ತುಮಕೂರು | ಅಂತರ್ಜಾತಿ ವಿವಾಹವಾಗಿರುವ ದಂಪತಿಯ ಕೊಲೆ ಯತ್ನ: ರಕ್ಷಣೆ ಕೋರಿ ಎಸ್‌ಪಿಗೆ ದೂರು

Date:

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಾತ್ರಿಕೆ ಹಾಲ್ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿರುವ ದಂಪತಿ ತಮಗೆ ಮನೆಯವರಿಂದ ರಕ್ಷಣೆ ಕೊಡಬೇಕೆಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶೋಕ್ ಕೆ ವಿ ಅವರಿಗೆ ರಕ್ಷಣೆ ಕೋರಿ ದೂರು ಸಲ್ಲಿಸಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಾತ್ರಿಕೆ ಹಾಲ್ ಗ್ರಾಮದ ಈಡಿಗ ಸಮುದಾಯದ ಸುಶ್ಮಿತಾ(19) ಮತ್ತು ತೀರ್ಥಪುರ ಗ್ರಾಮದ ದಲಿತ ಸಮುದಾಯದ ಯತೀಶ್(24) ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರು ಸೆಪ್ಟೆಂಬರ್ 01, 2025 ರಂದು ದಾಬಸ್‌ಪೇಟೆ ಬಳಿಯ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಆದರೆ, ಈ ಅಂತರ್ಜಾತಿ ವಿವಾಹಕ್ಕೆ ಸುಶ್ಮಿತಾ ಅವರ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾತ್ರಿಕೆ ಹಾಲ್ ಗ್ರಾಮದ ಈಡಿಗ ಜನಾಂಗಕ್ಕೆ ಸೇರಿದ ಪಾಪಣ್ಣ ಎಂಬುವವರ ಮಗಳು ಸುಷ್ಮಿತ ಪಿ ಮತ್ತು ತೀರ್ಥಪುರ ಗ್ರಾಮದ ಪರಿಶಿಷ್ಟ ಜಾತಿ(ಮಾದಿಗ)ಗೆ ಸೇರಿದ ಯತೀಶ್‌ ಎಂಬುವವರನ್ನು ಪ್ರೀತಿಸಿದ್ದ ವಿಚಾರ ತಿಳಿದ ಬಳಿಕ ಆಕೆಯ ಮೇಲೆ ತನ್ನ ಮನೆಯವರು, ʼಕೀಳು ಜಾತಿಯ ಹುಡುಗನ್ನು ಪ್ರೀತಿ ಮಾಡುತ್ತಿದ್ದೀಯʼ ಎಂಬುದಾಗಿ ಬೆದರಿಸಿ ಹಲ್ಲೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಂತರ್ಜಾತಿ ವಿವಾಹ ದೂರು

ವಿವಾಹದ ನಂತರ, ಸುಶ್ಮಿತಾ ಅವರ ಕುಟುಂಬದವರು ಯತೀಶ್‌ನ ಮನೆಗೆ 50-60 ಜನರ ಗುಂಪಿನೊಂದಿಗೆ ನುಗ್ಗಿ ದಾಂದಲೆ ಮಾಡಿದ್ದಾರೆ. ಅಲ್ಲದೆ ಕೊಲೆ ಯತ್ನದ ಆರೋಪವೂ ಎದುರಾಗಿದೆ. ಈ ಘಟನೆಯಿಂದ ಜೀವ ಭಯದಿಂದ ಯತೀಶ್‌ನ ಕುಟುಂಬವು ಗ್ರಾಮವನ್ನೇ ತೊರೆದು ತಲೆಮರೆಸಿಕೊಂಡಿದೆ. ಯತೀಶ್‌ನ ಪೋಷಕರು ರಾತ್ರಿಯಿಡೀ ತೋಟದ ಪೊದೆಗಳಲ್ಲಿ ಅವಿತುಕೊಂಡಿದ್ದು, ನವ ದಂಪತಿ ರಾತ್ರಿಯಿಡೀ ಊರು ಊರು ಸುತ್ತಿ ಕಾರಿನಲ್ಲಿ ಆಶ್ರಯ ಪಡೆದಿದ್ದರು.

ಅಂತರ್ಜಾತಿ ವಿವಾಹ ದಂಪತಿ ದೂರು

ಈ ಘಟನೆಯ ಬಗ್ಗೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದ್ದು, ಪೊಲೀಸರು ರಾಜಿ ಪಂಚಾಯತಿ ನಡೆಸಿ, ದಂಪತಿಗೆ ರಿಜಿಸ್ಟರ್ ಮದುವೆ ಮಾಡಿಕೊಳ್ಳಲು ಸೂಚಿಸಿದ್ದರು. ಆದರೆ, ಸುಶ್ಮಿತಾ ಅವರ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೀವ ಭಯದಿಂದಾಗಿ, ಸುಶ್ಮಿತಾ ಮತ್ತು ಯತೀಶ್ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶೋಕ್ ಕೆ ವಿ ಅವರಿಗೆ ರಕ್ಷಣೆ ಕೋರಿ ದೂರು ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ| ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡುವುದು ಕಡ್ಡಾಯ ; ತಪ್ಪಿದರೆ ಆಸ್ಪತ್ರೆಗಳಿಗೆ ₹1 ಲಕ್ಷ ದಂಡ ರಾಜ್ಯ ಸರ್ಕಾರದ ಮಹತ್ವದ ಆದೇಶ

ಈ ಘಟನೆಯು ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಜಾತಿ ಆಧಾರಿತ ತಾರತಮ್ಯವು ಗಾಢವಾಗಿ ಬೇರೂರಿರುವುದನ್ನು ತೋರಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...