ತುಮಕೂರು | 334 ಗ್ರಾಮಗಳಿಗೂ ಸ್ಮಶಾನ ಭೂಮಿ ಮಂಜೂರು: ಶಾಸಕ ಎಸ್ ಆರ್ ಶ್ರೀನಿವಾಸ್

Date:

Advertisements

ಪರಿಶಿಷ್ಟರಿಗೆ ಮೀಸಲಿರುವ ಯಾವುದೇ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಲು ಅವಕಾಶವೇ ಇಲ್ಲ. ಯಾವುದೇ ಅಧಿಕಾರಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿರುವುದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ತುಮಕೂರು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿಯ ಕುಂದು ಕೊರತೆ ಸಭೆ ನಡೆಸಿ ದಲಿತರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

“ತಾಲೂಕಿನ 343 ಗ್ರಾಮಗಳಿಗೂ ಸ್ಮಶಾನವನ್ನು ಗುರುತಿಸಿದ್ದು ಹಸ್ತಾಂತರಿಸಲಾಗುವುದು. ಕೊಣನಕೆರೆ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಶಿಥಿಲವಾಗಿದ್ದು, ನೂತನ ಅಂಗನವಾಡಿ ಕೇಂದ್ರವನ್ನು ನಿರ್ಮಿಸಲಾಗುವುದು ಹಾಗೂ ಕೊಣನಕೆರೆ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಲಾಗುವುದು. ತಾಲೂಕಿನಲ್ಲಿ ಸಾರ್ವಜನಿಕ ಸ್ಮಶಾಣ ನಿರ್ಮಾಣ ಮಾಡಲು ಕ್ರಮ ತೆಗೆದು ಕೊಳ್ಳಲಾಗುವುದು” ಎಂದು ತಿಳಿಸಿದ ಅವರು ಅಂಬೇಡ್ಕರ್ ಭವನವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisements

“ಸರ್ಕಾರದಿಂದ ಬರುವ ಅನುದಾನವನ್ನು ವ್ಯವಸ್ಥಿತವಾಗಿ ಬಳಸಿಕೊಂಡು ದಲಿತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಎಲ್ಲ ಅಧಿಕಾರಿಗಳಿಗೂ ಸೂಚಿಸಿದರು.

“ದಲಿತರ ಭೂಮಿ ಮಂಜೂರಿಗೆ ಕ್ರಮ ತೆಗೆದುಕೊಳ್ಳಲಾಗುವುದು. ದಲಿತರ ಗ್ರಾಮಗಳಿಗೆ ಅಗತ್ಯವಿರುವ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಮೂಲ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನಿಮಗೆ ಯಾವುದೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತಂದಲ್ಲಿ ಪರಿಹರಿಸಿ ಕೊಡಲಾಗುವುದು. ತಾಲೂಕಿನ ಎಲ್ಲ ಮತದಾರರನ್ನು ಯಾವುದೇ ಜಾತಿ ಭೇದವಿಲ್ಲದೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ” ಎಂದು ತಿಳಿಸಿದರು.

“ಕೆಲವರು ಡಿಎಸ್ಎಸ್ ಸಂಘಟನೆಯ ಹೆಸರಿನಲ್ಲಿ ಕಾರ್ಯಕ್ರಮಗಳಿಗಾಗಿ ಹಣ ವಸೂಲಿ ಮಾಡುತ್ತಿರುವುದು ಕಂಡುಬರುತ್ತಿದೆ. ಅಧಿಕಾರಿಗಳು ಯಾವುದೇ ಕಾರಣಕ್ಕೂ ಹಣ ನೀಡಬಾರದು. ಇಂತಹ ಪದ್ಧತಿಗೆ ಕಡಿವಾಣ ಹಾಕಬೇಕು” ಎಂದು ಮುಖಂಡರು ಶಾಸಕರ ಸಮ್ಮುಖದಲ್ಲಿ ಒತ್ತಾಯಿಸಿದರು.

“ಅನೇಕ ವರ್ಷಗಳಿಂದಲೂ ಪರಿಶಿಷ್ಟರು ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಾ ಅನುಭವದಲ್ಲಿದ್ದರೂ, ಬಲಾಢ್ಯರ ಒತ್ತಡದಿಂದಾಗಿ ಜಮೀನು ಮಂಜೂರು ಮಾಡದೇ ಬಲಾಢ್ಯರಿಗೆ ಮಣೆ ಹಾಕುತ್ತಿರುವುದು ವಿಪರ್ಯಾಸ” ಎಂದು ಬೇಸರ ವ್ಯಕ್ತಪಡಿಸಿದರು.

“ಪರಿಶಿಷ್ಟರ ಗ್ರಾಮಗಳಿಗೆ ಅಗತ್ಯವಿರುವ ಚರಂಡಿ, ರಸ್ತೆ ಇತ್ಯಾದಿ ಮೂಲ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಲು ಸೂಚಿಸಬೇಕು” ಎಂದು ಮುಖಂಡರು ಶಾಸಕರನ್ನು ಕೋರಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

ಈ ಸಭೆಯಲ್ಲಿ ತಹಶೀಲ್ದಾರ್ ಬಿ ಆರತಿ, ತಾ.ಪಂ ಕಾರ್ಯನಿರ್ವಣಾಧಿಕಾರಿ ಪರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಪೊಲೀಸ್ ಆರಕ್ಷಕ ನಿರೀಕ್ಷಕ ಗೋಪಿನಾಥ್, ಎಲ್ಲ ಇಲಾಖೆಯ ಅಧಿಕಾರಿಗಳು, ಡಿಎಸ್ಎಸ್ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.

ವರದಿ – ಸಿಟಿಜನ್ ಜರ್ನಲಿಸ್ಟ್ ರಾಮಾಂಜನೇಯ ಗುಬ್ಬಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X