ತುಮಕೂರು | ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿ ಪ್ರಮಾಣಿಕತೆ ಮೆರೆದ ಆಟೋ ಚಾಲಕ

Date:

   ಚಿನ್ನಾಭರಣವಿದ್ದಂತಹ ಬ್ಯಾಗನ್ನು ಹಿಂತಿರುಗಿಸಿ ಆಟೋ ಚಾಲಕನೊಬ್ಬ ಪ್ರಮಾಣಿಕತೆ ತೋರಿದ್ದಾನೆ.ಆಟೋ ಚಾಲಕನ ಪ್ರಮಾಣಿಕತೆ ಕಂಡು  ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

- Advertisement -

ತುಮಕೂರು ನಗರದ ಹನುಮಂತಪುರ ನಿವಾಸಿಯಾದ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ.ಹಾಸನ ಜಿಲ್ಲೆ ಅರಸೀಕೆರೆ ಮೂಲದ ಗಾಯತ್ರಿ ಚಿನ್ನಾಭರಣವಿದ್ದಂತಹ ಬ್ಯಾಗ್‌ನ ಮಾಲೀಕರು.ಗಾಯತ್ರಿ ಕುಂದೂರಿನಲ್ಲಿನ ತನ್ನ ಸಂಬಂಧಿಕರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದರು. ಗಾಯತ್ರಿ, ತುಮಕೂರು ಹೊರವಲಯದ ಕುಂದೂರಿನಿಂದ ಸಿಟಿ ಬಸ್ ನಿಲ್ದಾಣಕ್ಕೆ ಹೋಗಿ,  ಆಟೋದಿಂದ ಇಳಿದು ಹೋಗುವಾಗ ಬ್ಯಾಗನ್ನ ಬಿಟ್ಟು ಹೋಗಿದ್ದರು. ನಂತರ, ಬ್ಯಾಗ್ ನೋಡಿದ ಆಟೋ ಚಾಲಕ ಬ್ಯಾಗ್‌ನ ಮಾಲೀಕರನ್ನು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಆಟೋ ಚಾಲಕನಿಗೆ ಬ್ಯಾಗ್‌ನ ಮಾಲೀಕರು ಸಿಗದಿದ್ದಕ್ಕೆ ಪೊಲೀಸ್ ಠಾಣೆಗೆ ಬ್ಯಾಗ್‌ನ ಒಪ್ಪಿಸಿದ್ದಾರೆ. ನಂತರ ಶೋಧ ಕಾರ್ಯ ನಡೆಸಿದ ಪೊಲೀಸರು ಮಾಲೀಕರನ್ನ ಪತ್ತೆ ಮಾಡಿ  ಬ್ಯಾಗ್‌ನಲ್ಲಿ ಇದ್ದಂತಹ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನ ಮಾಲೀಕರಾದ ಗಾಯತ್ರಿಗೆ ಒಪ್ಪಿಸಿದ್ದಾರೆ.

ಆಟೋ ಚಾಲಕ ರವಿಕುಮಾರ್‌ನ ಪ್ರಮಾಣಿಕತೆಗೆ ಗಾಯತ್ರಿ ಧನ್ಯವಾದ ತಿಳಿದ್ದಾರೆ. ತುಮಕೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...