ತುಮಕೂರು|ಕಲ್ಕತ್ತಾದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಎಐಡಿಎಸ್ಓ ಪ್ರತಿಭಟನೆ

Date:

ಕಲ್ಕತ್ತಾದ ಆರ್ ಜೆ ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿರುವ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ತುಮಕೂರು ನಗರದ ಟೌನ್ ಹಾಲ್ ನಿಂದ ಎಂ.ಜಿ ರಸ್ತೆ ಮಾರ್ಗವಾಗಿ ಎಐಡಿಎಸ್ಓ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಕ್ಯಾಂಡಲ್ ಮೆರವಣಿಗೆ ಮಾಡಲಾಯಿತು.

- Advertisement -

ಮೆರವಣಿಗೆ ಉದ್ದೇಶಿಸಿ ಎಐ ಡಿಎಸ್ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ, ನಮ್ಮ ಸಮಾಜವು ಇಂದು ಅತ್ಯಂತ ತೀವ್ರ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಮಹಿಳೆಯರ ಮೇಲೆ ಅಪರಾಧಗಳು ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ, 12-13 ವರ್ಷದ 3 ಜನ ಶಾಲಾ ಮಕ್ಕಳು 3ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅವಳನ್ನು ಕೊಂದರು. ಮುಂಬೈನಲ್ಲಿ ಕೂಡ ಇದೇ ವಯಸ್ಸಿನ ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಕಲ್ಕತ್ತಾದ ವೈದ್ಯಕೀಯ ಕಾಲೇಜೊಂದರಲ್ಲಿ ಕಾಮುಕನಿಗೆ ಬಲಿಯಾಗಿ ಘೋರ ಸಾವಿಗೀಡಾದ ವೈದ್ಯೆ ಈ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ. ನಾಗರೀಕ ಸಮಾಜವು ತಲೆತಗ್ಗಿಸುವಂತೆ ಮಾಡಿರುವ ಈ ಅತ್ಯಾಚಾರದ ಮಾರಿಯು ತೀವ್ರವಾಗಿ ಎಲ್ಲೆಡೆ ಹಬ್ಬುತ್ತಿದೆ. ಈ ಮಾರಿಯ ಮೂಲ ಅಡಗಿರುವುದು ಇಂದಿನ ಸಾಂಸ್ಕೃತಿಕ ಅಧಃಪತನದಲ್ಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಲ್ಕತ್ತಾದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ. ಈ ಘಟನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ದಿಕ್ಕು ತಪ್ಪಿಸುವ ಹೀನ ಪ್ರಯತ್ನವನ್ನು ಆಡಳಿತಾರೂಢ ಟಿಎಂಸಿ ಸೇರಿದಂತೆ ಪಟ್ಟಭದ್ರರು ನಡೆಸುತ್ತಿದ್ದಾರೆ. ಆದರೆ ಸರಿಯಾದ ದಾರಿಯಲ್ಲಿ ಮುನ್ನಡೆದು ಸಂಘಟಿತ ಹೋರಾಟವನ್ನು ಬೆಳೆಸುವುದರಿಂದ ಮಾತ್ರ ಪರಿಹಾರ ಸಾಧ್ಯ. ಇಂದು ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ, ಸಾಹಿತ್ಯ ಮತ್ತು ಪೋರ್ನ್ ವೆಬ್ ಸೈಟ್ ಗಳು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ ಸಾಂಸ್ಕೃತಿಕ ಅಧಃಪತನಕ್ಕೆ ಕಾರಣವಾಗಿವೆ.

ಸಾಂಸ್ಕೃತಿಕ ಅಧಃಪತನದ ಮಹಾಮಾರಿಯ ವಿರುದ್ಧ ಸಮರ ಸಾರಿ ನೇತಾಜಿ-ಭಗತ್ ಸಿಂಗರಂತಹ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳು ಹಾಗೂ ನವೋದಯದ ಹರಿಕಾರರ ಉನ್ನತ ಚಿಂತನೆಗಳನ್ನು ಎಲ್ಲೆಡೆ ಸಾರುವ ಐತಿಹಾಸಿಕ ಜವಾಬ್ದಾರಿಯು ವಿದ್ಯಾರ್ಥಿ ಸಮೂಹದ ಮೇಲಿದೆ. ಈ ನಿಟ್ಟಿನಲ್ಲಿ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯು ಆಗಸ್ಟ್ 19ರಂದು ರಾಜ್ಯವ್ಯಾಪಿ ಪ್ರತಿಭಟನಾ ದಿನಕ್ಕೆ ಕರೆ ನೀಡಿದೆ. ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯದಲ್ಲಿ ಒಂದು ಹೊಸ ಸಾಂಸ್ಕೃತಿಕ ಚಳುವಳಿಗೆ ನಾಂದಿ ಹಾಡಬೇಕೆಂದು ರಾಜ್ಯದ ವೈದ್ಯಕೀಯ, ಇಂಜನಿಯರಿಂಗ್, ಪದವಿ ಸೇರಿದಂತೆ ಎಲ್ಲ ವಿದ್ಯಾರ್ಥಿಗಳು ಹಾಗೂ ಪ್ರಜ್ಞಾವಂತ ಜನತೆಗೆ ಕರೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...