ತುಮಕೂರು | ಮಕ್ಕಳ ಕಳ್ಳಸಾಗಾಣೆ ಪ್ರಕರಣದ 7 ಮಂದಿ ಬಂಧನ; ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ಎಸ್‌ಪಿ ಶ್ಲಾಘನೆ

Date:

ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣವನ್ನು ಪೊಲೀಸ್ ವಿಶೇಷ ತನಿಖಾ ತಂಡ ಭೇದಿಸಿದ್ದು, ಐದು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಕಳ್ಳಸಾಗಾಣೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ತಿಳಿಸಿದರು.

- Advertisement -

ತುಮಕೂರು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಒಂಬತ್ತು ಮಕ್ಕಳ ಪೈಕಿ ಒಂದು ಮಗುವನ್ನು ಪೋಷಕರ ಸುಪರ್ದಿಗೆ ವಹಿಸಲಾಗಿದೆ. ಮತ್ತೊಂದು ಮಗು ಮೃತಪಟ್ಟಿದೆ. ಉಳಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ದತ್ತು ಸ್ವೀಕಾರ ಕೇಂದ್ರದಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮಗು ಕಳವಾಗಿರುವ ಬಗ್ಗೆ ಜೂನ್‌ 19ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಭೇದಿಸಲು ಅಪರ ಪೊಲೀಸ್ ಅಧೀಕ್ಷಕರುಗಳಾದ ವಿ ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ ಶಿರಾ ಉಪ ವಿಭಾಗದ ಡಿವೈಎಸ್‌ಪಿ ಬಿ ಕೆ ಶೇಖರ್, ಗುಬ್ಬಿ ವೃತ್ತದ ಸಿಪಿಐ ಗೋಪಿನಾಥ್ ವಿ ಹಾಗೂ ಗುಬ್ಬಿ ಠಾಣೆಯ ಪಿಎಸ್‌ಐ ಸುನೀಲ್ ಕುಮಾರ್ ಜಿ ಕೆ ಹಾಗೂ ಸಿಬ್ಬಂದಿಗಳಾದ ನವೀನ್ ಕುಮಾರ್, ವಿಜಯ ಕುಮಾರ್, ಮಧುಸೂಧನ್ ಹಾಗೂ ಎಸ್‌ಪಿ ಕಚೇರಿಯ ಸಿಬ್ಬಂದಿ ನರಸಿಂಹರಾಜು, ದುಶ್ಯಂತ್ ಅವರನ್ನು ಒಳಗೊಂಡ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು” ಎಂದರು.

“ತನಿಖಾ ತಂಡ ಪ್ರಕರಣವನ್ನು ಭೇದಿಸಲು ಹೋದಾಗ ಗರ್ಭ ಧರಿಸಿದ ಅವಿವಾಹಿತ ಮಹಿಳೆಯರು, ಅಕ್ರಮ ಸಂಬಂಧದಿಂದ ಗರ್ಭ ಧರಿಸಿದವರನ್ನು ಪತ್ತೆ ಮಾಡಿ ಅವರಿಂದ ಮಕ್ಕಳನ್ನು ಪಡೆದು ಮಕ್ಕಳಿಲ್ಲದ ದಂಪತಿಗಳಿಂದ ಹೆಚ್ಚಿನ ಹಣ ಪಡೆದು ಮಾರಾಟ ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಈ ಕೃತ್ಯಕ್ಕೆ ಹುಳಿಯಾರಿನ ಗೂಬೆ ಹಳ್ಳಿ ಪಿಎಚ್‌ಸಿಯ ಫಾರ್ಮಾಸಿಸ್ಟ್ ಮೆಹೆಬೂಬ್ ಷರೀಫ್ ಎಂಬವವ ಸಹಕರಿಸಿರುತ್ತಾನೆ. ಈತನ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ” ಎಂದು ಅವರು ಹೇಳಿದರು.

“ತುಮಕೂರು ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುವ ಮಹೇಶ ಯು ಡಿ(39), ಜಾತ್ರೆಗಳಲ್ಲಿ ಟ್ಯಾಟೂ ಹಾಕುವ ಗುಬ್ಬಿ ತಾಲೂಕಿನ ಬಿಕ್ಕೇ ಗುಡ್ಡ ಗ್ರಾಮದ ಕೆ ಎನ್ ರಾಮಕೃಷ್ಣಪ್ಪ (53), ಡ್ರೈವರ್ ಕೆಲಸ ಮಾಡುವ ತುಮಕೂರಿನ ಭಾರತೀ ನಗರದ ಹನುಂಮತ ರಾಜು(45), ಮಧುಗಿರಿ ದೊಡ್ಡೇರಿಯ ಪಿಎಚ್‌ಸಿಯಲ್ಲಿ ಸ್ಟಾಫ್ ನರ್ಸ್ ಆಗಿರುವ ಪೂರ್ಣಿಮಾ ಎನ್(39), ಶಿರಾ ಟೌನ್‌ನ ಸ್ಟಾಫ್ ನರ್ಸ್ ಸೌಜನ್ಯ(48), ಹುಳಿಯಾರಿನ ಗೂಬೆಹಳ್ಳಿಯ ಪಿಎಚ್‌ಸಿಯ ಫಾರ್ಮಾಸಿಸ್ಟ್ ಮೆಹೆಬೂಬ್ ಷರೀಫ್(52) ಹಾಗೂ ಮಂಡ್ಯದ ಬೆಳ್ಳೂರಿನ ಆಟೋ ಡ್ರೈವರ್ ಮುಬಾಕರ್ ಪಾಷ(44) ಬಂಧಿತ ಆರೋಪಿಗಳು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗಳ ಬೇಡಿಕೆ ಈಡೇಸುವಂತೆ ಕಾಟನ್ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಆಗ್ರಹ

“ಮಕ್ಕಳನ್ನು ಅಪಹರಿಸಲು ಆರೋಪಿಗಳು ಬಳಸಿದ್ದ ಮಾರುತಿ-800 ಕಾರು, 50 ಸಾವಿರ ನಗದು, ನಾಲ್ಕು ಮೊಬೈಲ್‌ಗಳನ್ನು ವಶಕ್ಕೆ ಪಡೆದಿರುತ್ತಾರೆ. ಆರೋಪಿತರು ಮಾರಾಟ ಮಾಡಿದ ಮಕ್ಕಳ ಜನನದ ಬಗ್ಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಜನ್ಮ ದೃಢೀಕರಣ ಪತ್ರವನ್ನು ನೀಡಿರುವುದು ತನಿಖೆಯಿಂದ ಗೊತ್ತಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ” ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಎಎಸ್‌ಪಿ ವಿ ಮರಿಯಪ್ಪ, ತುಮಕೂರು ಹಾಗೂ ಶಿರಾ ಡಿವೈಎಸ್‌ಪಿ ಹಾಗೂ ತನಿಖಾ ತಂಡದ ಪೊಲೀಸರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...