ತುಮಕೂರು | ಒಳಮೀಸಲಾತಿ ಪಾದಯಾತ್ರೆಯಲ್ಲಿ 8 ಮಂದಿ ಅಸ್ವಸ್ಥ : ಶಿರಾ ಆಸ್ಪತ್ರೆಗೆ ದಾಖಲು

Date:

ಒಳಮೀಸಲಾತಿಗಾಗಿ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಬುಧವಾರ ಶಿರಾ ತಾಲೂಕಿಗೆ ಆಗಮಿಸಿದ್ದು, ತಾಲೂಕಿನ ತಾವರೆಕೆರೆಗೆ ಪಾದಯಾತ್ರೆ ಆಗಮಿಸುತ್ತಿದ್ದು, ಪಾದಯಾತ್ರೆಯಲ್ಲಿದ್ದ ಸುಮಾರು 8 ಮಂದಿ ಅಸ್ವಸ್ಥರಾಗಿ ಶಿರಾ ನಗರದ ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. 

- Advertisement -

 ತೀವ್ರ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ಒಳಮೀಸಲಾತಿ ಹೋರಾಟಗಾರರ ಆರೋಗ್ಯ ವಿಚಾರಿಸಿ ಮಾತನಾಡಿದ ಒಳಮೀಸಲಾತಿ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಬಿ.ಆರ್.ಭಾಸ್ಕರ್ ಪ್ರಸಾದ್,  ಮಾದಿಗ ಸಮುದಾಯ ಸುಮಾರು 30 ವರ್ಷಗಳ ಕಾಲ ನಿರಂತರ ಹೋರಾಟ ಮಾಡಿದ ಫಲವಾಗಿ ಸುಪ್ರಿಂ ಕೋರ್ಟಿನ 7 ನ್ಯಾಯಾಧೀಶರ ಪೀಠ 2024ರ ಆಗಸ್ಟ್ 01 ರಂದು ಒಳಮೀಸಲಾತಿ ಜಾರಿ ಅಯಾಯ ರಾಜ್ಯ ಸರ್ಕಾರಗಳು ಮಾಡಬಹುದು ಎಂಬ ತೀರ್ಪು ನೀಡಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂಪೇರಿಕಲ್ ಡಾಟಾ ಹೆಸರಿನಲ್ಲಿ ಒಳಮೀಸಲಾತಿ ಜಾರಿ ಮಾಡದೆ ವಿಳಂಭ ಧೋರಣೆ ಅನುಸರಿಸುತ್ತಿದೆ. ಈ ಸರ್ಕಾರಕ್ಕೆ ಸ್ವಲ್ಪವೂ ಮಾನವೀಯತೆ ಇಲ್ಲ. ಒಳಮೀಸಲಾತಿ ಹೋರಾಟಗಾರರು ಸರ್ಕಾರವನ್ನು ಎಚ್ಚರಿಸಲು ಪ್ರತಿಭಟನಾ ರೂಪವಾಗಿ ಮೊನ್ನೆ ರಕ್ತದಾನ ಮಾಡಿದ್ದೆವು. ರಕ್ತದಾನ ಮಾಡಿಯೂ ಪಾದಯಾತ್ರೆ ಮುಂದುವರೆಸಿರುವ ಕಾರಣ ಕೆಲವರು ಅಸ್ವಸ್ಥರಾಗಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ. ಈಗಾಗಲೇ ನಾವು ನಮ್ಮ ಮನೆಗಳಲ್ಲಿ ಹೇಳಿ ಬಂದಿದ್ದೇವೆ. ನಾವು ಒಳಮೀಸಲಾತಿ ಜಾರಿ ಮಾಡಿಸಿ ಮನೆಗೆ ಬರುತ್ತೇವೆ. ಇಲ್ಲವಾದರೆ ನಮ್ಮ ಹೆಣಗಳು ಮನೆಗೆ ಬರುತ್ತವೆ ಎಂದು ಹೇಳಿದ್ದಾರೆ. ನಮ್ಮ ಪ್ರಾಣ ಹೋದರೂ ಸಹ ನಾವೂ ಒಳಮೀಸಲಾತಿ ಜಾರಿಯಾಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

 ಒಳಮೀಸಲಾತಿ ಹೋರಾಟದ ಪಾದಯಾತ್ರೆಯಲ್ಲಿ ಅಸ್ವಸ್ಥರಾದವರನ್ನು ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಎನ್.ಮೂರ್ತಿ, ದಲಿತ ಮುಖಂಡರಾದ ಕೊಟ್ಟ ಶಂಕರ್, ಗುಮ್ಮನಹಳ್ಳಿ ಮಂಜುನಾಥ್ ಸೇರಿದಂತೆ ಹಲವರು ಆಗಮಿಸಿ ಆರೋಗ್ಯ ವಿಚಾರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...