ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

Date:

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಕೆರೆಯ ಒತ್ತುವರಿ ತೆರವು ಮಾಡಿ ಕೆರೆಯನ್ನು ಕೆರೆಯನ್ನಾಗಿಯೇ ಉಳಿಸಬೇಕು ಎಂದು ಬೈಚೇನಹಳ್ಳಿ ಗ್ರಾಮಸ್ಥರು ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ಮನವಿ ಸಲ್ಲಿಸಿದರು.

- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕಚೇರಿಗೆ ಗ್ರಾಮಸ್ಥರು ಆಗಮಿಸಿದ್ದು, ಸ್ಥಳೀಯ ಮಂಜುನಾಥ್ ಎಂಬುವವರು ಮಾತನಾಡಿ, “ಬೈಚೇನಹಳ್ಳಿ ಗ್ರಾಮದಲ್ಲಿ 18 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರುವ ಕೆರೆ ಇದ್ದು, ಕೆರೆಯ ಸುತ್ತಲಿನ ರೈತರ ಪೈಕಿ ಕೆಲವರು ಕೆರೆಯಂಚಿನಲ್ಲಿ ಮಣ್ಣು ಹಾಕಿಕೊಂಡು ಎತ್ತರ ಪ್ರದೇಶ ಮಾಡಿಕೊಂಡು ಕೆರೆಯ ಜಾಗವನ್ನು ಒತ್ತುವರಿ ಮಾಡಲು ಆರಂಭಿಸಿದ್ದಾರೆ. ಕೆರೆಯ ಮುಳುಗಡೆ ಪ್ರದೇಶದಲ್ಲಿದ್ದ ರೈತರಿಗೆ ಈಗಾಗಲೇ ಸರ್ವೇ ನಂಬರ್ 52 ರಲ್ಲಿ 12.32 ಎಕರೆ ಪರ್ಯಾಯ ಜಮೀನು ಸರ್ಕಾರ ನೀಡಿದೆ. ಆದರೆ ಕೆರೆಯಲ್ಲಿ ನೀರಿಲ್ಲ ಎಂಬ ನೆಪದಲ್ಲಿ ಈ ಜಮೀನು ಸಹ ನಮ್ಮದು ಎಂದು ಕೆರೆಯ ಹಳ್ಳದ ಜಾಗವನ್ನು ಮಣ್ಣು ತುಂಬಿ ಕಬಳಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

“ಕೆರೆಯಲ್ಲಿ ನೀರು ಇದ್ದರೆ ಇಲ್ಲಿನ ರೈತರ ಕೊಳವೆಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ. ಈ ಬಗ್ಗೆ ತಿಳಿದೂ ಸಹ ಕೆರೆಯನ್ನೇ ಒತ್ತುವರಿ ಮಾಡಲಾಗುತ್ತಿದೆ. ಕೆರೆಯನ್ನು ಚಿಕ್ಕದಾಗಿಸುತ್ತಾ ಹೋದಲ್ಲಿ ಮುಂದಿನ ಪೀಳಿಗೆಗೆ ಈ ಕೆರೆಯೇ ಇಲ್ಲವಾಗುತ್ತದೆ. ಈ ಕಬಳಿಕೆ ಮಾಡುವವರ ಜಮೀನಿನಲ್ಲಿನ ಕೊಳವೆ ಬಾವಿಯಲ್ಲಿ ಸಹ ನೀರು ಇಲ್ಲವಾಗುತ್ತಿದೆ. ಈ ಬಗ್ಗೆ ತಿಳಿದಿದ್ದರೂ ಕೂಡ ಎಲ್ಲರಿಗೂ ತೊಂದರೆ ಕೊಡುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸಿ ಕೂಡಲೇ ಕೆರೆಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು” ಎಂದು ಸ್ಥಳೀಯ ಗಂಗರಾಜ್ ಮನವಿ ಮಾಡಿದರು.

“ಈಗಾಗಲೇ ಭಾರೀ ಬಿಸಿಲು ಎದುರಾಗಿದೆ. ನಾಲ್ಕು ತಿಂಗಳ ಬೇಸಿಗೆ ರೈತರನ್ನು ಕಂಗೆಡಿಸುತ್ತಿರುವ ಈ ಸಮಯದಲ್ಲಿ ಇರುವ ಕೆರೆಯ ಜಾಗವನ್ನು ಕಬಳಿಸಿದರೆ ರೈತರ ಉಳಿವಿಲ್ಲ. ರೈತರ ಜೀವನಾಡಿ ಕೆರೆಯನ್ನು ಮತ್ತೊಬ್ಬ ರೈತನೇ ಒತ್ತುವರಿ ಮಾಡಿದರೆ ಯಾರಿಗೆ ನಮ್ಮ ಕಷ್ಟ ಹೇಳುವುದು ಎನ್ನಿಸುತ್ತಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಕೆರೆಯ ಅಳತೆ ನಡೆಸಿ ಉಳಿಸಿಕೊಡಬೇಕು” ಎಂದು ಸ್ಥಳೀಯ ಮರುಳಪ್ಪ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

ಈ ಸಂದರ್ಭದಲ್ಲಿ ಬೈಚೇನಹಳ್ಳಿ ಗ್ರಾಮಸ್ಥರಾದ ಪುಟ್ಟಗಂಗಯ್ಯ, ಕೃಷ್ಣಪ್ಪ, ರಾಮಚಂದ್ರಯ್ಯ, ರಂಗಯ್ಯ, ಕುಮಾರ್, ಆನಂದ್, ವಿಶ್ವನಾಥ್, ಪ್ರಸನ್ನ, ರಮೇಶ್, ಶಂಕರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...