ತುಮಕೂರು | ಸಮತೆ-ಮಮತೆಗಳ ಪರಂಪರೆ ಅಗತ್ಯ : ಬರಗೂರು ರಾಮಚಂದ್ರಪ್ಪ

Date:

Advertisements

ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ-ಮಮತೆಗಳ ಪರಂಪರೆ ಅಗತ್ಯ ಎಂದು ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು

ತುಮಕೂರು ದಸರಾ ಉತ್ಸವ ಅಂಗವಾಗಿ ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಪ್ರೊ ಹೆಚ್.ಜಿ. ಸಣ್ಣಗುಡ್ಡಯ್ಯ ಹಾಗೂ ವೀಚಿ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಸಂವಾದಗೋಷ್ಠಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಂಪರೆ ಎಲ್ಲಾ ಕಾಲದಲ್ಲಿಯೂ ಬೆಳವಣಿಗೆ ಹೊಂದುತ್ತಾ ಬರುತ್ತಿದ್ದು, ಸಂಸ್ಕೃತಿ ಮತ್ತು ಪರಂಪರೆಗಳ ನಡುವಿನ ಸೂಕ್ಷ್ಮ ವ್ಯತ್ಯಾಸಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಬರವಣಿಗೆ ಸಂಸ್ಕೃತಿಯ ಜೊತೆ-ಜೊತೆಗೆ ಜನಮೂಲ ಸಂಸ್ಕೃತಿಯನ್ನು ತಿಳಿದಾಗ ಮಾತ್ರ ಈ ನೆಲದ ಮೂಲ ಪರಂಪರೆಯ ನೆಲೆಗಟ್ಟನ್ನು ನೋಡಲು ಸಾಧ್ಯ ಎಂದು ತಿಳಿಸಿದರು.

1000536792

ತುಮಕೂರು ಜಿಲ್ಲೆಯು ಕನ್ನಡ ಭಾಷೆ ಹಾಗೂ ರಾಜ್ಯಕ್ಕೆ ಹಲವು ಮೊದಲುಗಳನ್ನು ನೀಡಿದೆ. ಕನ್ನಡದ ಮೊದಲ ನಾಟಕ ಸಂಸ್ಥೆ, ಕನ್ನಡ ಮೊದಲ ಟಾಕಿ ಸಿನಿಮಾಗೆ ಚಿತ್ರಕಥೆ, ಸಾಹಿತ್ಯ, ಬರವಣಿಗೆ ಸೇರಿದಂತೆ ಕಲೆ, ವಿಜ್ಞಾನ, ಸಾಹಿತ್ಯ, ಸಿನಿಮಾ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಜಿಲ್ಲೆಗೆ ತನ್ನದೇ ಆದ ಇತಿಹಾಸ ಇರುವುದರಿಂದ ಜಿಲ್ಲೆಯ ಸಾಧಕರನ್ನು ಕುರಿತು ತಿಳಿಸುವಂತಹ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

Advertisements

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಸಮಾಜದಲ್ಲಿನ ಆಗು-ಹೋಗುಗಳ ಕುರಿತು ತಮ್ಮದೆ ಆದ ದೃಷ್ಟಿಕೋನದಲ್ಲಿ ವಿಮರ್ಶಿಸುವ ಸಾಹಿತಿಗಳು ಸಮಾಜದ ನಿಜವಾದ ಸಾಕ್ಷಿಪ್ರಜ್ಞೆಗಳಾಗಿದ್ದಾರೆ ಎಂದು ತಿಳಿಸಿದರು. ವಿಶ್ವ ವಿದ್ಯಾನಿಲಯಗಳು ಕೇವಲ ಪದವಿಗಳನ್ನು ನೀಡುತ್ತವೆ. ಆದರೆ ಭಾರತದ ಸಂಸ್ಕೃತಿ ಬದುಕನ್ನು ಕಟ್ಟಿಕೊಳ್ಳುವುದನ್ನು ಕಲಿಸುತ್ತದೆ. ಭಾರತದ ಮೂಲ ಸಂಸ್ಕೃತಿ ಪರಂಪರೆಯ ಬಗ್ಗೆ ವಚನಕಾರರು, ಸಾಹಿತಿಗಳು, ಚಿಂತಕರು ತಿಳಿಸಿರುವ ಕಾನೂನು ವ್ಯವಸ್ಥೆ, ಅಧುನಿಕ ಯುಗದಲ್ಲಿ ಮಹಿಳೆಯ ಪಾತ್ರ, ಸಮಾನತೆ, ಬಹುತ್ವ ವಿಷಯಗಳ ಕುರಿತು ಚರ್ಚೆ ನಡೆಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಂ. ಟಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಸಾಹಿತಿ ನಾಗಭೂಷಣ ಬಗ್ಗನಡು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಹಿರಿಯ ಪತ್ರಕರ್ತ ಎಸ್. ನಾಗಣ್ಣ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್, ಚಿತ್ರ ಕಲಾವಿದರಾದ ಕೋಟೆಕುಮಾರ್, ಪ್ರಭು ಹರಸೂರು, ಲಕ್ಷ್ಮಣ್ ದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಕವಿಗೋಷ್ಠಿ ಉಪಸಮಿತಿ ಅದ್ಯಕ್ಷ ಬಾಲಗುರುಮೂರ್ತಿ, ದಸರಾ ಕವಿಗೋಷ್ಠಿ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ ಹಾಗೂ ರಂಗನಾಥ ಕೆ. ಮರಡಿ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X