ತುಮಕೂರು | ಔಟರ್ ರಿಂಗ್ ರೋಡ್ ವಿರೋಧಿಸಿ ಅ. 4 ರಿಂದ ಜಾಗೃತಿ ಜಾಥಾ

Date:

ತುಮಕೂರಿನ ಔಟರ್ ರಿಂಗ್ ರೋಡ್ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ,ಅಕ್ಟೋಬರ್ 04ರಿಂದ 06ರವರೆಗೆ ಯೋಜನೆಯಿಂದ ಬಾಧಿತ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ,ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಬೈಪಾಸ್ ರಸ್ತೆ ವಿರೋಧಿ ಹೋರಾಟ ಸಮಿತಿ ತಿಳಿಸಿದೆ.

- Advertisement -

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಸಮಿತಿಯ ಮುಖಂಡರಾದ ಸಂಯುಕ್ತ ಹೋರಾಟ-ಕರ್ನಾಟಕ ಸಂಚಾಲಕ ಸಿ.ಯತಿರಾಜು, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು,ಎಐಕೆಕೆಎಂಎಸ್‌ನ ಎಸ್.ಎನ್.ಸ್ವಾಮಿ, ಎಸ್.ಕೆ.ಎಂ.ಸಂಯೋಜಕರಾದ ಬಿ.ಉಮೇಶ್,ಎಐಕೆಎಸ್‌ನ ಕಂಬೇಗೌಡ,ಕೆಪಿಆರ್‌ಎಸ್‌ನ ಅಜ್ಜಪ್ಪ,ರಮೇಶ್ ಭೈರಸಂದ್ರ, ಸಿದ್ದಗಂಗಮ್ಮ,ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ಹಾಗೂ ಬಾಧಿತ ಹಳ್ಳಿಗಳ ರೈತರು,ಜಿಲ್ಲಾಡಳಿತ ಭೂಸ್ವಾಧೀನ ಕಾಯ್ದೆ-2013ನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ.ರೈತರ ಒಪ್ಪಿಗೆಯಿಲ್ಲದೆ ಇದ್ದರೂ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂಯುಕ್ತ ಹೋರಾಟ-ಕರ್ನಾಟಕದ ಸಿ.ಯತಿರಾಜು ಮಾತನಾಡಿ,ಸರಕಾರ ಹೊಸ ಯೋಜನೆಯ ಹೆಸರಿನಲ್ಲಿ ರೈತರ ಫಲವತ್ತಾ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ.ಇದರಿಂದ 750ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬೀಳಲಿವೆ.ಅಲ್ಲದೆ ಸರಕಾರ ಯೋಜನೆಯ ಸಾಧಕ ಭಾಧಕಗಳ ಕುರಿತು ರೈತರೊಂದಿಗೆ ಚರ್ಚೆ ನಡೆಸದೆ, ದಬ್ಬಾಳಿಕೆ ನಡೆಸಲು ಮುಂದಾಗಿದೆ. ಸರಕಾರ ಕೂಡಲೇ ಯೋಜನೆಯಿಂದ ಹಿಂದೆ ಸರಿಯಬೇಕು. ಅಧಿಸೂಚನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ,ಪ್ರಸ್ತಾಪಿತ ನಂದಿಹಳ್ಳಿ, ಮಲ್ಲಸಂದ್ರ, ವಸಂತ ನರಸಾಪುರ ಔಟರ್‌ರಿಂಗ್ ರೋಡ್‌ಗೆ 44 ಹಳ್ಳಿಗಳ ಸುಮಾರು 650 ಎಕರೆ ಫಲವತ್ತಾದ ಭೂಮಿಯ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆಯನ್ನು ರೈತರ ಒಪ್ಪಿಗೆ ಇಲ್ಲದೆ, ರೈತರೊಂದಿಗೆ ಮಾತುಕತೆ ನಡೆಸದೆ ಹೊರಡಿಸಲಾಗಿದೆ. ಇದರಲ್ಲಿ ಸುಮಾರು 750 ಕುಟುಂಬಗಳು ಹಣ್ಣ, ತರಕಾರಿ, ಹೂವು ಬೆಳೆಯುವುದರ ಜೊತೆಗೆ,ಅಡಿಕೆ,ತೆಂಗು ಇನ್ನಿತರ ತೋಟಗಾರಿಕಾ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿದ್ದಾರೆ.ಸರಕಾರ ಯೋಜನೆಯ ಸೋಷಿಯಲ್ ಇಪ್ಯಾಕ್ಟ್ ಬಗ್ಗೆ ಸರ್ವೆ ನಡೆಸದೆ ಭೂಸ್ವಾಧೀನಕ್ಕೆ ಮುಂದಾಗಿದೆ.ಹಾಗಾಗಿ ಸರಕಾರ ಯೋಜನೆಯನ್ನು ಕೈಬಿಡಬೇಕು.ಇದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬರ್ 04 ರಿಂದ 06ರವರೆಗೆ ಜಾಗೃತಿ ಜಾಥಾ ಕೈಗೊಳ್ಳಲಾಗಿದೆ.ಅಲ್ಲದೆ ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಔಟರ್ ರಿಂಗ್ ರಸ್ತೆಯ ಬಾಧಿತ ಗ್ರಾಮಗಳ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.

ಸರಕಾರ ಪ್ರಾಸ್ತಾಪಿತ ನಂದಿಹಳ್ಳಿ, ಮಲ್ಲಸಂದ್ರ, ವಸಂತನರಸಾಪುರ ಔಟರ್ ರಿಂಗ್‌ರಸ್ತೆಗೆ ಭೂ ಸ್ವಾಧೀನ ವಿರೋಧಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ.ಅಲ್ಲದೆ ಈಗಾಗಲೇ ಇರುವ ರಸ್ತೆಗಳನ್ನೇ ವಿಸ್ತರಿಸಿ, ಉಪಯೋಗಿಸುವಂತೆ ಹೊಸ ಪ್ರಸ್ತಾಪ ಕೈಬಿಡುವಂತೆ ಅಕ್ಷಪಣೆ ನೀಡಿದ್ದೇವೆ.ಅಲ್ಲದೆ ದಾಬಸ್‌ಪೇಟೆಯಿಂದ ಗುಬ್ಬಿಯವರೆಗೆ ಸುಮಾರು 120 ಅಡಿ ಅಗಲದ ನಕಾಸೆ ರಸ್ತೆಯಿದ್ದು,ಆ ರಸ್ತೆಯನ್ನು ಔಟರ್ ರಿಂಗ್ ರಸ್ತೆಗೆ ಬಳಸುವಂತೆ ಮನವಿ ಮಾಡಲಾಗಿತ್ತು. ಈಲ್ಲಾಧಿಕಾರಿಗಳು ಸ್ಥಳಪರಿಶೀಲನೆ ನಡೆಸುವ ಭರವಸೆ ನೀಡಿದ್ದರು.ಆದರೆ ಇದುವರೆಗೂ ಜಿಲ್ಲಾಧಿಕಾರಿಗಳು ಈ ಕುರಿತು ರೈತರೊಂದಿಗೆ ಮಾತನಾಡಿಲ್ಲ.ಹಾಗಾಗಿ ಮತ್ತೊಮ್ಮೆ ಜಿಲ್ಲಾಡಳಿತದ ಗಮನ ಸೆಳೆಯುವ ಸಲುವಾಗಿ ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎ.ಗೋವಿಂದರಾಜು ನುಡಿದರು.

ಎಐಕೆಕೆಎಂಎಸ್‌ನ ಎಸ್.ಎನ್.ಸ್ವಾಮಿ ಮಾತನಾಡಿ,2013ರ ಭೂಸ್ವಾಧೀನ ಕಾಯ್ದೆ ಪ್ರಕಾರ ಯೋಜನಾ ವ್ಯಾಪ್ತಿಗೆ ಒಳಪಡುವ ಶೇ70ರಷ್ಟು ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಮಾಡುವಂತಿಲ್ಲ.ಈ ಯೋಜನೆಯಿಂದ ತುಮಕೂರು ನಗರ ಸೇರಿದಂತೆ ಜಿಲ್ಲೆಗೆ ಆಹಾರದ ಅಭದ್ರತೆ ಉಂಟಾಗಲಿದೆ.ಹಾಗಾಗಿ ಶಾಶಕರು, ಸಂಸದರು, ಮಂತ್ರಿಗಳು ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...