ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಉಪನ್ಯಾಸಕರ ಪುರುಷ ಮತ್ತು ಮಹಿಳೆಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ತುಮಕೂರಿನ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ, ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, 5000 ರೂಪಾಯಿ ನಗದು ಬಹುಮಾನ ಪಡೆದರೆ, ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ 3000 ರೂ ನಗದು ಪ್ರಶಸ್ತಿಯನ್ನು ಪಡೆದಿದೆ.

ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಶಾಲಿಯಾದ ತಂಡಗಳಿಗೆ ಚೆನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಸುರೇಶ್ ಬಹುಮಾನವನ್ನು ವಿತರಣೆ ಮಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರುದ್ರೇಶ್ ಕೆ ಸೇರಿದಂತೆ ವಿಜೇತ ತಂಡದ ಉಪನ್ಯಾಸಕರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಎರಡು ವಿಭಾಗದಲ್ಲಿ ಗೆಲವು ಸಾಧಿಸಿದ ತಂಡವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎಂಎಸ್ ರವಿಪ್ರಕಾಶ, ಡೀನ್ ಡಾ. ರೇಣುಕಾಲತಾ ಹಾಗೂ ವಿಭಾಗದ ಮುಖ್ಯಸ್ಥರು ಅಭಿನಂದಿಸಿದ್ದಾರೆ.