ತುಮಕೂರು |ಕೊಲ್ಕತ್ತಾ ವೈದ್ಯೆ ಕೊಲೆ ಖಂಡಿಸಿ ಎಐಡಿಎಸ್ಓ ಮೊಂಬತ್ತಿ ಮೆರವಣಿಗೆ

Date:

ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಕಿರಿಯ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆಯನ್ನು ಖಂಡಿಸಿ ಇಂದು ಎಐಡಿಎಸ್ಓ ವತಿಯಿಂದ ತುಮಕೂರು ಟೌನ್ ಹಾಲ್ ವೃತ್ತದಿಂದ ಸ್ವಾತಂತ್ರ್ಯ ಚೌಕದವರೆಗೆ ಮೋಂಬತ್ತಿ ಮೆರವಣಿಗೆ ಮಾಡಲಾಯಿತು.

- Advertisement -

ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಮಾತನಾಡಿ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳಿಗೆ ಮಾದ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನ, ಇಂಟರ್‌ನೆಟ್, ಮೊಬೈಲ್‌ಗಳ ಮೂಲಕ ಪೋರ್ನೋಗ್ರಫಿಕ್ ವೆಬ್‌ಸೈಟ್‌ಗಳನ್ನು ಹರಿಬಿಡುತ್ತಿರುವುದು, ದುರಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣವಾಗಿವೆ. ವಿಕೃತ ಮನಸ್ಥಿತಿ ಬೆಳೆಸಿಕೊಂಡು ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರದಂತಹ ಹೀನ, ಅನಾಗರಿಕ, ಅಮಾನವೀಯ ಕೃತ್ಯವನ್ನು ಎಸಗುತ್ತಿದ್ದಾರೆ. ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಭಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರಗಳು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಂಡಿಲ್ಲ. ಜೊತೆಗೆ ಇಂದಿನ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸಡಿಲತೆ, ನೂನ್ಯತೆಗಳಿಂದಾಗಿ ಎಷ್ಟೋ ಇಂತಹ ಅಪರಾಧಗಳನ್ನು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ವಿದ್ಯಾರ್ಥಿ-ಯುವಜನರು, ಪುರುಷ-ಮಹಿಳೆಯರು ಒಂದಾಗಿ ನಮ್ಮ ದೇಶದ ನವೋದಯ ಹರಿಕಾರರ, ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳ ಜೀವನ ಹೋರಾಟಗಳಿಂದ ಸ್ಪೂರ್ತಿ ಪಡೆದು ಉನ್ನತವಾದ ನೀತಿ, ನೈತಿಕತೆ, ಸಂಸ್ಕೃತಿಯ ತಳಹದಿಯ ಮೇಲೆ ಪ್ರಭಲ ಹೋರಾಟ ಕಟ್ಟಿ ಬೆಳೆಸಬೇಕಾಗಿದೆ. ಇಂತಹ ಹೋರಾಟದ ಮೂಲಕ ಮಾತ್ರವೇ ನಿಜವಾದ ಸಮಾನತೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾದ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2024 08 21 at 9.44.40 PM

ಎಐಡಿಎಸ್ಓ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಅಲ್ಲದೆ ದೇಶದಾದ್ಯಂತ ಜನರು ಈ ಘಟನೆಯನ್ನು ಖಂಡಿಸಿ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಾಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಮತ್ತು ಪ್ರತಿಭಟನಾಕಾರರ ಮನಸ್ಸಿನಲ್ಲಿ ಭಯದ ಭಾವನೆಯನ್ನು ಹುಟ್ಟಿಸಲು 14 ಆಗಸ್ಟ್ 2024 ರಂದು ಮಧ್ಯರಾತ್ರಿ ಆರ್ ಜಿ ಕಾರ್ ವೈದ್ಯಕೀಯ ಕಾಲೇಜಿಗೆ ನುಗ್ಗಿ ಪ್ರತಿಭಟನೆಯ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯ ಎಸಗಿಸುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಈ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆಸ್ಪತ್ರೆಯ ಅಧಿಕಾರಿಗಳು ಸಹ ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿಲ್ಲ, ಬದಲಾಗಿ ಅಪರಾಧಿಗಳೊಂದಿಗೆ ಶಾಮೀಲಾಗಿದ್ದು ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ. ಗುಂಡಾಗಳ ಇಂತಹ ಕೃತ್ಯಗಳು ಅಪರಾಧ ಎಸಗಿದವರಿಗೆ ಮಾತ್ರ ಸಹಾಯ ಮಾಡುತ್ತವೆ ಮತ್ತು ನಿಜವಾದ ಪ್ರತಿಭಟನಾಕಾರರನ್ನು ಸಮಾಜ ವಿರೋಧಿಗಳೆಂದು ಬಿಂಬಿಸುವ ಮತ್ತು ಚಳವಳಿಯನ್ನು ಹತ್ತಿಕ್ಕುವ ಶಕ್ತಿಯ ಕೈಗಳನ್ನು ಬಲಪಡಿಸುತ್ತವೆ. ಆದ್ದರಿಂದ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೆ ಜಾಗರೂಕತೆಯಿಂದ ಹೋರಾಟವನ್ನು ಬೆಳೆಸಬೇಕಾಗಿದೆ ಎಂದರು.

ಎಐಡಿಎಸ್ಓ ನ ಭರತ್, ಸೈಯದ್, ಸುಮಂತ್ ಮುಂತಾದವರು ಮೆರವಣಿಗೆಯ ನೇತೃತ್ವ ವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...