ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವ ಆಶಯ ಸಂವಿಧಾನ ಹೊಂದಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಹೇಳಿದರು.
ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರಿಶಿಷ್ಟ ಜಾತಿ ಮತ್ತು ಪಂಗಡದ ಪುರುಷ ವಿದ್ಯಾರ್ಥಿನಿಲಯದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಆದರ್ಶ ವಿಚಾರಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಅನುಸರಿಸುವುದರಿಂದ, ಅವರ ವ್ಯಕ್ತಿತ್ವ ವಿಕಾಸನಗೊಳ್ಳಲಿದೆ ಎಂದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಸಚಿವೆ ನಾಹಿದಾ ಜಮ್ ಜಮ್, ವಿದ್ಯಾರ್ಥಿಗಳು ಮೊಬೈಲ್ ಹುಚ್ಚನ್ನು ಬಿಡಬೇಕು. ಸಂವಿಧಾನ ಪುಸ್ತಕವನ್ನು ಸರಿಯಾಗಿ ಅಧ್ಯಯನ ಮಾಡಬೇಕು. ಸಂವಿಧಾನ ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಯು ಓದಬೇಕಾದ ಗ್ರಂಥ ಎಂದರು.
ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ, ಪ್ರೊ ಪರಶುರಾಮ್, ಪ್ರೊ. ಬಸವರಾಜ, ಪ್ರೊ. ಸಂಪತ್ ಕುಮಾರ್ ಬಿ ಟಿ, ಪ್ರೊ. ಕೇಶವ, ಪ್ರೊ. ಪಿ ಪರಮಶಿವಯ್ಯ, ನಿಲಯ ಪಾಲಕರಾದ ಡಾ. ಕುಮಾರ ಬಿ, ಡಾ. ಲಕ್ಷ್ಮೀರಂಗಯ್ಯ ಇದ್ದರು.