ತುಮಕೂರು | ಪಕ್ಷ ವಿರೋಧಿ ಚಟುವಟಿಕೆ; ಹಾಲನೂರು ಲೇಪಾಕ್ಷ ವಿರುದ್ಧ ಕ್ರಮಕ್ಕೆ ಆಗ್ರಹ

Date:

ತುಮಕೂರು ಜಿಲ್ಲೆಯ ಬೆಳ್ಳಾವಿ ಬ್ಲಾಕ್‌ನ ಕಾಂಗ್ರೆಸ್ ಅಧ್ಯಕ್ಷ ಹಾಲನೂರು ಲೇಪಾಕ್ಷ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ದ ಕೆಲಸ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ವಜಾಗೊಳಿಸಬೆಕೆಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ ಜಿಲ್ಲಾ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೈಯದ್ ಸದಾತ್, ಕಾರ್ಯಕರ್ತ ರಘುಕುಮಾರ್, ಹರ್ಷವರ್ಧನ್ ಅವರು ಲೇಪಾಕ್ಷ ಅವರನ್ನು ವಜಾಗೊಳಿಸಲು ಆಗ್ರಹಿಸಿದ್ದಾರೆ. “ಕಾಂಗ್ರೆಸ್ ತನ್ನ ತತ್ವ, ಸಿದ್ದಾಂತದ ಮೇಲೆ ನಡೆದುಕೊಂಡು ಬಂದಿರುವ ಪಕ್ಷ. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷಕ್ಕೆ ಹೆಚ್ಚು ಬೆಲೆಯಿದೆ. ಆದರೆ, ಜೆಡಿಎಸ್‌ನಿಂದ ಕಾಂಗ್ರೆಸ್‌ ಬಂದಿರುವ ಲೇಪಾಕ್ಷ ಅವರು ಕಾಂಗ್ರೆಸ್ ಸಿದ್ದಾಂತಗಳನ್ನು ಪಾಲಿಸದೆ, ಹಳೆಯ ಪಕ್ಷದ ರೀತಿಯಲ್ಲಿ ವ್ಯಕ್ತಿ ಪೂಜೆಗೆ ಮುಂದಾಗಿದ್ದಾರೆ. ಇದರಿಂದ ಮೂಲ ಕಾಂಗ್ರೆಸಿಗರು ಮುಜುಗರ ಅನುಭವಿಸುವಂತಾಗಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಆಗ್ನೇಯ ಶಿಕ್ಷಕರ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಡಿ.ಟಿ. ಶ್ರೀನಿವಾಸ್ ಕಣದಲ್ಲಿದ್ದಾರೆ. ನಾಮಪತ್ರವನ್ನು ಸಹ ಸಲ್ಲಿಸಿದ್ದಾರೆ. ಆದರೆ, ಹಾಲೆನೂರು ಲೇಪಾಕ್ಷ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರ ಪರ ಕೆಲಸ ಮಾಡುವ ಬದಲು, ಪಕ್ಷೇತರ ಅಭ್ಯರ್ಥಿ ಶಿವರಾಜ್ ಎಂಬುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ಅವರನ್ನು ಪಕ್ಷದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...