ತುಮಕೂರು | ಮಮತೆಯ ತೊಟ್ಟಿಲು ಸೇರಿದ ನವಜಾತ ಶಿಶು

Date:

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ದಯಾಕಿರಣ ದತ್ತು ಕೇಂದ್ರದ ಮುಂದೆ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ನವಜಾತ ಗಂಡು ಮಗುವನ್ನು ಅಪರಿಚಿತರು ಭಾನುವಾರ ಬಿಟ್ಟುಹೋಗಿರುವುದು ಬೆಳಕಿಗೆ ಬಂದಿದೆ.

ದಯಾಕಿರಣ ಸಂಯೋಜಕ ರಮೇಶ್ ಕುಣಿಗಲ್ ಅವರು ಪೊಲೀಸ್ ಠಾಣೆಗೆ ದೂರು ನೀಡಿ ಮುಂದಿನ ಕ್ರಮ ಕೈಗೊಂಡು ಮಗುವಿನ ಸಂರಕ್ಷಣೆಗೆ ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ನಾನಾ ಕಾರಣಗಳಿಂದ ತಾಯಂದಿರಿಂದ ಪರಿತ್ಯಕ್ತ ಮಕ್ಕಳು ಕಸದ ತೊಟ್ಟಿ, ಬೇಲಿ ಬದಿ, ಪಾಳುಬಿದ್ದ ಬಾವಿಗಳಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ದಯಾಭವನ ಸಂಸ್ಥೆ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಸಹಯೋಗದಲ್ಲಿ ‘ಹುಟ್ಟಿದ ಮಗು ಕಸದ ತೊಟ್ಟಿಗಲ್ಲ, ಮಮತೆಯ ತೊಟ್ಟಿಲಿಗೆ’ ಎಂಬ ಯೋಜನೆ ಜಾರಿಗೆ ತಂದಿತ್ತು. ಜಿಲ್ಲಾಸ್ಪತ್ರೆ ಸೇರಿದಂತೆ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತೊಟ್ಟಿಲುಗಳನ್ನಿಟ್ಟು, ಬೇಡವಾದ ಮಕ್ಕಳನ್ನು ಬಿಸಾಕುವ ಬದಲು ಮಮತೆಯ ತೊಟ್ಟಿಲಿಗಿಡಲು ಮನವಿ ಮಾಡಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಮಲ್ಲಿಕಾರ್ಜುನ್ ಲೋಣಿ

“ದಯಾಕಿರಣ ದತ್ತು ಕೇಂದ್ರದ ಮಮತೆಯ ತೊಟ್ಟಿಲಿಗೆ ಈವರೆಗೆ ಮೂರು ಮಕ್ಕಳನ್ನು ತಂದು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಸಂರಕ್ಷಣೆ ಮಾಡಿ ಪೋಷಣೆ ಮಾಡಲಾಗುತ್ತಿದೆ” ಎಂದು ದಯಾಭವನ ಸಂಯೋಜಕ ರಮೇಶ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ...

ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ...