ತುಮಕೂರು | ಕಾಲೇಜು ಕ್ಯಾಂಪಸ್ ಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಎಪಿಸಿಆರ್ ಒತ್ತಾಯ

Date:

Advertisements

ತುಮಕೂರು ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಸಿವಿಲ್ ರೈಟ್ಸ್ ಪ್ರೊಟೆಕ್ಷನ್ ಇಂಡಿಯಾ(ಎಪಿಸಿಆರ್) ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಸಲ್ಲಿಸಿದ್ದಾರೆ.

ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು,ನಗರದಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ, ಹಾಗೆಯೇ ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲಿ  ಇಂತಹ ಪರಿಸ್ಥಿತಿ ಇದೆ. ಬೇರೆ ಜಿಲ್ಲೆಯ ಗತಿ ಏನಾಗಿರಬಹುದು ಎಂಬ ಸಂಶಯ ಇದೆ. ಕ್ಯಾಂಪಸ್, ಹಾಸ್ಟೆಲ್, ಅತಿಥಿಗೃಹ(ಪಿಜಿ) ಮುಂತಾದ ಕಡೆಗಳಲ್ಲಿ ಪರಿಸ್ಥಿತಿ ಗಂಭೀರಮಟ್ಟಕ್ಕೆ ತಲುಪುತ್ತಿದೆ.ಈ ಕುರಿತು ಶೀಘ್ರವಾಗಿ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ನಗರದ ಕ್ಯಾಂಪಸ್‌ಗಳು ಮತ್ತು ವಿದ್ಯಾರ್ಥಿ-ಯುವ ಸಮುದಾಯವು ಸಮಾಜಕ್ಕೆ ಮಾರಕವಾಗುವ ಸ್ಥಿತಿಯನ್ನು ಎದುರಿಸಬೇಕಾದೀತು ಎಂದು ಎಪಿಸಿಆರ್ ಮನವಿಯಲ್ಲಿ ಎಚ್ಚರಿಸಿದ್ದಾರೆ.

ಪ್ರಮುಖವಾಗಿ ಮಾದಕ ಪದಾರ್ಥಗಳ ಮಾರಾಟ ಜಾಲದ ಮೂಲವನ್ನು ಪತ್ತೆ ಹಚ್ಚಿ ಶೀಘ್ರವೇ ಅದರ ನಿರ್ಮೂಲನೆ ಮಾಡಬೇಕು.ತುಮಕೂರು ನಗರದ ಹೊರವಲಯದಿಂದ ಕ್ಯಾಂಪಸ್‌ಗಳಿಗೆ ಮಾದಕ ಪದಾರ್ಥಗಳನ್ನು ತಲುಪಿಸುವ ಮಧ್ಯವರ್ತಿಗಳ ಜಾಲವನ್ನು ತಡೆಯಬೇಕು ಮತ್ತು ಅವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಬೇಕು.ಕ್ಯಾಂಪಸ್‌ಗಳಲ್ಲಿರುವ ಅಚಿಟಿ ಡ್ರಗ್ಸ್ ಸ್ವಾಡ್‌ನ್ನು ಬಲಪಡಿಸಬೇಕು ಮತ್ತು ಅದರ ಕಾರ್ಯ ಚಟುವಟಿಕೆಯನ್ನು ಫಲಪ್ರದಗೊಳಿಸುವಂತೆ ನಿಗಾ ವಹಿಸಬೇಕು.

Advertisements
1001789555

ಕೇರಳ ಮಾದರಿ ಅಂಟಿ ಡ್ರಗ್ ಪೊಲೀಸ್ ಕಾರ್ಯಾಚರಣೆಯನ್ನು(ವಿದ್ಯಾರ್ಥಿಗಳ ಹೆಸರು ಬಯಲು ಮಾಡದೆ,ಕ್ಯಾಂಪಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಯ ಪೋಷಕರ ಮಧ್ಯಸ್ಥಿಕೆಯಲ್ಲಿ ಅದನ್ನು ಪರಿಹರಿಸಬೇಕು.) ನಡೆಸಬೇಕು.ಮಾದಕ ವ್ಯಸನಿಗಳ ಪುನರ್ವಸತಿಯ ಕುರಿತು ಪೊಲೀಸ್ ಇಲಾಖೆಯು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿಗಾಗಿ ನಿರಂತರ ಶ್ರಮಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ಜಿಲ್ಲೆಯಾದ್ಯಂತ ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಈ ಅಪರಾಧದ ಬಗೆಗಿನ ಕಾನೂನು ಜಾಗೃತಿಯನ್ನು ಮೂಡಿಸಬೇಕಿದೆ.ಪ್ರಮುಖವಾಗಿ ಹೈಸ್ಕೂಲ್ ಹಂತದಲ್ಲಿ ಬಾಲಕರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಿಂಬೆ ಹುಳಿ, ಕಚ್ಚಾ ಮ್ಯಾಂಗೋ ಮತ್ತಿತರರ ಪ್ಲೇವರ್‌ಗಳಲ್ಲಿ ಎಗ್ಗಿಲ್ಲದೆ ದೊರೆಯುತ್ತಿರುವ ಚಾಕಲೇಟ್ ರೂಪದ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವ ಮೂಲಕ ಬೆಳೆಯುವ ಚಿಗುರುಗಳನ್ನು ರಕ್ಷಿಸಬೇಕಾಗಿದೆ.ನಗರದಲ್ಲಿ ಮತ್ತು ನಗರದ ಹೊರವಲಯದಲ್ಲಿ ಮಾದಕ ವ್ಯಸನದ ಪ್ರಭಾವ ಹೆಚ್ಚಾಗುತ್ತಿದೆಯೋ ಅಲ್ಲಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಮತ್ತು ವಿದ್ಯಾರ್ಥಿ ನಾಯಕರ ಸಭೆಯನ್ನು ಆಯೋಜಿಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಬೇಕು.ಶಾಲಾ ಕಾಲೇಜಿನ 100 ಮೀಟರ್ ಅಂತರದಲ್ಲಿ ಬೀಡಿ, ಸಿಗರೇಟು, ಗುಟ್ಕಾ ಮದ್ಯಪಾನ ಮುಂತಾದವುಗಳ ನಿಷೇಧ ಕಾನೂನು ಇದ್ದರೂ ಹಲವೆಡೆ ಅದರ ಮಾರಾಟ ನಡೆಯುತ್ತಿರುವುದು ಗಮನಿಸಬಹುದಾಗಿದೆ ಇದನ್ನು ಶೀಘ್ರವಾಗಿ ತಡೆಗಟ್ಟವಂತೆ ಮಾಡಬೇಕು. ಜಿಲ್ಲೆಯಾದ್ಯಂತ ವ್ಯಾಪಕವಾಗುತ್ತಿರುವ ಮಾದಕ ವ್ಯಸನದ ಪ್ರಭಾವದ ಕುರಿತು ಕಾನೂನು ತಜ್ಞರು, ಸಮಾಜ ಸೇವಕರು, ಸಂಶೋಧನಾ ವಿದ್ಯಾಥಿಗಳು ಮತ್ತು ಬುದ್ದಿ ಜೀವಿಗಳನ್ನೊಳಗೊಂಡ ಒಂದು ತಂಡದಿAದ ಜಿಲ್ಲೆಯ ಅಧ್ಯಯನ, ಪರಿಸ್ಥಿಯ ಅವಲೋಕನ ಮತ್ತು ಪರಿಹಾರ ಕಾರ್ಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ತಾಜುದ್ದೀನ್ ಷರೀಫ್ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾದ ಪದಾಧಿಕಾರಿಗಳಾದ ಅಫ್ಜಲ್ ಖಾನ್, ಹಮೀದ್ ಬೇಗ್, ಅಪ್ಸರ್ ಖಾನ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X