ತುಮಕೂರು | ಗಾಂಧಿ ಕೊಂದ ಮನಸ್ಥಿತಿಗಳಿಂದ ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ : ನವೀನ್ ಪೂಜಾರಹಳ್ಳಿ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಮುಂದಾಗಿದ್ದನ್ನು ಖಂಡಿಸಿ ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ತುಮಕೂರು ನಗರದಲ್ಲಿ ವಿ.ವಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು ಬಿ.ಎಚ್‌. ರಸ್ತೆ, ಟೌನ್ ಹಾಲ್ ಮೂಲಕ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ವಕೀಲ ರಾಕೇಶ್ ಕಿಶೋರ್ ವಿರುದ್ಧ ಘೋಷಣೆ ಕೂಗಿದರು. ಹಲ್ಲೆ ನಡೆಸಲು ಮುಂದಾದ ವಕೀಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಭಟನೆ ನೇತೃತ್ವ ವಹಿಸಿದ್ದ ನವೀನ್ ಪೂಜಾರಹಳ್ಳಿ ಮಾತನಾಡಿ ಸಿಜೆಐ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಭಾರತದ ನ್ಯಾಯಾಂಗದ ಮೇಲೆ ನಡೆದ ದಾಳಿಯಾಗಿದೆ. ಭಾರತ ಸಂವಿಧಾನದ ಆಶಯಗಳನ್ನು ಗೌರವಿಸದ ಹಾಗೂ ಗಾಂಧಿಯನ್ನು ಕೊಂದ ಮತಾಂಧ ಮನಸ್ಥಿತಿಯೇ ಇಂದು ನ್ಯಾಯಾಧೀಶರ ಮೇಲೆ ಶೂ ಎಸೆಯುವ ಪ್ರಯತ್ನದ ಹಿಂದಿನ ಕೆಲಸ ಮಾಡಿದೆ. ಈ ದುಷ್ಕೃತ್ಯವನ್ನು ತುಮಕೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಖಂಡಿಸುತ್ತೆವೆ. ಶೂ ಎಸದವನನ್ನು ಬೆಂಬಲಿಸಿದ ಭಾಸ್ಕರ್ ರಾವ್ ಅವರ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗವಾಯಿ ಅವರ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು
ಎಂದು ಒತ್ತಾಯಿಸಿದರು.

1002201217

ತುಮಕೂರು ವಿವಿ ಸಂಶೋಧನಾರ್ಥಿ ಗಂಗಾಧರ್ ಬಿ.ಎಂ ಬಾಣಸಂದ್ರಮಾತನಾಡಿ ದೇಶದ ಅಡಿಪಾಯವೇ ಸಂವಿಧಾನ. ಇಡೀ ಭಾರತ ಸಂವಿಧಾನ ಮುಖೇನವೇ ಜಾಗೃತವಾಗಬೇಕು. ಸನಾತನವಾದ, ಮನುವಾದವು ಎಂದಿಗೂ ಬಾಬಾಸಾಹೇಬರ ಸಂವಿಧಾನವನ್ನು ಒಪ್ಪುವುದಿಲ್ಲ. ಸನಾತನವಾದ ಎಂದಿಗೂ ಸಮಾನತೆಯನ್ನು ಬಯಸುವುದಿಲ್ಲ. ವಕೀಲ ರಾಕೇಶ್ ಕಿಶೋರ್ ಎಂಬ ಸನಾತನವಾದಿಯೊಬ್ಬ ಸಂವಿಧಾನಬದ್ಧವಾದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಸ್ಥಾನದಲ್ಲಿರುವ ಸಿಜೆಐ ಬಿ.ಆರ್ ಗವಾಯಿ ಅವರತ್ತ ಶೂ ಎಸೆಯುವ ಪ್ರಯತ್ನ ಗವಾಯಿಯವರಿಗಾದ ಅಪಮಾನವಷ್ಟೇ ಅಲ್ಲ. ಅದು ಈ ದೇಶದ ಕಾನೂನು, ಸಂವಿಧಾನ, ಎಲ್ಲ ಭಾರತೀಯರಿಗೇ ಆದ ಅಪಮಾನ. ಇಂತಹ ವಿಕೃತ ಮನಸ್ಥಿತಿಯುಳ್ಳ ರಾಕೇಶ್ ಕಿಶೋರ್ ಅವರನ್ನು, ಆತನ ನಡೆಯನ್ನು ಬೆಂಬಲಿಸುವವರನ್ನು ದೇಶದ್ರೋಹಿಗಳೆಂದು ಪರಿಗಣಿಸಿ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು

ಸುಪ್ರೀಂ ಕೋರ್ಟ್‌ನಲ್ಲಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಎಂಬುವರು ಶೂ ಎಸೆಯಲು ಮುಂದಾಗಿದ್ದು, ಅವರ ನಡೆ-ನುಡಿಯನ್ನು ತೀವ್ರವಾಗಿ ಖಂಡಿಸಿದರು.

ಸಂಶೋಧನಾ ರ್ಥಿಗಳಾದ ಮಾರುತೇಶ ಕಸಾಪುರ, ರಾಹುಲ್,ಮಂಜುನಾಥ್, ಮಲ್ಲಿಕಾರ್ಜುನ ,ಹರೀಶ್,ಮಾರುತೇಶ್, ನವೀನ್ ಪೊನ್ನ ಸಮುದ್ರ, ಸುರೇಶ್, ರಮೇಶ್,ಅನಿಲ್ ಕುಮಾರ್ ,ನಾಗೇಂದ್ರ,ಧರ್ಮಣ್ಣ, ಧನುಷ್, ನಾಗೇಂದ್ರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...