ತುಮಕೂರು | ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜರುಗಿದ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಕಡು ಬಡತನದಲ್ಲಿ ಹುಟ್ಟಿ ಅಸ್ಪೃಶ್ಯತೆ, ಅಸಮಾನತೆ, ಮಹಿಳಾ ಅಸಮಾನತೆ ವಿರುದ್ಧ ಹೋರಾಡಿ ಸಮ ಸಮಾಜ ನಿರ್ಮಾಣ ಮಾಡಲು ತಮ್ಮ ಜೀವನವನ್ನೇ ಸವೆಸಿ ಧ್ವನಿ ಇಲ್ಲದವರಿಗೆ ದನಿಯಾಗಿದ್ದ ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...
1000742683

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದೀನ-ದಲಿತರಿಗೆ, ನೊಂದವರಿಗೆ ಪ್ರತ್ಯಕ್ಷ ದೇವರಾಗಿ ಕಾಣುವ ಮೂಲಕ ಅವರ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. ಏಷ್ಯದ ಉಪ ಖಂಡದಂತಿರುವ ನಮ್ಮ ದೇಶದಲ್ಲಿ ಹಲವು ವೈವಿಧ್ಯತೆಗಳನ್ನು ಏಕೀಕರಣಗೊಳಿಸಿ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ. ತಮ್ಮ ಅನುಭವದ ರಸಗಟ್ಟಿಯಿಂದ ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುವ ಮೂಲಕ ಪ್ರತಿ ಭಾರತೀಯ ಪ್ರಜೆಗೆ ಆತ್ಮ ವಿಶ್ವಾಸ ತಂದುಕೊಟ್ಟಿದ್ದಾರೆ. ಸಾವಿರಾರು ವರ್ಷಗಳಿಂದ ತುಳಿತಕ್ಕೊಳಗಾದ ಮತ್ತು ಸಮಾಜದಿಂದ ಹಿಂದೆ ಉಳಿದುಕೊಂಡಿದ್ದ ಅನೇಕ ಸಮುದಾಯಗಳು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಬದುಕನ್ನು ಕಟ್ಟಿಕೊಂಡಿವೆ ಎಂದು ತಿಳಿಸಿದರು. 

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಾತನಾಡಿ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಾವೆಲ್ಲರೂ ಸಮಾಜದಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದೇವೆ. ಪ್ರತಿಯೊಬ್ಬರಿಗೂ ಸಮಾನ ನ್ಯಾಯವನ್ನು ಒದಗಿಸುವುದು, ಎಲ್ಲರಿಗೂ ನ್ಯಾಯವನ್ನು ದೊರಕಿಸಿಕೊಡುವುದೇ ಸಂವಿಧಾನದ ಆಶಯವಾಗಿದೆ ಎಂದು ತಿಳಿಸಿದರು.

1000742690

ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ ತಲಾ ತಲಾಂತರದಿಂದ ಬಂದ ಅನಿಷ್ಟ ಪದ್ಧತಿಗಳನ್ನು ಸಮಾಜದಿಂದ ಕಿತ್ತೊಗೆಯಲು ಇಡೀ ವ್ಯವಸ್ಥೆಯನ್ನೇ ಎದುರು ಹಾಕಿಕೊಳ್ಳುವ ಮೂಲಕ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವಂತೆ ಮಾಡಿದವರು ಡಾ. ಬಿ.ಆರ್. ಅಂಬೇಡ್ಕರ್. ಭಾರತದ ಧಾರ್ಮಿಕ ವ್ಯವಸ್ಥೆ, ಜಾತಿ ವ್ಯವಸ್ಥೆ ಮತ್ತು ಪುರುಷ ಪ್ರಧಾನ ವ್ಯವಸ್ಥೆಯಿಂದ ಸ್ವತಂತ್ರವಾಗಿ ಉಸಿರಾಡಲು ಸಹ ಆಗದ ಸ್ಥಿತಿಯಲ್ಲಿ ಸಿಲುಕಿದ್ದ ಜನರನ್ನು ಸಂಕೋಲೆಯಿಂದ ಬಿಡಿಸಿದ ಅವರ ಮಾನವೀಯತೆಯ ವಿಚಾರಧಾರೆಗಳು ಪ್ರಪಂಚಕ್ಕೆ ಪಸರಿಸಿವೆ. ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ಎಂಬ ನ್ಯಾಯವನ್ನು ಒದಗಿಸಿದ ಅವರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆಗಳನ್ನು ಅರಿತು ಬಾಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಸ್ಲಂ ಜನಾಂದೋಲನದ ಎ. ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ನಮ್ಮ ಸಂವಿಧಾನಬದ್ಧ ಹಕ್ಕು : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದ ಜನತೆಯ ಬಹುದಿನಗಳ ನ್ಯಾಯಯುತ ಬೇಡಿಕೆಯಾದ 'ಕರಾವಳಿ ಹೈಕೋರ್ಟ್ ಪೀಠ'...

ಮಾದಕ ವಸ್ತುಗಳಿಂದ ದೂರವಿರಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ನ್ಯಾಯಾಧೀಶರ ಕರೆ

ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ದೂರವಿದ್ದು, ಶಿಕ್ಷಣ, ಕ್ರೀಡೆ ಹಾಗೂ ಉತ್ತಮ...

ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ

ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ...