ತುಮಕೂರು | 500 ಕೋಟಿ ಉಚಿತ ಪ್ರಯಾಣ : ಡಿ. ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಸಂಭ್ರಮೋತ್ಸವ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳ ಪೈಕಿ ಅತಿ ಹೆಚ್ಚು ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಡಿ. ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮೋತ್ಸವವನ್ನು ಆಚರಿಸಲಾಯಿತು. 

- Advertisement -

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಬಸ್ಸಿಗೆ ಪೂಜೆ ನೆರವೇರಿಸಿ ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಕ್ತಿ ಯೋಜನೆ ಜಾರಿಯಿಂದ ಮಹಿಳಾ ಪ್ರಯಾಣಿಕರು ಸಂತಸಗೊಂಡಿದ್ದು, ಇದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸ್ತ್ರೀ – ಸ್ವಾವಲಂಬಿಯನ್ನಾಗಿಸುವ ನಿಟ್ಟಿನಲ್ಲಿ 2023ರ ಜೂನ್ 11 ರಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಅತ್ಯಂತ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ. ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಈ ಯೋಜನೆಯಿಂದ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡುವ ಸಂಖ್ಯೆ ಕೂಡ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಬಸ್ಸುಗಳ ಸಂಖ್ಯೆಯನ್ನೂ ಸಹ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. 

ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತಿದೆ ಎಂದ ಅವರು, ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಪ್ರಾರಂಭದಿಂದ ಈವರೆಗೆ 1512.61ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 461 ಕೋಟಿ ರೂ.ಗಳ ಆದಾಯವನ್ನು ತಂದಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ಸೇರಿದಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್. ಚಂದ್ರಶೇಖರ್, ವಿಭಾಗೀಯ ಸಂಚಲನಾಧಿಕಾರಿ ಬಿ. ಮಂಜುನಾಥ್ ಸೇರಿದಂತೆ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು. 

ಕಾರ್ಯಕ್ರಮದ ನಂತರ ಸಚಿವ ಡಾ: ಜಿ.ಪರಮೇಶ್ವರ ಅವರು ಡಿ. ದೇವರಾಜು ಅರಸು ಬಸ್ ನಿಲ್ದಾಣದಲ್ಲಿರುವ ಮೊದಲ ಮಹಡಿಯಲ್ಲಿರುವ ಮನ್ವಿ ಮಾಂಸಹಾರಿ ಹೋಟೆಲ್ ಹಾಗೂ ಅನ್ನಪೂರ್ಣೇಶ್ವರಿ, ಹೋಟೆಲ್‌ಗೆ ಭೇಟಿ ನೀಡಿ, ಅಡುಗೆ ಮನೆ ಶುಚಿತ್ವವನ್ನು ಪರಿಶೀಲಿಸಿದ ಅವರು, ಚಹಾ ಸೇವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....