ತುಮಕೂರು | ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆ ; ಶೈಕ್ಷಣಿಕ ಕ್ಷೇತ್ರದ ಇನ್ನಷ್ಟು ಪ್ರಗತಿಗೆ ಡಾ.ಜಿ.ಪರಮೇಶ್ವರ್ ಕರೆ

Date:

Advertisements

 ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ತುಮಕೂರು  ನಗರದ ಹೊರವಲಯದ ಗೊಲ್ಲಹಳ್ಳಿ ಶ್ರೀ ಸಿದ್ಧಾರ್ಥ ಶಿಕ್ಷಕ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು (ಶನಿವಾರ) ನಡೆಯಿತು.

ಸಭೆಗೆ ಆರಂಭಿಸುವ ಮುನ್ನ ಶಿಕ್ಷಣ ಭೀಷ್ಮ ಡಾ. ಗಂಗಧರಯ್ಯ, ಡಾ. ಶಿವಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಸ್ಥೆಯಲ್ಲಿ ಕಾರ್ಯನಿರ್ವಹಣೆ ಮಾಡಿ ಅಗಲಿದ ಸಿಬ್ಬಂದಿಗಳಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

1001089313

ಶಿಕ್ಷಣ ಭೀಷ್ಮ ಡಾ. ಹೆಚ್.ಎಂ.ಗಂಗಾಧರಯ್ಯ ನವರು ತಳ ಮಟ್ಟದಿಂದ ಕಟ್ಟಿ ಬೆಳಸಿದ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು, ಸಂಸ್ಥೆಯ ಬೆಳವಣಿಗೆ, ಅಭಿವೃದ್ಧಿ ಕಾರ್ಯಗಳು, ಪ್ರಗತಿ ನೋಟವನ್ನು ವಾರ್ಷಿಕ ಮಹಾಸಭೆಯಲ್ಲಿ ಅವಲೋಕಿಸಲಾಯಿತು. 

Advertisements

ಸಂಸ್ಥೆಯ ಕಾರ್ಯದರ್ಶಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯವ್ಯಯ ಲೆಕ್ಕಪತ್ರ ಮಂಡನೆ, ಶಿಕ್ಷಣ ಸಂಸ್ಥೆ ಪ್ರಗತಿ ಹಾದಿ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ನಂತರ ಮಾತನಾಡಿಿಿ ಸಚಿವರು, ದದ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಬೇಕೆಂದು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ಘಟಕದ ಮುಖ್ಯಸ್ಥರಿಗೆ ಸೂಚಿಸಿದರು.

1001089312

ಇದಕ್ಕೂ ಮುನ್ನ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ, ಸಾಹೇ ವಿವಿಯ ಕುಲಾಧಿಪತಿ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶಿಕ್ಷಕ ತರಬೇತಿಯ ಪ್ರಕ್ಷಣಾರ್ಥಿ ಸೇರಿದಂತೆ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆ ಮಾಡಬೇಕೆಂದು ಹುರಿದುಂಬಿಸಿ ಆರ್ಶೀವದಿಸಿದರು. 

ಇದೇ ಸಂದರ್ಭದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ವಕೀಲರಾದ ಅಮರನಾಥ್, ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ ನಂಜುಂಡಪ್ಪ, ಸಾಹೇ ವಿವಿಯ ಉಪಕುಲಪತಿಗಳಾದ ಡಾ.ಬಿ.ಕೆ.ಲಿಂಗೇಗೌಡ, ರಿಜಿಸ್ಟರ್ ಡಾ. ಅಶೋಕ್ ಮೆಹ್ತಾ, ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಮೆಡಿಕಲ್ ಕಾಲೇಜು, ಪ್ರಾಂಶುಪಾಲರಾದ ಸಾಣಿಕೊಪ್ಪ, ದಂತ ವೈದ್ಯಕೀಯ ಕಾಲೇಜಿನ ಡಾ. ಪ್ರವೀಣ್ ಕುಡುವ, ಉಪ ಪ್ರಾಂಶುಪಾಲರಾದ ಡಾ ಪ್ರಭಾಕರ್, ಇಂಜಿನಿಯರಿಂಗ್ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಡಾ. ರವಿಪ್ರಕಾಶ್, ನೆಲಮಂಗಲ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ದಿವಾಕರ್ ಸೇರಿದಂತೆ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X