ತುಮಕೂರು | ಪಿಕ್‌ನಿಕ್‌ಗೆ ಹೋಗಿದ್ದ 7 ಮಂದಿ ನೀರು ಪಾಲು; ಒಬ್ಬರ ರಕ್ಷಣೆ

Date:

ಪಿಕ್ನಿಕ್‌ಗೆ ತೆರಳಿದ್ದ 15 ಮಂದಿಯ ತಂಡದಲ್ಲಿ ಸುಮಾರು 7 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ಮಾರ್ಕೊನಹಳ್ಳಿ ಅಣೆಕಟ್ಟಿನ ಬಳಿ ನಡೆದಿದೆ. ಒಬ್ಬರನ್ನು ರಕ್ಷಿಸಲಾಗಿದೆ. ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮೃತರು ಮತ್ತು ಇತರರನ್ನು ಅಮೃತೂರು ಠಾಣೆಯ ಎಎಸ್‍ಐ ಜಿಲಾನಿ ಅವರ ಸಂಬಂಧಿಗಳು ಎಂದು ಗುರುತಿಸಲಾಗಿದೆ. ಮಾಗಡಿಯಲ್ಲಿರುವ ಜಿಲಾನಿ ಅವರ ಮನೆಗೆ ಅವರ ಸಂಬಂಧಿಗಳು ಬಂದಿದ್ದರು. ಮಂಗಳವಾರ ಸಂಜೆ, ಕುಣಿಗಲ್ ತಾಲೂಕಿನಲ್ಲಿರುವ ಮಾರ್ಕೊನಹಳ್ಳಿ ಅಣೆಕಟ್ಟು ವೀಕ್ಷಿಸಲು ತೆರಳಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಣೆಕಟ್ಟಿನ ಮುಂಭಾಗದ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ, ಸೈಫನ್ ವ್ಯವಸ್ಥೆಯು ಇದ್ದಕ್ಕಿದ್ದಂತೆ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದೆ. ನೀರಿನ ಹರಿವು ಏಕಾಏಕಿ ಹೆಚ್ಚಾಗಿದ್ದರಿಂದ, 7 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ.

ಈ ಲೇಖನ ಓದಿದ್ದೀರಾ?: ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆ ಪ್ರಯತ್ನ- ಭಾರತದ ಆರದ ಗಾಯ

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 7 ಮಂದಿ ಕೊಚ್ಚಿ ಹೋಗಿದ್ದಾರೆ. ಅವರಲ್ಲಿ, ಒಬ್ಬರನ್ನು ರಕ್ಷಿಸಲಾಗಿದೆ. ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಅಗ್ನಿಶಾಮಕ ಮತ್ತು ಪೊಲೀಸ್‌ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ ಎಂದು ತುಮಕೂರಿನ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ತಿಳಿಸಿದ್ದಾರೆ.

ಅಣೆಕಟ್ಟು ಎಂಜಿನಿಯರ್‌ಗಳ ಪ್ರಕಾರ, ನೀರಿನ ಹರಿವಿನಲ್ಲಿ ಹಠಾತ್ ಹೆಚ್ಚಳದಿಂದಾಗಿ ಈ ಘಟನೆ ಸಂಭವಿಸಿದೆ. ಆದರೂ ಸೈಫನ್ ಬಿಡುಗಡೆಗೆ ನಿಖರವಾದ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...