ತುಮಕೂರು | ಶಿಕ್ಷಣದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಬಿ ನಂಜುಂಡಪ್ಪ

Date:

ಇಡೀ ಪ್ರಪಂಚದಲ್ಲಿ ಶಿಕ್ಷಣಕ್ಕೆ ಮಾತ್ರವೇ ವ್ಯಕ್ತಿಯನ್ನು ಶ್ರೀಮಂತ ಹಾಗೂ ಶ್ರೇಷ್ಠ ವ್ಯಕ್ತಿಯನ್ನಾಗಿ ರೂಪಿಸುವ ಶಕ್ತಿ ಇದೆ. ಅದನ್ನು ಶ್ರದ್ಧೆಯಿಂದ ಪಡೆಯಬೇಕು ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬಿ ನಂಜುಂಡಪ್ಪ ಪ್ರತಿಪಾದಿಸಿದರು.

- Advertisement -

ತುಮಕೂರು ನಗರದ ಸರಸ್ವತಿಪುರಂನಲ್ಲಿರುವ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

“ಒಬ್ಬ ಸಾಮಾನ್ಯ, ಕಡುಬಡವನ ಮಗನೂ ಮೆಚ್ಚುಗೆ ಗಳಿಸಿ, ಧನಸಹಾಯ ಪಡೆಯುವ ಹಂತಕ್ಕೆ, ವಿದೇಶದಲ್ಲಿ ವ್ಯಾಸಂಗ ಮಾಡುವ ಸ್ಥಾನಕ್ಕೆ ಬೆಳೆದನೆಂದರೆ ಅದಕ್ಕೆ ಆತ ಪಡೆದ ಶಿಕ್ಷಣ, ಅದರಲ್ಲಿ ಮಾಡಿದ ಸಾಧನೆಯೇ ಕಾರಣ” ಎಂದರು.

“ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರುತ್ತಿದ್ದಾರೆ. ಬಿಇಡಿ ಶಿಕ್ಷಣ ಮಹಾವಿದ್ಯಾಲಯಗಳಲ್ಲೂ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಇದು ಸಕಾಲ ಕೂಡ. ತಾಯಿ ಮಕ್ಕಳಿಗೆ ಕಲಿಸುವಂತೆ ಎಲ್ಲ ಮಹಿಳಾ ಶಿಕ್ಷಕರು ಮಕ್ಕಳಿಗೆ ಕಲಿಸಬೇಕು” ಎಂದು ಬಿ ನಂಜುಂಡಪ್ಪ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

ರ‍್ಯಾಂಕ್ ಪಡೆದ ವಿಧ್ಯಾರ್ಥಿಗಳಾದ ರಂಜಿತಾ ಎನ್ ಆರ್ ಮತ್ತು ನಂದಿತಾ ಜಿ ಡಿ ಅವರನ್ನು ಅಭಿನಂದಿಸಿದರು. ನಿವೃತ್ತಿ ಹೊಂದಿದ ಗ್ರಂಥಪಾಲಕ ಜಯಪ್ಪ ಅವರನ್ನೂ ಇದೇ ವೇಳೆ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ ಕೆ ಎಸ್ ಸಿದ್ದರಾಜು, ಸಹಾಯಕ ಆಡಳಿತಾಧಿಕಾರಿ ಖಲಂದರ್ ಪಾಷಾ, ಹಿರಿಯ ಪ್ರಾಧ್ಯಾಪಕರುಗಳಾದ ಪ್ರೊ ಲತಾ ಬಿ ಎಸ್, ಹೇಮಲತಾ, ಡಾ. ಮಾರುತಿ ಎನ್ ಎನ್, ಲಲಿತಾ ಕೆ ಆರ್, ಕನ್ಯಾಕುಮಾರಿ, ಡಾ ಅಶ್ವತ್ಥ ಕೆ ಮತ್ತು ವಿಧ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...