ತುಮಕೂರು | ಪೋಕ್ಸೋ ಪ್ರಕರಣ ಮರೆಮಾಚಲು ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

Date:

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿ ಕೆ.ಅರಿವೇಸಂದ್ರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ನೀಡಿದ ಲೈಂಗಿಕ ಕಿರುಕುಳ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ದೂರು ದಾಖಲಾದರೂ ಘಟನೆ ಮುಚ್ಚುವ ಕೆಲಸ ಮಾಡಿದ ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ಒತ್ತಾಯಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ 28ಸಾವಿರ ಬಾಲ ಗರ್ಭಿಣಿಯರು ಇದ್ದಾರೆ. ಆದರೆ, ಇಂತಹ ಪ್ರಕರಣ ತಡೆ ಹಿಡಿಯುವ ಅಧಿಕಾರಿಗಳ ಸಂಖ್ಯೆ 53ಸಾವಿರ. ಆದರೂ ಕೆ.ಅರಿವೇಸಂದ್ರ ಗ್ರಾಮದಲ್ಲಿ ನಡೆದ ಸಣ್ಣ ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಬೇಕಾದ ಅಧಿಕಾರಿಗಳು ಇಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರಕರಣದಲ್ಲಿ ಶಾಮೀಲು ಆಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಆರೋಪಿಸಿದರು.

ಜವಾಬ್ದಾರಿಯುತ ಅಧಿಕಾರಿಗಳು ಕರ್ತವ್ಯ ಲೋಪದ ಜೊತೆಗೆ, ತಮ್ಮ ಸಮಾಜಮುಖಿ ಕರ್ತವ್ಯ ಮರೆತ ಕೆಲ ಪತ್ರಕರ್ತರು ಇಡೀ ಪ್ರಕರಣ ಬೆಳಕಿಗೆ ತರುವಲ್ಲಿ ಮುಂದಾಗದೇ ನೈಜತೆ ತಿಳಿಯದೆ ಆರೋಪಿ ಪರ  ನಿಂತವರ ಜೊತೆ ಪ್ರಕರಣ ಮುಚ್ಚುವ ಕಾರ್ಯಕ್ಕೆ ಕೈ ಜೋಡಿಸಿರುವುದು ಶೋಚನೀಯ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಕ್ಕಳ ಹಕ್ಕು ಆಯೋಗ ಬರೆದ ಪತ್ರದಿಂದ ಬೆಳಕಿಗೆ ಬಂದ ಈ ಪ್ರಕರಣದಲ್ಲಿ, ಈ ಹಿಂದೆ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆ ಮೇಲಾಧಿಕಾರಿಗಳು ಅವಲೋಕಿಸಬೇಕಿದೆ. ಘಟನೆ ನಡೆದ ಮರು ದಿನವೇ ಸಂತ್ರಸ್ತ ತಾಯಿ ಮಗು ಹೇಳಿಕೆ ನೀಡಿದ್ದರು ಎನ್ನುವ ಮಾಹಿತಿ ಇದ್ದು, ಈ ಬಗ್ಗೆ ಜಿಲ್ಲಾ ವರಿಷ್ಠಾಧಿಕಾರಿಗಳು ತನಿಖೆಗೆ ಒಳಪಡಿಸಬೇಕು. ಪ್ರಕರಣ ಮರೆ ಮಾಚಲು ಯತ್ನಿಸಿದ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...