ಜಾನಪದ ಸಿರಿ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಜಾನಪದ ಪ್ರಕಾರಗಳ ಕುರಿತು ವಿವಿಧ ಸಾಹಿತಿಗಳು ಪ್ರಬಂಧ ಮಂಡಿಸಲಿದ್ದಾರೆ. ನಂತರ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 2ನೇ ವರ್ಷದ ಕಾರ್ಯ ಚಟುವಟಿಕೆಗಳ ಕುರಿತ ನುಡಿಹೆಜ್ಜೆ-2 ಕೃತಿ ಬಿಡುಗಡೆ ಹಾಗೂ ಜಿಲ್ಲೆಯ 12 ಜನ ಸಾಧಕ ಹಿರಿಯ ಕಲಾವಿದರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಸನ್ಮಾನಿಸಿ ಕೃತಿ ಬಿಡುಗಡೆ ಮಾಡುವರು. ನಂತರ ಮಕ್ಕಳ ಸಾಹಿತ್ಯ ಕುರಿತು ಗೋಷ್ಠಿಯು ನಡೆಯಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ 20 ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ವರಚಿತ ಕವನ ವಾಚನ ಅಥವಾ ಸಾಹಿತ್ಯ ಸಂವಾದದಲ್ಲಿ ಭಾಗವಹಿಸುವರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಯುವನಿಧಿ ಯೋಜನೆಗೆ ನೊಂದಣಿ ಆರಂಭ: ಅಪರ ಜಿಲ್ಲಾಧಿಕಾರಿ

ಜಿಲ್ಲೆಯ ಸಾಧಕ ಸಾಹಿತಿ ಕಲಾವಿದರುಗಳನ್ನು ಕುರಿತು ಚಿಂತನಾ ಗೋಷ್ಠಿಯು ಹಿರಿಯ ಸಾಹಿತಿಗಳಾದ ಡಾ.ಸಂಪಿಗೆ ತೋಂಟದಾರ್ಯ ಅಧ್ಯಕ್ಷತೆಯಲ್ಲಿ ಜರುಗಲಿದೆ. ಜಿಲ್ಲೆಯ ಸಾಹಿತಿಗಳಾದ ವೀ.ಚಿಕ್ಕವೀರಯ್ಯ,  ಡಾ.ಸಾ.ಶಿ.ಮರುಳಯ್ಯ, ಹೆಚ್.ಜಿ.ಸಣ್ಣಗುಡ್ಡಯ್ಯ, ಟಿ.ಎಸ್.ಲೋಹಿತಾಶ್ವ ಮತ್ತು ಪ್ರೊ. ಕೆ.ಬಿ.ಸಿದ್ದಯ್ಯನವರ ಸಾಹಿತ್ಯ ಕೃತಿಗಳ ಕುರಿತು ವಿವಿಧ ಸಾಹಿತಿಗಳು ಮಾತನಾಡುವರು.

ಈ ಸಂದರ್ಭದಲ್ಲಿ ತುಮಕೂರು ತಾಲ್ಲೂಕು ಕಸಾಪ ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಕಸಾಪ ನಗರ ಕಾರ್ಯದರ್ಶಿ ಸಿಹಿಜೀವಿ ವೆಂಕಟೇಶ್, ಸಾಂಸ್ಕೃತಿಕ ಸಂಚಾಲಕ ಕೆಂಕೆರೆ ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ತೇಜಸ್ವಿ, ಮಹಿಳಾ ಪ್ರತಿನಿಧಿ ರಾಣಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X